ದೇಶ

Pakಗೆ ಭಾರತ ಬಿಗ್ ಶಾಕ್: ದೆಹಲಿಯಲ್ಲಿ ಬುಲ್ಡೋಜರ್ ಕ್ರಮ; ಪಾಕಿಸ್ತಾನ ರಾಯಭಾರ ಕಚೇರಿ ಮುಂಭಾಗದ ಅನಧಿಕೃತ ನಿರ್ಮಾಣಗಳು ಧ್ವಂಸ..! Video

ಭಾರತೀಯ ರಾಜತಾಂತ್ರಿಕರು ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ ಪಾಕಿಸ್ತಾನ ಅದನ್ನು ನಿರ್ಲಕ್ಷಿಸಿತ್ತು. ಇದಕ್ಕೆ ತಕ್ಕ ಉತ್ತರವನ್ನೇ ನೀಡಿರುವ ಭಾರತ, ಈಗ ದೆಹಲಿಯ ಚಾಣಕ್ಯಪುರಿ ರಾಜತಾಂತ್ರಿಕ ವಲಯದಲ್ಲಿರುವ ಪಾಕಿಸ್ತಾನ ರಾಯಭಾರ ಕಚೇರಿಯ ವೀಸಾ ವಿಭಾಗದ ಹೊರಗಿನ ಅತಿಕ್ರಮಣಗಳನ್ನು ತೆರವುಗೊಳಿಸಿದೆ.

Pakಗೆ ಭಾರತ ಬಿಗ್ ಶಾಕ್: ದೆಹಲಿಯಲ್ಲಿ ಬುಲ್ಡೋಜರ್ ಕ್ರಮ; ಪಾಕಿಸ್ತಾನ ರಾಯಭಾರ ಕಚೇರಿ ಮುಂಭಾಗದ ಅನಧಿಕೃತ ನಿರ್ಮಾಣಗಳು ಧ್ವಂಸ..! Video
ಸಂಗ್ರಹ ಚಿತ್ರ
Published On :

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿರುವ ಪಾಕಿಸ್ತಾನ ರಾಯಭಾರಿ ಕಚೇರಿ ಮುಂಭಾಗದ ಅನುಮೋದಿತ ಗಡಿ ವ್ಯಾಪ್ತಿಯನ್ನು ಮೀರಿ ನಿರ್ಮಿಸಲಾಗಿದ್ದ ಅನಧಿಕೃತ ರಚನೆಗಳ ವಿರುದ್ಧ ಭಾರತೀಯ ಅಧಿಕಾರಿಗಳು ಕಠಿಣ ಕ್ರಮ ಕೈಗೊಂಡಿದ್ದಾರೆ.

ಕೇವಲ ಮೂರು ದಿನಗಳ ಹಿಂದಷ್ಟೇ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಹೊರಗಿದ್ದ ರಕ್ಷಣಾ ಬ್ಯಾರಿಕೇಡ್‌ಗಳು ಮತ್ತು ಪಾರ್ಕಿಂಗ್ ಕಂಬಗಳನ್ನು ಪಾಕಿಸ್ತಾನದ ಅಧಿಕಾರಿಗಳು ಬಲವಂತವಾಗಿ ಮುರಿದು ಹಾಕಿದ್ದರು.

ಭಾರತೀಯ ರಾಜತಾಂತ್ರಿಕರು ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ ಪಾಕಿಸ್ತಾನ ಅದನ್ನು ನಿರ್ಲಕ್ಷಿಸಿತ್ತು. ಇದಕ್ಕೆ ತಕ್ಕ ಉತ್ತರವನ್ನೇ ನೀಡಿರುವ ಭಾರತ, ಈಗ ದೆಹಲಿಯ ಚಾಣಕ್ಯಪುರಿ ರಾಜತಾಂತ್ರಿಕ ವಲಯದಲ್ಲಿರುವ ಪಾಕಿಸ್ತಾನ ರಾಯಭಾರ ಕಚೇರಿಯ ವೀಸಾ ವಿಭಾಗದ ಹೊರಗಿನ ಅತಿಕ್ರಮಣಗಳನ್ನು ತೆರವುಗೊಳಿಸಿದೆ.

