ಹೈಕೋರ್ಟ್ ಆದೇಶ ಉಲ್ಲಂಘನೆ: ಮಮತಾ ವಿರುದ್ಧ ಸ್ವಯಂಪ್ರೇರಿತವಾಗಿ FIR ದಾಖಲಿಸಿದ ಪೊಲೀಸರು; ಮಾಜಿ CMಗೆ ಬಿಗ್ ಶಾಕ್!
ಮಮತಾ ಬ್ಯಾನರ್ಜಿ ಹಾಗೂ ತೃಣಮೂಲ ಛತ್ರ ಪರಿಷತ್(ಟಿಎಂಸಿಪಿ) ಸಭೆಯ ಆಯೋಜಕರ ವಿರುದ್ಧ ಹೇಸ್ಟಿಂಗ್ಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕೋಲ್ಕತ್ತಾ: ಟಿಎಂಸಿಪಿ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದ ವೇಳೆ ಕಲ್ಕತ್ತಾ ಹೈಕೋರ್ಟ್ ವಿಧಿಸಿದ್ದ ಷರತ್ತುಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ವಿರುದ್ಧ ಕೋಲ್ಕತ್ತಾ ಪೊಲೀಸರು ಶನಿವಾರ ಸ್ವಯಂಪ್ರೇರಿತವಾಗಿ ಎಫ್ಐಆರ್ ದಾಖಲಿಸಿದ್ದಾರೆ.
ಮಮತಾ ಬ್ಯಾನರ್ಜಿ ಹಾಗೂ ತೃಣಮೂಲ ಛತ್ರ ಪರಿಷತ್(ಟಿಎಂಸಿಪಿ) ಸಭೆಯ ಆಯೋಜಕರ ವಿರುದ್ಧ ಹೇಸ್ಟಿಂಗ್ಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
"ಮಾಜಿ ಮುಖ್ಯಮಂತ್ರಿಗಳು ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿದ್ದಾರೆ ಎಂಬ ಆರೋಪದ ಮೇಲೆ ಎಫ್ಐಆರ್ ದಾಖಲಿಸಲಾಗಿದೆ. ಉಲ್ಲಂಘನೆಯಲ್ಲಿ ಭಾಗಿಯಾಗಿರುವ ಎಲ್ಲರ ಪಾತ್ರವನ್ನು ತನಿಖೆಯ ಸಮಯದಲ್ಲಿ ಪರಿಶೀಲಿಸಲಾಗುವುದು" ಎಂದು ಅವರು ಹೇಳಿದ್ದಾರೆ.
ಶುಕ್ರವಾರ ಸೆಂಟ್ರಲ್ ಕೋಲ್ಕತ್ತಾದ ಕ್ಯಾಥೆಡ್ರಲ್ ರಸ್ತೆಯಲ್ಲಿ TMCP ಸಭೆ ನಡೆಸಲು ನ್ಯಾಯಾಲಯ ವಿಧಿಸಿರುವ ಷರತ್ತುಗಳನ್ನು ಪರಿಶೀಲಿಸಿದ ನಂತರ ಈ ಪ್ರಕರಣ ದಾಖಲಿಸಲಾಗಿದೆ.
ಸಭೆಯಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ, ತಮ್ಮ ಬೆಂಬಲಿಗರ ವಿರುದ್ಧ "ಬಿಜೆಪಿಯ ಆಜ್ಞೆಯ ಮೇರೆಗೆ ನಡೆಸಲಾಗುತ್ತಿರುವ ಪೊಲೀಸ್ ದೌರ್ಜನ್ಯ" ವನ್ನು ತಡೆಯುವುದಾಗಿ ಪ್ರತಿಜ್ಞೆ ಮಾಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



