ಮಣಿಪುರದಲ್ಲಿ ಉಗ್ರರ ಅಟ್ಟಹಾಸ: ನಾಲ್ವರ ಸಾವು, ಒಬ್ಬ ನಾಪತ್ತೆ
ಮಣಿಪುರದ ಕಾಂಗ್‌ಪೊಕ್ಪಿ ಜಿಲ್ಲೆಯಲ್ಲಿ ಶಸ್ತ್ರಸಜ್ಜಿತ ಉಗ್ರರು ವಾಹನದ ಮೇಲೆ ಹೊಂಚುಹಾಕಿ ದಾಳಿ ನಡೆಸಿದ್ದು, ಲಿಯಾಂಗ್‌ಮೈ ನಾಗಾ ಸಮುದಾಯಕ್ಕೆ ಸೇರಿದ ನಾಲ್ವರು ಮೃತಪಟ್ಟಿದ್ದಾರೆ.

ಇಂಫಾಲ: ಮಣಿಪುರದಲ್ಲಿ ಮತ್ತೆ ಉಗ್ರರು ಅಟ್ಟಹಾಸ ಮೆರೆದಿದ್ದು, ವಾಹನದ ಮೇಲೆ ನಡೆದ ಭೀಕರ ದಾಳಿಯಲ್ಲಿ 4 ಮಂದಿ ಸಾವನ್ನಪ್ಪಿ ಓರ್ವ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಣಿಪುರದ ಕಾಂಗ್‌ಪೊಕ್ಪಿ ಜಿಲ್ಲೆಯಲ್ಲಿ ಶಸ್ತ್ರಸಜ್ಜಿತ ಉಗ್ರರು ವಾಹನದ ಮೇಲೆ ಹೊಂಚುಹಾಕಿ ದಾಳಿ ನಡೆಸಿದ್ದು, ಲಿಯಾಂಗ್‌ಮೈ ನಾಗಾ ಸಮುದಾಯಕ್ಕೆ ಸೇರಿದ ನಾಲ್ವರು ಮೃತಪಟ್ಟಿದ್ದಾರೆ. ಮತ್ತೊಬ್ಬ ವ್ಯಕ್ತಿ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ.
ಮೂಲಗಳ ಪ್ರಕಾರ ಮಕುಯಿ ಆಶಾಂಗ್ ಮತ್ತು ಥಬಂಬಾ ನಾಗಾ ನಡುವಿನ ನಿರ್ಜನ ಪ್ರದೇಶದಲ್ಲಿ ವಾಹನ ಸಾಗುತ್ತಿದ್ದ ವೇಳೆ ಉಗ್ರರು ದಾಳಿ ನಡೆಸಿದ್ದಾರೆ. ದಾಳಿಯ ತೀವ್ರತೆಗೆ ನಾಲ್ವರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೃತದೇಹಗಳನ್ನು ಸೆನಾಪತಿ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಯ ಬಳಿಕ ಪ್ರದೇಶದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಭದ್ರತಾ ಪಡೆಗಳು ಪರಿಸ್ಥಿತಿಯ ಮೇಲೆ ನಿಗಾ ವಹಿಸಿವೆ. ನಾಪತ್ತೆಯಾಗಿರುವ ವ್ಯಕ್ತಿಯ ಪತ್ತೆಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಅಂಗಡಿ-ಮುಂಗಟ್ಟು ಬಂದ್
ನಾಲ್ವರ ಹತ್ಯೆಯನ್ನು ಖಂಡಿಸಿ ನಾಗಾ ಪೀಪಲ್ಸ್ ಆರ್ಗನೈಸೇಷನ್ (NPO) ಸೆನಾಪತಿ ಜಿಲ್ಲಾ ಕೇಂದ್ರ ಪಟ್ಟಣದಲ್ಲಿನ ಅಂಗಡಿ-ಮುಂಗಟ್ಟು ಹಾಗೂ ವಾಣಿಜ್ಯ ಸಂಸ್ಥೆಗಳನ್ನು ಬಂದ್ ಮಾಡುವಂತೆ ಸೂಚಿಸಿದೆ. ಘಟನೆಯ ಹಿನ್ನೆಲೆಯಲ್ಲಿ ಪ್ರದೇಶದಲ್ಲಿ ಭದ್ರತೆ ಹೆಚ್ಚಿಸಲಾಗಿದ್ದು, ದಾಳಿಯ ಹಿಂದಿರುವ ಶಸ್ತ್ರಸಜ್ಜಿತ ಗುಂಪು ಹಾಗೂ ದಾಳಿಯ ಉದ್ದೇಶದ ಕುರಿತು ತನಿಖೆ ಮುಂದುವರಿದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



