ದೇಶ

ಸೀತಾಪುರದಲ್ಲಿ ವಿಚಿತ್ರ ಪ್ರಕರಣ: ಹಗಲು ಪ್ರೇಮಿ, ರಾತ್ರಿ ಗಂಡ ಬೇಕಂತೆ! ಇಬ್ಬರ ಜತೆ ಸಂಸಾರ ನಡೆಸಲು ಪೊಲೀಸ್ ಠಾಣೆ ಮೆಟ್ಟಿಲೇರಿದ ಮಹಿಳೆ! Video

ಹಗಲು ಸಮಯದಲ್ಲಿ ನನ್ನ ಪತಿ ಕೆಲಸಕ್ಕೆ ಹೋಗುತ್ತಾರೆ, ಆಗ ನನ್ನ ಪ್ರೇಮಿ ನನ್ನ ಜೊತೆ ಇರುತ್ತಾನೆ. ರಾತ್ರಿ ನನ್ನ ಪ್ರೇಮಿ ಕೆಲಸಕ್ಕೆ ಹೋಗುತ್ತಾನೆ, ಆಗ ನನ್ನ ಪತಿ ನನ್ನ ಜೊತೆ ಇರುತ್ತಾನೆ ಎಂದು ಮಹಿಳೆ ಪೊಲೀರಿಗೆ ತಿಳಿಸಿದ್ದಾರೆ.

ಸೀತಾಪುರದಲ್ಲಿ ವಿಚಿತ್ರ ಪ್ರಕರಣ: ಹಗಲು ಪ್ರೇಮಿ, ರಾತ್ರಿ ಗಂಡ ಬೇಕಂತೆ! ಇಬ್ಬರ ಜತೆ ಸಂಸಾರ ನಡೆಸಲು ಪೊಲೀಸ್ ಠಾಣೆ ಮೆಟ್ಟಿಲೇರಿದ ಮಹಿಳೆ! Video
ಪತಿ, ಪ್ರೇಮಿ ಜತೆ ಮಹಿಳೆ
Published On :

ಸೀತಾಪುರ: ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯ ಮಹಮೂದಾಬಾದ್ ಕೊತ್ವಾಲಿ ಪೊಲೀಸ್ ಠಾಣೆಗೆ ವಿಚಿತ್ರ ತ್ರಿಕೋನ ಪ್ರೇಮ ಪ್ರಕರಣವೊಂದು ಬಂದಿದ್ದು, ವಿವಾಹಿತ ಮಹಿಳೆಯೊಬ್ಬರು, ತನ್ನ ಪತಿ ಮತ್ತು ಆಕೆಯ ಪ್ರೇಮಿಯೊಂದಿಗೆ ವಾಸಿಸಲು ಅವಕಾಶ ನೀಡುವಂತೆ ಮನವಿ ಮಾಡಿದ್ದಾರೆ.

ಹಗಲು ಸಮಯದಲ್ಲಿ ನನ್ನ ಪತಿ ಕೆಲಸಕ್ಕೆ ಹೋಗುತ್ತಾರೆ, ಆಗ ನನ್ನ ಪ್ರೇಮಿ ನನ್ನ ಜೊತೆ ಇರುತ್ತಾನೆ. ರಾತ್ರಿ ನನ್ನ ಪ್ರೇಮಿ ಕೆಲಸಕ್ಕೆ ಹೋಗುತ್ತಾನೆ, ಆಗ ನನ್ನ ಪತಿ ನನ್ನ ಜೊತೆ ಇರುತ್ತಾನೆ ಎಂದು ಮಹಿಳೆ ಪೊಲೀರಿಗೆ ತಿಳಿಸಿದ್ದಾರೆ. ಇದನ್ನು ಕೇಳಿದ ಪೊಲೀಸರೇ ದಂಗಾಗಿ ಹೋಗಿದ್ದಾರೆ.

ಈ ಪ್ರಕರಣದಲ್ಲಿ ವಿಶೇಷವೆಂದರೆ ಮಹಿಳೆ ಮಾತ್ರವಲ್ಲದೆ, ಆಕೆಯ ಪತಿ ಮತ್ತು ಪ್ರೇಮಿಯೂ ಒಟ್ಟಾಗಿ ಪೊಲೀಸ್ ಠಾಣೆಗೆ ತೆರಳಿ ಲಿಖಿತ ಮನವಿ ಸಲ್ಲಿಸಿದ್ದಾರೆ. ಮೂವರೂ ಪರಸ್ಪರ ಒಪ್ಪಿಗೆಯೊಂದಿಗೆ ಒಟ್ಟಿಗೆ ವಾಸಿಸಲು ಬಯಸಿದ್ದಾರೆ. ಆದರೆ ಕುಟುಂಬದ ಸದಸ್ಯರ ವಿರೋಧದಿಂದ ಪೊಲೀಸರ ನೆರವು ಕೋರಿದ್ದಾರೆಂದು ವರದಿಯಾಗಿದೆ. ಆದರೆ ಪತಿಯ ತಂದೆ ಮತ್ತು ಆತನ ಇಬ್ಬರು ಸಹೋದರಿಯರಿಗೆ ಇದು ಒಪ್ಪಿಗೆಯಿಲ್ಲ. ಹೀಗಾಗಿ ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಹೀಗಾಗಿ ಮಹಿಳೆ ಶುಭಂ ವರ್ಮಾ, ಅವರ ಪತ್ನಿ ಅಂಜು ಮತ್ತು ನಿತಿನ್ ವಿಶ್ವಕರ್ಮ ಮೂವರೂ ಒಟ್ಟಿಗೆ ಕೊತ್ವಾಲಿ ಪೊಲೀಸ್ ಠಾಣೆಗೆ ಬಂದಿದ್ದಾರೆ.

ಮೂವರು ಸೇರಿ ಪೊಲೀಸ್ ಅಧಿಕಾರಿಗಳಿಗೆ ಲಿಖಿತ ಮನವಿಯೊಂದನ್ನ ಸಲ್ಲಿಸಿದ್ದು, ತಮ್ಮ ವೈಯಕ್ತಿಕ ಜೀವನದಲ್ಲಿ ಮಧ್ಯಪ್ರವೇಶ ಮಾಡದಂತೆ ಕುಟುಂಬದ ಸದಸ್ಯರಿಗೆ ಸೂಚಿಸುವಂತೆ ಮನವಿ ಮಾಡಿದ್ದಾರೆಂದು ವರದಿಯಾಗಿದೆ.

ಮೂವರೂ ಪರಸ್ಪರ ಒಪ್ಪಿಗೆಯ ಮೇರೆಗೆ ಒಂದೇ ಮನೆಯಲ್ಲಿ ವಾಸಿಸಲು ನಿರ್ಧರಿಸಿದ್ದೇವೆಂದು ಪೊಲೀಸರಿಗೆ ತಿಳಿಸಿದ್ದಾರೆ ಎನ್ನಲಾಗಿದೆ. ಕುಟುಂಬದ ವಿರೋಧದಿಂದ ಸಮಸ್ಯೆ ಎದುರಾಗಿರುವ ಹಿನ್ನೆಲೆಯಲ್ಲಿ ಪೊಲೀಸರು ತಮ್ಮೊಂದಿಗೆ ಮಾತನಾಡಿ ಸಮಸ್ಯೆ ಬಗೆಹರಿಸಬೇಕೆಂದು ಮೂವರು ಮನವಿ ಮಾಡಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.