'ಹಿಜಾಬ್ ಧರಿಸುವುದು ಇಸ್ಲಾಂ ಧರ್ಮದಲ್ಲಿ ಕಡ್ಡಾಯ ಆಚರಣೆಯಲ್ಲ': ಅಲಹಾಬಾದ್ ಹೈಕೋರ್ಟ್
ವೈಯಕ್ತಿಕ ಅಥವಾ ಧಾರ್ಮಿಕ ಆದ್ಯತೆಗಳ ಆಧಾರದ ಮೇಲೆ ವಿದ್ಯಾರ್ಥಿಗಳಿಗೆ ನಿಗದಿತ ಸಮವಸ್ತ್ರದಲ್ಲಿ ಬದಲಾವಣೆ ಮಾಡಿಕೊಳ್ಳಲು ಅವಕಾಶ ನೀಡುವುದರಿಂದ ಸಮವಸ್ತ್ರದ ಉದ್ದೇಶ ಹಾಗೂ ಶೈಕ್ಷಣಿಕ ಸಂಸ್ಥೆಯ ಶಿಸ್ತು ಹದಗೆಡಬಹುದು ಎಂದು ಪೀಠ ಅಭಿಪ್ರಾಯಪಟ್ಟಿದೆ.

ಶಾಲೆಯ ಸಮವಸ್ತ್ರ ನೀತಿಯನ್ನು ಪ್ರಶ್ನಿಸಿ ಹಿಜಾಬ್ (ತಲೆ ಸ್ಕಾರ್ಫ್) ಧರಿಸಲು ಅನುಮತಿ ನೀಡುವಂತೆ ಕೋರಿ ಪ್ರಯಾಗ್‌ರಾಜ್‌ನ ಟ್ಯಾಗೋರ್ ಪಬ್ಲಿಕ್ ಸ್ಕೂಲ್‌ನ 11ನೇ ತರಗತಿ ವಿದ್ಯಾರ್ಥಿನಿ ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ವಜಾಗೊಳಿಸಿದೆ.
ನ್ಯಾಯಮೂರ್ತಿಗಳಾದ ಜೆ.ಜೆ. ಮುನೀರ್ ಮತ್ತು ಇಂದರ್‌ಜಿತ್ ಶುಕ್ಲಾ ಅವರನ್ನೊಳಗೊಂಡ ದ್ವಿಸದಸ್ಯ ಪೀಠವು, ಅನುದಾನರಹಿತ ಖಾಸಗಿ ಶಿಕ್ಷಣ ಸಂಸ್ಥೆಗೆ ತನ್ನ ಆವರಣದಲ್ಲಿ ಸಮವಸ್ತ್ರ ನಿಯಮವನ್ನು ರೂಪಿಸಿ ಜಾರಿಗೊಳಿಸುವ ಅಧಿಕಾರವಿದೆ ಎಂದು ಅಭಿಪ್ರಾಯಪಟ್ಟಿದೆ.
ವೈಯಕ್ತಿಕ ಅಥವಾ ಧಾರ್ಮಿಕ ಆದ್ಯತೆಗಳ ಆಧಾರದ ಮೇಲೆ ವಿದ್ಯಾರ್ಥಿಗಳಿಗೆ ನಿಗದಿತ ಸಮವಸ್ತ್ರದಲ್ಲಿ ಬದಲಾವಣೆ ಮಾಡಿಕೊಳ್ಳಲು ಅವಕಾಶ ನೀಡುವುದರಿಂದ ಸಮವಸ್ತ್ರದ ಉದ್ದೇಶ ಹಾಗೂ ಶೈಕ್ಷಣಿಕ ಸಂಸ್ಥೆಯ ಶಿಸ್ತು ಹದಗೆಡಬಹುದು ಎಂದು ಪೀಠ ಅಭಿಪ್ರಾಯಪಟ್ಟಿದೆ.
ಇಸ್ಲಾಂನಲ್ಲಿ ತಲೆ ಸ್ಕಾರ್ಫ್ ಧರಿಸುವುದು ಅತ್ಯಗತ್ಯ ಧಾರ್ಮಿಕ ಆಚರಣೆ ಎಂಬುದನ್ನು ಸಾಬೀತುಪಡಿಸಲು ಅರ್ಜಿದಾರರು ಸಾಕಷ್ಟು ವಾಸ್ತವಾಂಶ ಅಥವಾ ಕಾನೂನು ಆಧಾರಗಳನ್ನು ಮಂಡಿಸಿಲ್ಲ ಎಂದು ಪೀಠ ಹೇಳಿದೆ. ಅಲ್ಲದೆ, ಶಾಲೆಯಲ್ಲಿ ಅದೇ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳೂ ಸೇರಿದಂತೆ ಇತರ ವಿದ್ಯಾರ್ಥಿನಿ ತಲೆ ಸ್ಕಾರ್ಫ್ ಧರಿಸುತ್ತಿಲ್ಲ ಎಂಬುದನ್ನೂ ನ್ಯಾಯಾಲಯ ಗಮನಿಸಿದೆ.
ಶಾಲಾ ಆಡಳಿತ ಮಂಡಳಿ, ಉತ್ತರ ಪ್ರದೇಶ ಸರ್ಕಾರ ಹಾಗೂ ಸಿಬಿಎಸ್‌ಇ ಅರ್ಜಿಯನ್ನು ವಿರೋಧಿಸಿದ್ದವು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



