ಕಾನ್ಪುರದಲ್ಲಿ ತರಬೇತಿ ವಿಮಾನ ಪತನ: ಕರ್ನಾಟಕದ ಪೈಲಟ್ ಅಭಿಷೇಕ್ ಸೇರಿ ಇಬ್ಬರು ಸಾವು; Video
ಗಾರ್ಗ್ ಏವಿಯೇಷನ್ ನಿರ್ವಹಿಸುತ್ತಿದ್ದ ಟೆಕ್ನಮ್ ವಿಮಾನವು ಇಂದು ಬೆಳಗ್ಗೆ 11.30 ರ ಸುಮಾರಿಗೆ ಟೇಕ್ ಆಫ್ ಆಗಿ ಸುಮಾರು 20 ನಿಮಿಷಗಳ ನಂತರ ಕತ್ರಿ ಪ್ರದೇಶದ ನಾಥಪೂರ್ವ ಗ್ರಾಮದ ಬಳಿ ಪತನಗೊಂಡಿದೆ ಎಂದು ಪೊಲೀಸ್ ಆಯುಕ್ತ ರಘುಬೀರ್ ಲಾಲ್ ಅವರು ಪಿಟಿಐಗೆ ತಿಳಿಸಿದ್ದಾರೆ.

ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಗಂಗಾ ನದಿಯ ದಡದಲ್ಲಿ ಗುರುವಾರ ತರಬೇತಿ ವಿಮಾನವೊಂದು ಪತನಗೊಂಡಿದ್ದು, ದುರಂತದಲ್ಲಿ ಕರ್ನಾಟಕ ಮೂಲದ ಪೈಲಟ್ ಸೇರಿದಂತೆ ಇಬ್ಬರು ಮೃತಪಟ್ಟಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಗಾರ್ಗ್ ಏವಿಯೇಷನ್ ನಿರ್ವಹಿಸುತ್ತಿದ್ದ ಟೆಕ್ನಮ್ ವಿಮಾನವು ಇಂದು ಬೆಳಗ್ಗೆ 11.30 ರ ಸುಮಾರಿಗೆ ಟೇಕ್ ಆಫ್ ಆಗಿ ಸುಮಾರು 20 ನಿಮಿಷಗಳ ನಂತರ ಕತ್ರಿ ಪ್ರದೇಶದ ನಾಥಪೂರ್ವ ಗ್ರಾಮದ ಬಳಿ ಪತನಗೊಂಡಿದೆ ಎಂದು ಪೊಲೀಸ್ ಆಯುಕ್ತ ರಘುಬೀರ್ ಲಾಲ್ ಅವರು ಪಿಟಿಐಗೆ ತಿಳಿಸಿದ್ದಾರೆ.
ಅಪಘಾತದಲ್ಲಿ ತರಬೇತುದಾರರಾಗಿದ್ದ ಗುಜರಾತ್ ಮೂಲದ ಸಚಿನ್ ಭಾಟಿಯಾ ಮತ್ತು ತರಬೇತಿ ಪಡೆಯುತ್ತಿದ್ದ ಕರ್ನಾಟಕದ ಅಭಿಷೇಕ್ ಪೂಜಾರಿ ಅವರು ಮೃತ ದುರ್ದೈವಿಗಳಾಗಿದ್ದಾರೆ.
ಮಾಹಿತಿ ತಿಳಿದ ಕೂಡಲೇ ಪೊಲೀಸ್ ಆಯುಕ್ತ ರಘುವೀರ್ ಲಾಲ್, ಜೆಸಿಪಿ ಸಂಕಲ್ಪ್ ಶರ್ಮಾ ಮತ್ತು ಕೇಂದ್ರ ಡಿಸಿಪಿ ಅತುಲ್ ಶ್ರೀವಾಸ್ತವ ಸೇರಿದಂತೆ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ನಡೆಸಿದರು.
ನಾಲ್ಕು ಆಸನಗಳ ವಿಮಾನ ಇದಾಗಿದ್ದು, ಇಬ್ಬರು ಸಿಬ್ಬಂದಿ ಗಾರ್ಗ್ ಏವಿಯೇಷನ್ ಟ್ರೈನಿಂಗ್ ಸೆಂಟರ್ನಿಂದ ಟೆಕ್ನಾಮ್ ವಿಮಾನದಲ್ಲಿ ಹಾರಾಟ ಆರಂಭಿಸಿದ್ದರು. ಇವರಿಬ್ಬರೂ ಒಟ್ಟಾರೆಯಾಗಿ 3,000 ಗಂಟೆಗಳ ಹಾರಾಟದ ಅನುಭವವನ್ನು ಹೊಂದಿದ್ದರು. ವಿಮಾನ ಪತನಕ್ಕೆ ಕಾರಣ ಏನು ಎಂಬ ಬಗ್ಗೆ ಹೆಚ್ಚಿನ ತಾಂತ್ರಿಕ ವಿವರಗಳನ್ನು ಸಂಗ್ರಹಿಸಲಾಗುತ್ತಿದೆ ಎಂದು ರಘುವೀರ್ ಲಾಲ್ ಅವರು ತಿಳಿಸಿದ್ದಾರೆ.
ನಾಗರಿಕ ವಿಮಾನಯಾನ ಸಚಿವಾಲಯದ ಪ್ರಕಾರ ವಿಮಾನ ಅಪಘಾತ ತನಿಖಾ ಬ್ಯೂರೋ(ಎಎಐಬಿ) ಅಪಘಾತದ ತನಿಖೆ ನಡೆಸುತ್ತದೆ.
ಅಪಘಾತದ ಸ್ಥಳದಲ್ಲಿ ಅವಶೇಷಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಯಾವುದಾದರೂ ವಸ್ತುವಿಗೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಆದಾಗ್ಯೂ ತನಿಖೆ ಪೂರ್ಣಗೊಂಡ ನಂತರವಷ್ಟೇ ಘಟನೆಯ ಸಂಪೂರ್ಣ ವಿವರಗಳು ತಿಳಿದು ಬರಲಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