ಬುಲ್ಡೋಜರ್ ಬಳಿಕ ಕಾರ್ಯಾಚರಣೆ ನಡೆಸಿರುವ ಅಧಿಕಾರಿಗಳು ಸ್ಥಳದಲ್ಲಿದ್ದ ಟ್ರಾಫಿಕ್ ಬೊಲ್ಲಾರ್ಡ್‌ಗಳು ಮತ್ತು ಭದ್ರತಾ ಬ್ಯಾರಿಕೇಡ್‌ಗಳನ್ನು ತೆರವುಗೊಳಿಸಿದ್ದಾರೆ.

ಭಾರತೀಯ ಅಧಿಕಾರಿಗಳು ಪಾಕಿಸ್ತಾನ ಹೈಕಮಿಷನ್ ಹೊರಭಾಗದಲ್ಲಿದ್ದ ಅನಧಿಕೃತ ಕಟ್ಟಡಗಳು ಹಾಗೂ ಬ್ಯಾರಿಕೇಡ್‌ಗಳನ್ನು ಗುರುವಾರ ತೆರವುಗೊಳಿಸಿದ್ದಾರೆ. ಅನುಮೋದಿತ ಗಡಿ ವ್ಯಾಪ್ತಿಯನ್ನು ಮೀರಿ ಈ ನಿರ್ಮಾಣಗಳನ್ನು ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗುರುವಾರ ನಡೆದ ಈ ಕಾರ್ಯಾಚರಣೆಯಲ್ಲಿ ರಸ್ತೆಯಲ್ಲಿದ್ದ ಕ್ಯೂ ಮ್ಯಾನೇಜ್‌ಮೆಂಟ್ ವ್ಯವಸ್ಥೆಗಳು, ಬಿಳಿ ಲೋಹದ ಬೇಲಿಗಳು, ಕಾಂಕ್ರೀಟ್ ಚೌಕಟ್ಟುಗಳು ಮತ್ತು ಟ್ರಾಫಿಕ್ ನಿಯಂತ್ರಣದ ವಸ್ತುಗಳನ್ನು ನೆಲಸಮ ಮಾಡಲಾಗಿದೆ.

ಕಚೇರಿಯ ಮುಂಭಾಗದ ಸರ್ವಿಸ್ ರಸ್ತೆಯಲ್ಲಿ ಸಿಮೆಂಟ್ ಕಾಂಕ್ರೀಟ್ ಹಾಗೂ ಕಬ್ಬಿಣದ ಅವಶೇಷಗಳು ಬಿದ್ದಿರುವುದು ಕಂಡುಬಂದಿದೆ.

ವೀಸಾ ಅರ್ಜಿ ಸ್ವೀಕರಿಸುವ ಕಿಟಕಿಗಳ ಪಕ್ಕದಲ್ಲಿದ್ದ ತಾತ್ಕಾಲಿಕ ಶೀಟ್‌ಗಳು ಮತ್ತು ಗೋಡೆಗಳಿಗೆ ಹಾನಿಯಾಗಿದೆ. ಆದರೆ, ಪಾಕಿಸ್ತಾನ ಹೈಕಮಿಷನ್‌ನ ಮುಖ್ಯ ಕಟ್ಟಡ, ಅದರ ಬಿಳಿ ಗೋಡೆಗಳು ಮತ್ತು ರಾಷ್ಟ್ರೀಯ ಲಾಂಛನವಿರುವ ಮುಖ್ಯ ಗೇಟ್‌ಗಳಿಗೆ ಯಾವುದೇ ಹಾನಿ ಮಾಡಲಾಗಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.