ದೇಶ

ದೆಹಲಿಯಲ್ಲಿ ಸಿಎನ್‌ಜಿ ಸಿಲಿಂಡರ್ ಸ್ಫೋಟ: ಮೂವರು ಸಾವು, ಮೂವರಿಗೆ ಗಂಭೀರ ಗಾಯ!

ದೆಹಲಿಯ ಟಿಕ್ರಿ ಕಲನ್ ಮೆಟ್ರೋ ನಿಲ್ದಾಣದ ಬಳಿ ಈ ಘಟನೆ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಪಶ್ಚಿಮ ದೆಹಲಿಯ ಬಾಬಾ ಹರಿದಾಸ್ ಕಾಲೋನಿಯ ನಿವಾಸಿ ಮನೀಶ್ ಎಂದು ಗುರುತಿಸಲಾಗಿದೆ. ಅವರಿಗೆ 25 ವರ್ಷ ವಯಸ್ಸಾಗಿತ್ತು.

ದೆಹಲಿಯಲ್ಲಿ ಸಿಎನ್‌ಜಿ ಸಿಲಿಂಡರ್ ಸ್ಫೋಟ: ಮೂವರು ಸಾವು, ಮೂವರಿಗೆ ಗಂಭೀರ ಗಾಯ!
ಘಟನಾ ಸ್ಥಳದಲ್ಲಿ ಪೊಲೀಸರು
Published On :

ನವದೆಹಲಿ: ದೆಹಲಿಯ ಇಂಧನ ಕೇಂದ್ರವೊಂದರಲ್ಲಿ ಟ್ರಕ್‌ನ ಸಿಎನ್‌ಜಿ ಸಿಲಿಂಡರ್‌ಗೆ ಅನಿಲ ತುಂಬಿಸುವಾಗ ಸಂಭವಿಸಿದ ಸ್ಫೋಟದಲ್ಲಿ ಮೂವರು ಮೃತಪಟ್ಟಿದ್ದು, ಮೂರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ದೆಹಲಿಯ ಟಿಕ್ರಿ ಕಲನ್ ಮೆಟ್ರೋ ನಿಲ್ದಾಣದ ಬಳಿ ಈ ಘಟನೆ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಪಶ್ಚಿಮ ದೆಹಲಿಯ ಬಾಬಾ ಹರಿದಾಸ್ ಕಾಲೋನಿಯ ನಿವಾಸಿ ಮನೀಶ್, ಬ್ರಹ್ಮಜೀತ್, ಮತ್ತು ಸುನ್ನಿ ಎಂದು ಗುರುತಿಸಲಾಗಿದೆ. ಅವರಿಗೆ 25 ವರ್ಷ ವಯಸ್ಸಾಗಿತ್ತು.

ದೆಹಲಿಯ ಹೊರವಲಯ ಡಿಸಿಪಿ (DCP)ಅವರ ಪ್ರಕಾರ, ಗಾಯಗೊಂಡಿರುವ ಆರು ಮಂದಿಯ ಸ್ಥಿತಿ ಗಂಭೀರವಾಗಿದೆ. ಘಟನಾ ಸ್ಥಳದಲ್ಲಿ ಪೊಲೀಸ್ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಯ ದೊಡ್ಡ ತಂಡಗಳನ್ನು ನಿಯೋಜಿಸಲಾಗಿದೆ.

ಟ್ರಕ್‌ನ ಸಿಎನ್‌ಜಿ ಸಿಲಿಂಡರ್‌ಗೆ ಅನಿಲ ತುಂಬಿಸುತ್ತಿದ್ದ ವ್ಯಕ್ತಿಯೇ ಈ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಡಿಸಿಪಿ ಹೇಳಿದ್ದಾರೆ.

ಸ್ಫೋಟದ ಸಮಯದಲ್ಲಿ ಹತ್ತಿರದಲ್ಲೇ ನಿಂತಿದ್ದು ಗಾಯಗೊಂಡ ಆರು ಮಂದಿಯನ್ನು ಚಿಕಿತ್ಸೆಗಾಗಿ ತಕ್ಷಣವೇ ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತು ಎಂದು ಅಗ್ನಿಶಾಮಕ ದಳದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.