ಹಿಸಾರ್ ಜಿಲ್ಲಾ ನ್ಯಾಯಾಲಯದ ಹೊರಗೆ ಗ್ಯಾಂಗ್‌ಸ್ಟರ್ ವಿನೋದ್ ಪನ್ನುಗೆ ಗುಂಡಿಕ್ಕಿ ಹತ್ಯೆ
ಗುರುವಾರ ಮಧ್ಯಾಹ್ನ ಜಿಲ್ಲಾ ನ್ಯಾಯಾಲಯದ ಸಂಕೀರ್ಣದ ಮುಖ್ಯ ದ್ವಾರದಲ್ಲಿ ಗ್ಯಾಂಗ್‌ಸ್ಟರ್ ವಿನೋದ್ ಪನ್ನು ಅಲಿಯಾಸ್ ಕಾನಾ ಎಂಬಾತನ ಮೇಲೆ ಇಬ್ಬರು ದುಷ್ಕರ್ಮಿಗಳು ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಿಸಾರ್: ಗುರುವಾರ ಮಧ್ಯಾಹ್ನ ಜಿಲ್ಲಾ ನ್ಯಾಯಾಲಯದ ಸಂಕೀರ್ಣದ ಮುಖ್ಯ ದ್ವಾರದಲ್ಲಿ ಗ್ಯಾಂಗ್‌ಸ್ಟರ್ ವಿನೋದ್ ಪನ್ನು ಅಲಿಯಾಸ್ ಕಾನಾ ಎಂಬಾತನ ಮೇಲೆ ಇಬ್ಬರು ದುಷ್ಕರ್ಮಿಗಳು ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ನ್ಯಾಯಾಲಯದ ವಿಚಾರಣೆಯ ನಂತರ ಪನ್ನು ತನ್ನ ಸಹಚರರೊಂದಿಗೆ ಸಂಕೀರ್ಣದಿಂದ ಹೊರಬರುತ್ತಿದ್ದಾಗ ಆತನ ಮೇಲೆ ದಾಳಿ ನಡೆಸಲಾಗಿದೆ. ಹೊಂಚು ಹಾಕಿದ್ದ ಇಬ್ಬರು ದುಷ್ಕರ್ಮಿಗಳು ನ್ಯಾಯಾಲಯದ ದ್ವಾರದಲ್ಲಿ ಪನ್ನುವನ್ನು ಗುರಿಯಾಗಿಸಿಕೊಂಡು ಸತತ 10 ಗುಂಡುಗಳನ್ನು ಹಾರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯ ನಂತರ, ಸ್ಥಳದಲ್ಲಿ ದೊಡ್ಡ ಪೊಲೀಸ್ ಪಡೆ ನಿಯೋಜಿಸಲಾಗಿದ್ದು, ಪ್ರದೇಶವನ್ನು ಸುತ್ತುವರೆದಿದೆ. ಪನ್ನು ಹಿಸಾರ್ ಜಿಲ್ಲೆಯ ತುರಾನಾ ಗ್ರಾಮದ ನಿವಾಸಿಯಾಗಿದ್ದು ಆತನ ವಿರುದ್ಧ ಕೊಲೆ ಸೇರಿದಂತೆ 31 ಕ್ರಿಮಿನಲ್ ಪ್ರಕರಣಗಳು ದಾಖಲಾಗಿದೆ. ಆತನ ಅಪರಾಧ ಚಟುವಟಿಕೆಗಳು ದೆಹಲಿ-ಎನ್‌ಸಿಆರ್ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಹರಡಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



