ತೆಲಂಗಾಣ Hazelo Pharmaದಲ್ಲಿ ಭೀಕರ ಅಗ್ನಿ ಅವಘಡ; ಇಬ್ಬರ ದುರ್ಮರಣ, ಎಂಟು ಮಂದಿಗೆ ಗಂಭೀರ ಗಾಯ..!
ಕಾರ್ಖಾನೆಯೊಳಗೆ ರಾಸಾಯನಿಕ ರಿಯಾಕ್ಟರ್ ಸ್ಫೋಟಗೊಂಡ ಬಳಿಕ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ಘಟನೆಯಲ್ಲಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದು, ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ನಲ್ಗೊಂಡ: ತೆಲಂಗಾಣದ ಯಾದದ್ರಿ ಭುವನಗಿರಿ ಜಿಲ್ಲೆಯ ಭೂದನ್ ಪೋಚಂಪಲ್ಲಿ ಮಂಡಲದ ದೋತಿಗುಡೆಮ್‌ನಲ್ಲಿರುವ ಹ್ಯಾಜೆಲೊ ಫಾರ್ಮಾ ಕೈಗಾರಿಕಾ ಘಟಕದಲ್ಲಿ ಶುಕ್ರವಾರ ತಡರಾತ್ರಿ ಭೀಕರ ಅಗ್ನಿ ಅವಘಡ ಸಂಭವಿಸಿದೆ.
ಕಾರ್ಖಾನೆಯೊಳಗೆ ರಾಸಾಯನಿಕ ರಿಯಾಕ್ಟರ್ ಸ್ಫೋಟಗೊಂಡ ಬಳಿಕ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ಘಟನೆಯಲ್ಲಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದು, ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಸ್ಫೋಟದ ಭಾರೀ ಸದ್ದು ಕೇಳಿ ಆತಂಕಗೊಂಡ ದೋತಿಗುಡೆಮ್ ಮತ್ತು ಅಂತಮ್ಮಗುಡೆಮ್ ಗ್ರಾಮಗಳ ನಿವಾಸಿಗಳು ಭಯಭೀತರಾಗಿ ಮನೆಗಳಿಂದ ಹೊರಗೆ ಓಡಿ ಬಂದಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು.
ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತರಲು ಹರಸಾಹಸಪಟ್ಟರು. ಪೊಲೀಸರು ಗಾಯಗೊಂಡ ಕಾರ್ಮಿಕರನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.
ಇದೇ ಘಟಕದಲ್ಲಿ ಮೂರು ತಿಂಗಳ ಅವಧಿಯಲ್ಲಿ ಸಂಭವಿಸಿದ ಎರಡನೇ ದೊಡ್ಡ ಅಪಘಾತ ಇದಾಗಿದೆ ಎಂದು ಸ್ಥಳೀಯರು ಹಾಗೂ ಕಾರ್ಮಿಕ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.
ಕಾರ್ಖಾನೆ ಆಡಳಿತವು ಮೂಲಭೂತ ಸುರಕ್ಷತಾ ನಿಯಮಗಳನ್ನು ಪಾಲಿಸದಿರುವುದೇ ಪದೇಪದೇ ಇಂತಹ ಅವಘಡಗಳಿಗೆ ಕಾರಣವಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಈ ಸಂಬಂಧ ಭೂದಾನ್ ಪೋಚಂಪಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



