ಆರೋಗ್ಯ ತಪಾಸಣೆ ವೇಳೆ 9ನೇ ತರಗತಿ ವಿದ್ಯಾರ್ಥಿನಿ ಗರ್ಭಿಣಿ ಪತ್ತೆ; ಮನೆಗೆ ಪಾಠ ಮಾಡಲು ಬಂದು ಹೀನ ಕೃತ್ಯ ಎಸಗಿದ ಶಿಕ್ಷಕನ ಬಂಧನ!
ಈ ವಾರದ ಆರಂಭದಲ್ಲಿ ಶಾಲೆಯಲ್ಲಿ ನಡೆಸಲಾದ ನಿಯಮಿತ ವೈದ್ಯಕೀಯ ಪರೀಕ್ಷೆಯಲ್ಲಿ ಬಾಲಕಿ ಐದು ತಿಂಗಳ ಗರ್ಭಿಣಿಯಾಗಿರುವು ತಿಳಿದುಬಂದಿದೆ.

ಬರಿಪಾದ: ಒಡಿಶಾದ ಮಯೂರ್‌ಭಂಜ್ ಜಿಲ್ಲೆಯಲ್ಲಿ ಶುಕ್ರವಾರ ವಸತಿ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿ, ಗರ್ಭಿಣಿ ಮಾಡಿದ ಆರೋಪದ ಮೇಲೆ ಖಾಸಗಿ ಶಿಕ್ಷಕರೊಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ವಾರದ ಆರಂಭದಲ್ಲಿ ಶಾಲೆಯಲ್ಲಿ ನಡೆಸಲಾದ ನಿಯಮಿತ ವೈದ್ಯಕೀಯ ಪರೀಕ್ಷೆಯಲ್ಲಿ ಬಾಲಕಿ ಐದು ತಿಂಗಳ ಗರ್ಭಿಣಿಯಾಗಿರುವು ತಿಳಿದುಬಂದಿದೆ. ನಂತರ ಆಕೆಯ ಪೋಷಕರಿಗೆ ಈ ವಿಷಯವನ್ನು ತಿಳಿಸಲಾಯಿತು ಎಂದು ಅವರು ಹೇಳಿದ್ದಾರೆ.
ಪೋಷಕರು ಬಾಲಕಿಯನ್ನು ವಿಚಾರಿಸಿದಾಗ, ಬೇಸಿಗೆ ರಜೆಯಲ್ಲಿ ಮನೆಗೆ ಪಾಠ ಮಾಡಲು ಬರುತ್ತಿದ್ದ ಶಿಕ್ಷಕನೇ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಮತ್ತು ವಿಷಯ ಯಾರಿಗೂ ಹೇಳದಂತೆ ಬೆದರಿಕೆ ಹಾಕಿರುವುದಾಗಿ ತಿಳಿಸಿದ್ದಾಳೆ. ನಂತರ ಪೋಷಕರು ಶಿಕ್ಷಕನ ವಿರುದ್ಧ ದೂರು ನೀಡಿದ್ದಾರೆ ಎಂದು ತನಿಖಾ ಅಧಿಕಾರಿ ತಿಳಿಸಿದ್ದಾರೆ.
ಗುರುವಾರ ದಾಖಲಿಸಿದ ದೂರಿನಲ್ಲಿ, ಬೇಸಿಗೆ ರಜೆಯಲ್ಲಿ ಮಗಳಿಗೆ ಮನೆ ಪಾಠ ಮಾಡಲು ಬರುತ್ತಿದ್ದ ಶಿಕ್ಷಕ ತಮ್ಮ ಮಗಳ ಮೇಲೆ ಅತ್ಯಾಚಾರ ಎಸಗಿದ್ದಾನೆ. ಮನೆಯಲ್ಲಿ ಅವಳು ಒಬ್ಬಂಟಿಯಾಗಿರುವಾಗ ಆಕೆಯನ್ನು ಬಳಸಿಕೊಂಡಿದ್ದಾನೆ. ಈ ಬಗ್ಗೆ ಯಾರಿಗಾದರೂ ಹೇಳಿದರೆ ಭೀಕರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದ್ದಾನೆ ಎಂದು ಪೋಷಕರು ತಿಳಿಸಿದ್ದಾರೆ.
ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದ್ದು, ಶಿಕ್ಷಕನನ್ನು ಬಂಧಿಸಲಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



