ಬಿಜೆಪಿಯ ಹೊಸ ತಂಡದಿಂದ ಹೊರಗುಳಿದ ಅಮಿತ್ ಮಾಳವಿಯಾ, ಮೊದಲ ರಿಯಾಕ್ಷನ್!
ಪಟ್ಟಿಯನ್ನು ಸೋಮವಾರ ಬಿಡುಗಡೆ ಮಾಡಲಾಗಿದೆ. ಪ್ರಮುಖ ಜವಾಬ್ದಾರಿಗಳ ಪಟ್ಟಿಯನ್ನು ಪಕ್ಷದ ಕೇಂದ್ರ ಕಚೇರಿಯಿಂದ ಅಧಿಕೃತವಾಗಿ ಪ್ರಕಟಿಸಲಾಗಿದೆ.

ನವದೆಹಲಿ: ಉತ್ತರ ಪ್ರದೇಶ, ಪಂಜಾಬ್ ಸೇರಿದಂತೆ ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ನೂತನ ರಾಷ್ಟ್ರೀಯ ಪದಾಧಿಕಾರಿಗಳನ್ನು ನೇಮಕ ಮಾಡಿದ್ದಾರೆ.
ಪಕ್ಷದ ಡಿಜಿಟಲ್ ಕಾರ್ಯಾಚರಣೆಗಳಲ್ಲಿ ದೀರ್ಘಕಾಲದಿಂದ ಪ್ರಮುಖ ಪಾತ್ರ ವಹಿಸುತ್ತಿದ್ದ ಅಮಿತ್ ಮಾಳವಿಯಾ ಅವರು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರ ಹೊಸ ತಂಡದಲ್ಲಿ ಸ್ಥಾನ ಪಡೆದಿಲ್ಲ. ಅವರ ಬದಲಿಗೆ ಛತ್ತೀಸ್‌ಗಢದ ದೀಪಕ್ ಮಸ್ಕಿ ಅವರನ್ನು ಬಿಜೆಪಿಯ ಐಟಿ (IT) ವಿಭಾಗದ ರಾಷ್ಟ್ರೀಯ ಸಂಚಾಲಕರನ್ನಾಗಿ ನೇಮಿಸಲಾಗಿದೆ.
ಹೊಸ ರಾಷ್ಟ್ರೀಯ ತಂಡದ ಘೋಷಣೆಯ ನಂತರ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪ್ರತಿಕ್ರಿಯಿಸಿರುವ ಮಾಳವಿಯಾ, ಮಸ್ಕಿ ಹಾಗೂ ನೂತನವಾಗಿ ನೇಮಕಗೊಂಡ ಎಲ್ಲಾ ಬಿಜೆಪಿ ಪದಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಪಕ್ಷ ಮತ್ತಷ್ಟು ಎತ್ತರಕ್ಕೆ ಬೆಳೆಯಲು ಹಾಗೂ ಸಂದೇಶ, ಸಂಘಟನೆಯನ್ನು ದೇಶದ ಮೂಲೆಮೂಲೆಗೂ ತಲುಪಿಸಲು ಸಜ್ಜಾಗುತ್ತಿರುವ ನಿರ್ಣಾಯಕ ಹಂತದಲ್ಲಿ ಈ ನೇಮಕ ನಡೆದಿದೆ ಎಂದಿದ್ದಾರೆ.
ದೀಪಕ್ ಮಸ್ಕಿ ನೇತೃತ್ವದಲ್ಲಿ ಬಿಜೆಪಿಯ ಡಿಜಿಟಲ್ ಸಂವಹನವು ಹೊಸ ಮೈಲಿಗಲ್ಲುಗಳನ್ನು ಸಾಧಿಸಲಿದೆ ಮತ್ತು ದೃಢತೆ, ಸೃಜನಶೀಲತೆ ಹಾಗೂ ಸ್ಪಷ್ಟತೆಯೊಂದಿಗೆ ಭಾರತದ ಸಾರ್ವಜನಿಕ ಚರ್ಚೆಯನ್ನು ರೂಪಿಸುವುದನ್ನು ಮುಂದುವರಿಸಲಿದೆ ಎಂಬ ವಿಶ್ವಾಸ ನನಗಿದೆ ಎಂದು ಅವರು ಬರೆದುಕೊಂಡಿದ್ದಾರೆ.
ನನ್ನ ಹನ್ನೊಂದು ವರ್ಷಗಳ ನಾಯಕತ್ವದ ಅವಧಿಯಲ್ಲಿ, ನಿಮ್ಮಲ್ಲಿ ಅನೇಕರನ್ನು ಭೇಟಿಯಾಗುವ ಮತ್ತು ಸಂವಹನ ನಡೆಸುವ ಅವಕಾಶ ನನಗೆ ಸಿಕ್ಕಿದೆ. ಆ ಸಂವಹನ ಯಾವಾಗಲೂ ವಿಶೇಷವಾಗಿ ಉಳಿಯುತ್ತವೆ. ಮುಂದಿನ ದಿನಗಳಲ್ಲಿಯೂ ಪಕ್ಷಕ್ಕೆ ಮತ್ತು ಮುಂದಿನ ಟೀಂಗೆ ಇದೇ ರೀತಿಯ ಅಚಲವಾದ ಬೆಂಬಲವನ್ನು ಮುಂದುವರಿಸುತ್ತೀರಿ ಎಂದು ಭಾವಿಸುತ್ತೇನೆ. ನರೇಂದ್ರ ಮೋದಿ ಮತ್ತು ಬಿಜೆಪಿಯ ನಾಯಕತ್ವದಲ್ಲಿ ದೇಶವು ಮತ್ತಷ್ಟು ಹೊಸ ಎತ್ತರ ಹೇರಲು ಸಜ್ಜಾಗಿದೆ ಎಂದು ಅವರು ಬರೆದುಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



