2026-27ನೇ ಸಾಲಿನ ಕೇಂದ್ರ ಬಜೆಟ್: ಸಚಿವ ಸಂಪುಟ ಸಭೆ ಮುಕ್ತಾಯ, ಬಜೆಟ್ ಪ್ರಸ್ತಾವಕ್ಕೆ ಅನುಮೋದನೆ
ಈ ಬಾರಿ ಮಂಡನೆ ಆಗುತ್ತಿರುವುದು ಮೋದಿ ಸರ್ಕಾರದ ಒಟ್ಟಾರೆ 15ನೇ ಬಜೆಟ್, ಮೋದಿ ಅವರ ಮೂರನೇ ಅವಧಿಯ ಎರಡನೇ ಪೂರ್ಣಾವಧಿ ಬಜೆಟ್ ಹಾಗೂ ನಿರ್ಮಲಾ ಸೀತಾರಾಮನ್ ಅವರು ಸತತವಾಗಿ ಮಂಡಿಸುತ್ತಿರುವ ಒಂಬತ್ತನೇ ಬಜೆಟ್ ಆಗಿದೆ.

ನವದೆಹಲಿ: ಕೇಂದ್ರ ಸಚಿವ ಸಂಪುಟ ಸಭೆ ಮುಕ್ತಾಯಗೊಂಡಿದ್ದು, 2026-27ನೇ ಸಾಲಿನ ಕೇಂದ್ರ ಬಜೆಟ್ ಪ್ರಸ್ತಾವಕ್ಕೆ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ದೊರೆತಿದೆ.
ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ ಮುಕ್ತಾಯವಾಗಿದ್ದು. ಕೇಂದ್ರ ಬಜೆಟ್ ಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಒಪ್ಪಿಗೆ ಪಡೆದಿದ್ದಾರೆ. ಇನ್ನು ಕೆಲವೇ ಕ್ಷಣಗಳಲ್ಲಿ ಲೋಕಸಭೆಯಲ್ಲಿ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡನೆ ಮಾಡಲಿದ್ದಾರೆ.
ಈ ಬಾರಿ ಮಂಡನೆ ಆಗುತ್ತಿರುವುದು ಮೋದಿ ಸರ್ಕಾರದ ಒಟ್ಟಾರೆ 15ನೇ ಬಜೆಟ್, ಮೋದಿ ಅವರ ಮೂರನೇ ಅವಧಿಯ ಎರಡನೇ ಪೂರ್ಣಾವಧಿ ಬಜೆಟ್ ಹಾಗೂ ನಿರ್ಮಲಾ ಸೀತಾರಾಮನ್ ಅವರು ಸತತವಾಗಿ ಮಂಡಿಸುತ್ತಿರುವ ಒಂಬತ್ತನೇ ಬಜೆಟ್ ಆಗಿದ್ದು, ಸಂಸತ್ತಿನಲ್ಲಿ ಇಂದು (ಭಾನುವಾರ) ಬೆಳಿಗ್ಗೆ 11ಕ್ಕೆ ಮಂಡನೆ ಆರಂಭವಾಗಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



