ಛತ್ತೀಸ್ ಗಢ: ಲ್ಯಾಂಡಿಂಗ್ ವೇಳೆ ವಿಮಾನದ ಟೈರ್ ಸ್ಫೋಟ; 41 ಪ್ರಯಾಣಿಕರು ಸ್ವಲ್ಪದರಲ್ಲಿ ಪಾರು!
ಅಲಯನ್ಸ್ ಏರ್ ನಿರ್ವಹಿಸುತ್ತಿದ್ದ 9I613 ವಿಮಾನ ಬೆಳಿಗ್ಗೆ 11 ಗಂಟೆ ಸುಮಾರಿಗೆ ಲ್ಯಾಂಡಿಂಗ್ ಆಗುವಾಗ ಅದರ ಟೈರ್ ಸ್ಫೋಟಗೊಂಡಿದೆ.

ಬಿಲಾಸ್‌ಪುರ: ಛತ್ತೀಸ್ ಗಢದಲ್ಲಿ ಸಂಭಾವ್ಯ ದುರಂತವೊಂದು ತಪ್ಪಿದೆ. ಲ್ಯಾಂಡಿಂಗ್ ವೇಳೆ ವಿಮಾನದ ಟೈರ್ ಸ್ಫೋಟಗೊಂಡಿದ್ದು, ಕೂದಲೆಳೆ ಅಂತರದಲ್ಲಿ 41 ಪ್ರಯಾಣಿಕರು ಪಾರಾಗಿರುವ ಘಟನೆ ನಡೆದಿದೆ. ಶುಕ್ರವಾರ ದೆಹಲಿಯಿಂದ ಬಿಲಾಸ್‌ಪುರಕ್ಕೆ ತೆರಳುತ್ತಿದ್ದ ವಿಮಾನವೊಂದು ಉತ್ತರ ಛತ್ತೀಸ್‌ಗಢದ ಬಿಲಾಸ್‌ಪುರ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಆಗುವಾಗ ಈ ಘಟನೆ ನಡೆದಿದೆ.
ಅಲಯನ್ಸ್ ಏರ್ ನಿರ್ವಹಿಸುತ್ತಿದ್ದ 9I613 ವಿಮಾನ ಬೆಳಿಗ್ಗೆ 11 ಗಂಟೆ ಸುಮಾರಿಗೆ ಲ್ಯಾಂಡಿಂಗ್ ಆಗುವಾಗ ಅದರ ಟೈರ್ ಸ್ಫೋಟಗೊಂಡಿದೆ. ಆ ವಿಮಾನದಲ್ಲಿ 37 ಪ್ರಯಾಣಿಕರು ಮತ್ತು ನಾಲ್ವರು ಸಿಬ್ಬಂದಿ ಇದ್ದರು ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ವಿಮಾನ ಲ್ಯಾಂಡಿಂಗ್ ಆಗುವಾಗ ಅದರ ಎಡಭಾಗದ ಟೈರ್ ಸ್ಫೋಟಗೊಂಡಿದೆ. ಘಟನೆಯ ನಂತರ ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಸುರಕ್ಷಿತವಾಗಿ ಹೊರಗೆ ಕರೆತರಲಾಗಿದ್ದು, ರನ್‌ವೇಯಿಂದ ಟರ್ಮಿನಲ್ ಕಟ್ಟಡಕ್ಕೆ ಸ್ಥಳಾಂತರಿಸಲಾಯಿತು.
ಬಳಿಕ ಬಿಲಾಸ್‌ಪುರದಿಂದ ಮುಂದಿನ ಪ್ರಯಾಣಕ್ಕಾಗಿ ನಿಗದಿಯಾಗಿದ್ದ ವಿಮಾನದ ಹಾರಾಟವನ್ನು ವಿಮಾನಯಾನ ಸಂಸ್ಥೆಯು ರದ್ದುಗೊಳಿಸಿತು. ಘಟನೆಗೆ ಸಂಬಂಧಿಸಿದ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ ಎಂದು ಅವರು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



