ದೇಶ

ಮಹಾರಾಷ್ಟ್ರದಲ್ಲಿ ಆಟೋ, ಟ್ಯಾಕ್ಸಿ ಚಾಲಕರು ಮರಾಠಿ ಕಲಿಯಲು ಒಂದು ವರ್ಷ ಕಾಲಾವಕಾಶ!

ರಾಜ್ಯದ ಅಧಿಕೃತ ಭಾಷೆಯ ಬಗ್ಗೆ ಅಗತ್ಯ ಜ್ಞಾನವಿಲ್ಲದ ಕಾರಣಕ್ಕಾಗಿ ಈ ಅವಧಿಯಲ್ಲಿ ಚಾಲಕರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲಾಗುವುದಿಲ್ಲ ಎಂದು ಅವರು ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ಆಟೋ, ಟ್ಯಾಕ್ಸಿ ಚಾಲಕರು ಮರಾಠಿ ಕಲಿಯಲು ಒಂದು ವರ್ಷ ಕಾಲಾವಕಾಶ!
ಸಾಂದರ್ಭಿಕ ಚಿತ್ರ
Published On :

ಮುಂಬೈ: ಮಹಾರಾಷ್ಟ್ರದಲ್ಲಿ ಆಟೋ, ಟ್ಯಾಕ್ಸಿ ಚಾಲಕರು ಮರಾಠಿ ಕಲಿಯಲು ಒಂದು ವರ್ಷದ ಕಾಲಾವಕಾಶ ನೀಡಲಾಗಿದೆ.

ಆಟೋ-ರಿಕ್ಷಾ ಮತ್ತು ಟ್ಯಾಕ್ಸಿ ಚಾಲಕರು ವ್ಯವಹಾರಕ್ಕೆ ಅಗತ್ಯವಿರುವ ಮಟ್ಟದ ಮರಾಠಿ ಭಾಷೆಯನ್ನು ಕಲಿಯಲು ಒಂದು ವರ್ಷದ ಕಾಲಾವಕಾಶ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಗುರುವಾರ ಘೋಷಿಸಿದ್ದಾರೆ.

ರಾಜ್ಯದ ಅಧಿಕೃತ ಭಾಷೆಯ ಬಗ್ಗೆ ಅಗತ್ಯ ಜ್ಞಾನವಿಲ್ಲದ ಕಾರಣಕ್ಕಾಗಿ ಈ ಅವಧಿಯಲ್ಲಿ ಚಾಲಕರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲಾಗುವುದಿಲ್ಲ ಎಂದು ಅವರು ಹೇಳಿದ್ದಾರೆ.

ಶಿವಸೇನೆಯ ಸಚಿವ ಪ್ರತಾಪ್ ಸರ್ನಾಯಕ್ ನೇತೃತ್ವದ ಸಾರಿಗೆ ಇಲಾಖೆಯು ಇತ್ತೀಚೆಗೆ ತಪಾಸಣಾ ಅಭಿಯಾನ ನಡೆಸಿ, ಮರಾಠಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಚಾಲಕರಿಗೆ ನೋಟಿಸ್‌ಗಳನ್ನು ನೀಡಿದ ಕೆಲವೇ ದಿನಗಳಲ್ಲಿ ಈ ಘೋಷಣೆ ಹೊರಬಿದ್ದಿದೆ.

ಹಾಜಿ ಅರ್ಫತ್ ಶೇಖ್ ನೇತೃತ್ವದಲ್ಲಿ ಆಟೋ-ರಿಕ್ಷಾ ಮತ್ತು ಟ್ಯಾಕ್ಸಿ ಚಾಲಕರ ಸಂಘಟನೆಗಳ ಪ್ರತಿನಿಧಿಗಳು ತಮ್ಮನ್ನು ಭೇಟಿಯಾಗಿದ್ದರು. ಚಾಲಕರು ಪ್ರಾದೇಶಿಕ ಭಾಷೆಯಾದ ಮರಾಠಿ ಭಾಷೆಯನ್ನು ಕಲಿಯಬೇಕು ಎಂಬ ನಿಯಮವನ್ನು ಅವರು ಸಂಪೂರ್ಣವಾಗಿ ಬೆಂಬಲಿಸಿದ್ದಾರೆ ಮತ್ತು ಅದನ್ನು ಕಲಿಯಲು ಸಿದ್ಧರಿದ್ದಾರೆ ಎಂದೂ ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.