ದೇಶ

ದೆಹಲಿ: ಫ್ರೆಂಡ್​ಶಿಪ್ ನಿರಾಕರಿಸಿದ್ದಕ್ಕೆ 21 ವರ್ಷದ ಮಾಡೆಲ್ ಮನೆಗೆ ನುಗ್ಗಿ ಹತ್ಯೆಗೈದ ಜಿಮ್ ಟ್ರೇನರ್!

ದೆಹಲಿಯ ತಿಲಕ್ ನಗರದ ನ್ಯೂ ಮಹಾವೀರ್ ನಗರ ಪ್ರದೇಶದಲ್ಲಿ ಬಾಡಿಗೆ ಮನೆಯಲ್ಲಿ ಒಬ್ಬಂಟಿಯಾಗಿ ವಾಸಿಸುತ್ತಿದ್ದ ಮಾಡೆಲ್‌, ಮುಸ್ಕಾನ್ ಅವರನ್ನು ಕೊಲೆ ಮಾಡಲಾಗಿದೆ.

ದೆಹಲಿ: ಫ್ರೆಂಡ್​ಶಿಪ್ ನಿರಾಕರಿಸಿದ್ದಕ್ಕೆ 21 ವರ್ಷದ ಮಾಡೆಲ್ ಮನೆಗೆ ನುಗ್ಗಿ ಹತ್ಯೆಗೈದ ಜಿಮ್ ಟ್ರೇನರ್!
ಮುಸ್ಕಾನ್
Published On :

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 21 ವರ್ಷದ ಮಾಡೆಲ್ ಮುಸ್ಕಾನ್ ಎಂಬ ಯುವತಿಯನ್ನು ಆಕೆಯ ಮನೆಯೊಳಗೆ ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ.

ದೆಹಲಿಯ ತಿಲಕ್ ನಗರದ ನ್ಯೂ ಮಹಾವೀರ್ ನಗರ ಪ್ರದೇಶದಲ್ಲಿ ಬಾಡಿಗೆ ಮನೆಯಲ್ಲಿ ಒಬ್ಬಂಟಿಯಾಗಿ ವಾಸಿಸುತ್ತಿದ್ದ ಮಾಡೆಲ್‌, ಮುಸ್ಕಾನ್ ಅವರನ್ನು ಕೊಲೆ ಮಾಡಿದ ಆರೋಪದ ಮೇಲೆ ಜಿಮ್ ಟ್ರೇನರ್ ಇಮ್ರಾನ್ ಅವರನ್ನು ಬಂಧಿಸಲಾಗಿದೆ.

ವಿದ್ಯಾರ್ಥಿನಿಯಾಗಿದ್ದ ಮುಸ್ಕಾನ್ ಅವರು ಮಾಡೆಲಿಂಗ್ ಅನ್ನು ಸಹ ಮಾಡುತ್ತಿದ್ದರು ಎನ್ನಲಾಗಿದೆ. ಮುಸ್ಕಾನ್ ಕೆಲವು ದಿನಗಳ ಹಿಂದಷ್ಟೇ ಆರೋಪಿಗೆ ಪರಿಚಿಯವಾಗಿದೆ. ಜಿಮ್‌ಗೆ ಹೋಗುತ್ತಿದ್ದಾಗ ಮುಸ್ಕಾನ್‌ಗೆ ಇಮ್ರಾನ್ ಪರಿಚಯವಾಗಿದೆ. ಅಲ್ಲದೇ ಭೇಟಿಯಾದಾಗಿನಿಂದಲೂ ಆಕೆಯೊಂದಿಗೆ ಸ್ನೇಹ ಬೆಳೆಸಲು ನಿರಂತರವಾಗಿ ಪ್ರಯತ್ನಿಸುತ್ತಿದ್ದ. ಇದೀಗ ಮನೆಯಲ್ಲಿ ಯಾರೂ ಇಲ್ಲದನ್ನು ತಿಳಿದು, ಮನೆಗೆ ನುಗ್ಗಿ ಕೊಲೆ ಮಾಡಿ, ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ಬಗ್ಗೆ ಮಾಹಿತಿ ಪಡೆದ ತಕ್ಷಣ ಪೊಲೀಸರು ಸ್ಥಳಕ್ಕೆ ಧಾವಿಸಿ, ತನಿಖೆ ಆರಂಭಿಸಿದೆ. ಆರೋಪಿಯನ್ನು ಪತ್ತೆಹಚ್ಚಲು ಮತ್ತು ಘಟನೆಯ ಬಗ್ಗೆ ತಿಳಿಯಲು ಹತ್ತಿರದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಈವರೆಗೂ ಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಸದ್ಯ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.