ಬೆಚ್ಚಿಬೀಳಿಸುವ ಅಪಘಾತ: ಪಿಕಪ್ ವ್ಯಾನ್‌ನಿಂದ ಕಬ್ಬಿಣದ ಸರಳುಗಳು ಬಿದ್ದು ಬೈಕ್ ಸವಾರ ಸಾವು! Video
ಮೃತರನ್ನು ಶೆರಿನ್ ಜಾನ್ ಎಂದು ಗುರುತಿಸಲಾಗಿದ್ದು, ತ್ರಿಶೂರ್‌ನ ಕುಟ್ಟನೆಲ್ಲೂರು ಪ್ರದೇಶದ HiLITE ಮಾಲ್ ಸಮೀಪ ಬೆಳಗ್ಗೆ 10.30ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ.

ತ್ರಿಶೂರ್: ಚಲಿಸುತ್ತಿದ್ದ ಪಿಕಪ್ ವ್ಯಾನ್‌ನಲ್ಲಿದ್ದ ಕಬ್ಬಿಣದ ಸರಳುಗಳು ಏಕಾಏಕಿ ಜಾರಿ ಬೈಕ್ ಸವಾರನ ಮೇಲೆ ಬಿದ್ದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟಿರುವ ಭೀಕರ ಘಟನೆ ಕೇರಳದ ತ್ರಿಶೂರ್ ಜಿಲ್ಲೆಯಲ್ಲಿ ಶನಿವಾರ ನಡೆದಿದೆ.
ಮೃತರನ್ನು ಶೆರಿನ್ ಜಾನ್ ಎಂದು ಗುರುತಿಸಲಾಗಿದ್ದು, ತ್ರಿಶೂರ್‌ನ ಕುಟ್ಟನೆಲ್ಲೂರು ಪ್ರದೇಶದ HiLITE ಮಾಲ್ ಸಮೀಪ ಬೆಳಗ್ಗೆ 10.30ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ.
ರಸ್ತೆಯಲ್ಲಿ ಸಾಗುತ್ತಿದ್ದ ಆಟೋ ರಿಕ್ಷಾವೊಂದು ಏಕಾಏಕಿ ಮಧ್ಯರಸ್ತೆಯಲ್ಲೇ ಯೂ-ಟರ್ನ್ ತೆಗೆದುಕೊಂಡಿದೆ. ಆಟೋದ ಹಿಂದೆ ಬೈಕ್‌ನಲ್ಲಿ ಬರುತ್ತಿದ್ದ ಶೆರಿನ್ ಜಾನ್ ಕೂಡ ತಕ್ಷಣ ಬ್ರೇಕ್ ಹಾಕಿ ನಿಲ್ಲಿಸಿದ್ದಾರೆ.
ಅವರ ಹಿಂದೆಯೇ ಕಬ್ಬಿಣದ ಸರಳುಗಳನ್ನು ಸಾಗಿಸುತ್ತಿದ್ದ ಪಿಕಪ್ ವ್ಯಾನ್ ಕೂಡ ಹಠಾತ್ ಬ್ರೇಕ್ ಹಾಕಬೇಕಾಯಿತು. ಈ ವೇಳೆ ಪಿಕಪ್ ವ್ಯಾನ್‌ನಲ್ಲಿದ್ದ ಕಬ್ಬಿಣದ ಸರಳುಗಳು ಮುಂದಕ್ಕೆ ಜಾರಿದ್ದು, ಶೆರಿನ್ ಅವರ ದೇಹದ ಮೇಲೆ ಬಿದ್ದಿವೆ ಎಂದು ಹೇಳಲಾಗಿದೆ.
ರಕ್ಷಿಸಲು ಸ್ಥಳೀಯರ ಹರಸಾಹಸ
ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳೀಯರು ತಕ್ಷಣ ಸ್ಥಳಕ್ಕೆ ಧಾವಿಸಿದ್ದಾರೆ. ದೇಹ ಮೇಲೆ ಬಿದ್ದಿದ್ದ ಕಬ್ಬಿಣದ ಸರಳುಗಳನ್ನು ತೆರವುಗೊಳಿಸಿ ಶೆರಿನ್ ಅವರನ್ನು ರಕ್ಷಿಸಲು ಸ್ಥಳೀಯರು ಹರಸಾಹಸಪಟ್ಟಿದ್ದಾರೆ.
ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶೆರಿನ್ ಮೃತಪಟ್ಟಿದ್ದಾರೆ.
ಪಿಕಪ್ ವ್ಯಾನ್ ಪೊಲೀಸರ ವಶಕ್ಕೆ
ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಕಬ್ಬಿಣದ ಸರಳುಗಳನ್ನು ಸಾಗಿಸುತ್ತಿದ್ದ ಪಿಕಪ್ ವ್ಯಾನ್‌ನ್ನು ವಶಕ್ಕೆ ಪಡೆದಿದ್ದಾರೆ. ಅಪಘಾತದ ಕುರಿತು ತನಿಖೆ ಮುಂದುವರಿದಿದೆ. ಮೃತ ಶೆರಿನ್ ಅವರ ದೇಹವನ್ನು ಜಿಲ್ಲಾ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



