ಮಹಾರಾಷ್ಟ್ರ: ಅಭಿಜೀತ್ ದೀಪ್ಕೆ ಪ್ರತಿಭಟನೆಯ ಎಚ್ಚರಿಕೆ; ಶಾಲಾ ಪ್ರಾಂಶುಪಾಲರ ಅಮಾನತು! Video
ಪ್ರಾಂಶುಪಾಲರ ವಿರುದ್ಧ ಗ್ರಾಮಸ್ಥರು ಐದು ಬಾರಿ ದೂರು ನೀಡಿದ್ದರೂ, ಸಂಘಟನೆಯು ಈ ವಿಷಯವನ್ನು ಸಾರ್ವಜನಿಕವಾಗಿ ಪ್ರಸ್ತಾಪಿಸುವವರೆಗೆ ಯಾವುದೇ ಕ್ರಮ ಕೈಗೊಂಡಿರಲಿಲ್ಲ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ತಿಳಿಸಿದ್ದಾರೆ.

ಮಹಾರಾಷ್ಟ್ರ: ಶಾಲೆಯೊಂದರ ಪ್ರಾಂಶುಪಾಲರು ಮದ್ಯಪಾನ ಮಾಡಿ ಶಾಲೆಗೆ ಬಂದಿದ್ದಾರೆ ಎಂಬ ಗ್ರಾಮಸ್ಥರ ದೂರಿನ ಮೇರೆಗೆ ಅವರನ್ನು ಅಮಾನತುಗೊಳಿಸಿರುವ ಘಟನೆ ಮಹಾರಾಷ್ಟ್ರದ ಹಿಂಗೋಲಿ ಜಿಲ್ಲೆಯಲ್ಲಿ ನಡೆದಿದೆ.
ಈ ವಿಚಾರವನ್ನು ಪ್ರಸ್ತಾಪಿಸಿದ ಕಾಕ್ರೋಚ್ ಜನತಾ ಪಾರ್ಟಿ' (CJP) ಪ್ರಾಂಶುಪಾಲರನ್ನು ತೆಗೆದುಹಾಕದಿದ್ದರೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದರು. ಇದಾದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.
ಪ್ರಾಂಶುಪಾಲರ ವಿರುದ್ಧ ಗ್ರಾಮಸ್ಥರು ಐದು ಬಾರಿ ದೂರು ನೀಡಿದ್ದರೂ, ಸಂಘಟನೆಯು ಈ ವಿಷಯವನ್ನು ಸಾರ್ವಜನಿಕವಾಗಿ ಪ್ರಸ್ತಾಪಿಸುವವರೆಗೆ ಯಾವುದೇ ಕ್ರಮ ಕೈಗೊಂಡಿರಲಿಲ್ಲ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ತಿಳಿಸಿದ್ದಾರೆ.
ಪ್ರಾಂಶುಪಾಲರ ಅಮಾನತು: ಲಿಂಬಾಲಾ ಗ್ರಾಮದ ಶಾಲೆಗೆ ಸಂಬಂಧಿಸಿದ ಪ್ರಕರಣ ಇದಾಗಿದೆ. ಗ್ರಾಮಸ್ಥರು ಪದೇ ಪದೇ ದೂರು ನೀಡಿದರೂ ಅಧಿಕಾರಿಗಳು ಕ್ರಮ ಕೈಗೊಂಡಿರಲಿಲ್ಲ. ಶನಿವಾರ ಸಿಜೆಪಿ ಈ ವಿಷಯವನ್ನು ಪ್ರಸ್ತಾಪಿಸಿ, ಪ್ರಾಂಶುಪಾಲರನ್ನು ತೆಗೆದುಹಾಕದಿದ್ದರೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿತ್ತು. ಈ ಎಚ್ಚರಿಕೆಯ ನಂತರ ಸೋಮವಾರ ಬೆಳಿಗ್ಗೆ ಪ್ರಾಂಶುಪಾಲರನ್ನು ಅಮಾನತುಗೊಳಿಸಲಾಯಿತು ಎಂದು ಅಭಿಜೀತ್ ದೀಪ್ಕೆ ಹೇಳಿದ್ದಾರೆ
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಅವರು ಪೋಸ್ಟ್ ಮಾಡಿದ್ದು, ಇದು ಹಿಂಗೋಲಿ ಜಿಲ್ಲೆಯ ಲಿಂಬಾಲಾ ಗ್ರಾಮಸ್ಥರಿಗೆ ಸಿಕ್ಕ "ಮೊದಲ ದೊಡ್ಡ ಗೆಲುವು" ಎಂದಿದ್ದಾರೆ. ಮದ್ಯಪಾನ ಮಾಡಿ ಶಾಲೆಗೆ ಬಂದಿದ್ದ ಪ್ರಾಂಶುಪಾಲರನ್ನು ಅಮಾನತುಗೊಳಿಸಲಾಗಿದೆ" ಎಂದು ಅವರು ಬರೆದುಕೊಂಡಿದ್ದಾರೆ.
ಈ ಗೆಲುವನ್ನು ಅಬ್ದುಲ್ ಮತ್ತು ಅವರ ತಂದೆಗೆ ಅರ್ಪಿಸಲು ಬಯಸುತ್ತೇನೆ." ಶಾಲೆಯ ಸ್ಥಿತಿಯನ್ನು ಸುಧಾರಿಸುವವರೆಗೂ ಈ ಅಭಿಯಾನ ನಿಲ್ಲುವುದಿಲ್ಲ. ಶಾಲೆಯನ್ನು ಸರಿಪಡಿಸಿಯೇ ತೀರುತ್ತೇವೆ ಎಂದು ದೀಪ್ಕೆ ಹೇಳಿದ್ದಾರೆ.
ಸಿಜೆಪಿ ಪ್ರಸ್ತುತ ದೇಶಾದ್ಯಂತ ಶಾಲೆ ಸರಿಪಡಿಸಿ ಅಭಿಯಾನ ನಡೆಸುತ್ತಿದೆ. ಗ್ರಾಮಸ್ಥರ ನಿರಂತರ ದೂರುಗಳು ಮತ್ತು ಸಿಜೆಪಿ ಈ ವಿಷಯವನ್ನು ಬಹಿರಂಗವಾಗಿ ಹೇಳಲು ನಿರ್ಧಾರ ತೆಗೆದುಕೊಂಡ ನಂತರ ಪ್ರಾಂಶುಪಾಲರ ವಿರುದ್ಧ ಈ ಕ್ರಮ ಕೈಗೊಳ್ಳಲಾಗಿದೆ ಎಂದು ದೀಪ್ಕೆ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



