ದೇಶ

ನೇಪಾಳ ಭೀಕರ ಪ್ರವಾಹದಲ್ಲಿ ಕೊಚ್ಚಿ ಹೋದವು ಒಂಬತ್ತು ಜಲವಿದ್ಯುತ್ ಕೇಂದ್ರಗಳು! Video

ನೇಪಾಳ ಪೊಲೀಸರು ಬಿಡುಗಡೆ ಮಾಡಿದ ಹೇಳಿಕೆಯ ಪ್ರಕಾರ, ಒಂಬತ್ತು ಜಿಲ್ಲೆಗಳಲ್ಲಿ ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ವಿವಿಧ ರಸ್ತೆ ವಿಭಾಗಗಳಲ್ಲಿ ಪ್ರವಾಹ ಮತ್ತು ಭೂಕುಸಿತಗಳು ಸಂಭವಿಸಿವೆ.

ನೇಪಾಳ ಭೀಕರ ಪ್ರವಾಹದಲ್ಲಿ ಕೊಚ್ಚಿ ಹೋದವು ಒಂಬತ್ತು ಜಲವಿದ್ಯುತ್ ಕೇಂದ್ರಗಳು! Video
ನೇಪಾಳ ಭೀಕರ ಪ್ರವಾಹ
Published On :

ಕಠ್ಮಂಡು: ಭಾರತದ ನೆರೆರಾಷ್ಟ್ರ ನೇಪಾಳದ ನುವಾಕೋಟ್ ಮತ್ತು ಧಾಡಿಂಗ್ ಜಿಲ್ಲೆಗಳಲ್ಲಿ ಸಂಭವಿಸಿದ ಹಠಾತ್ ಭೀಕರ ಪ್ರವಾಹದಲ್ಲಿ ಒಂಬತ್ತು ಜಲವಿದ್ಯುತ್ ಕೇಂದ್ರಗಳು ಕೊಚ್ಚಿ ಹೋಗಿವೆ.

ನೇಪಾಳ ಪೊಲೀಸರು ಬಿಡುಗಡೆ ಮಾಡಿದ ಹೇಳಿಕೆಯ ಪ್ರಕಾರ, ಒಂಬತ್ತು ಜಿಲ್ಲೆಗಳಲ್ಲಿ ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ವಿವಿಧ ರಸ್ತೆ ವಿಭಾಗಗಳಲ್ಲಿ ಪ್ರವಾಹ ಮತ್ತು ಭೂಕುಸಿತಗಳು ಸಂಭವಿಸಿವೆ. ಕೆಲವು ಸ್ಥಳಗಳಲ್ಲಿ, ಮಣ್ಣು ಮತ್ತು ಬಂಡೆಗಳು ಕುಸಿದ ಪರಿಣಾಮ ಹೆಲವು ಹೆದ್ದಾರಿಗಳು ಬಂದ್ ಆಗಿವೆ.

ಕಠ್ಮಂಡುವಿನ ನಾಗಧುಂಗಾದಿಂದ ಮುಗ್ಲಿಂಗ್‌ಗೆ ಹೋಗುವ ರಾಷ್ಟ್ರೀಯ ಹೆದ್ದಾರಿಯ ಒಂದು ಭಾಗವನ್ನು ಅನಿರ್ದಿಷ್ಟಾವಧಿಗೆ ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ.

ಹಠಾತ್ ಪ್ರವಾಹದಿಂದ ಒಂಬತ್ತು ಜಲವಿದ್ಯುತ್ ಕೇಂದ್ರಗಳು ಮತ್ತು 9ಕ್ಕೂ ಹೆಚ್ಚು ವಾಣಿಜ್ಯ ಬ್ಯಾಂಕುಗಳ ಶಾಖೆಗಳಪ ನೀರಿನಲ್ಲಿ ಕೊಚ್ಚಿ ಹೋಗಿವೆ.

ನೇಪಾಳದ ರಸುವಾ ಮತ್ತು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಸಂಭವಿಸಿದ ಭೀಕರ ಹಠಾತ್ ಪ್ರವಾಹದಲ್ಲಿ ಸಾವಿನ ಸಂಖ್ಯೆ 165ಕ್ಕೆ ಏರಿಕೆಯಾಗಿದ್ದು, ಕೈಲಾಸ ಮಾನಸ ಸರೋವರ ಯಾತ್ರೆಯಲ್ಲಿದ್ದ ಸುಮಾರು 300 ಭಾರತೀಯರು ಸೇರಿದಂತೆ 500 ವಿದೇಶಿ ಪ್ರಜೆಗಳು ನಾಪತ್ತೆಯಾಗಿದ್ದಾರೆ ಎಂದು ನೇಪಾಳದ ವಿದೇಶಾಂಗ ಸಚಿವ ಶಿಶಿರ್ ಖನಾಲ್ ತಿಳಿಸಿದ್ದಾರೆ.

ಕಠ್ಮಂಡುವಿನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಪ್ರವಾಹದಿಂದ ಬಾಧಿತರಾದ ಭಾರತೀಯರ ನೆರವು ಮತ್ತು ಮಾಹಿತಿಗಾಗಿ ತುರ್ತು ಸಹಾಯವಾಣಿ ಸಂಖ್ಯೆಗಳನ್ನು ಪ್ರಕಟಿಸಿದೆ. ಎಕ್ಸ್‌ನಲ್ಲಿ ಪ್ರಕಟಿಸಿರುವ ಮಾಹಿತಿಯಂತೆ, +977 985 131 6807 ಅಥವಾ +977 970 910 7500 ಸಂಖ್ಯೆಗೆ ಸಂಪರ್ಕಿಸಬಹುದು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.