ದೇಶ

ಕೇಂದ್ರ ಬಜೆಟ್ 2026: ಅಮೆರಿಕದ ಸುಂಕ ಬೆದರಿಕೆ; 'ಚಬಹಾರ್' ಬಂದರಿಗೆ ಯಾವುದೇ ಹಣ ಮೀಸಲಿಟ್ಟಿಲ್ಲ!

ಕಳೆದ ಕೆಲವು ವರ್ಷಗಳಲ್ಲಿ ಇರಾನ್‌ನ ದಕ್ಷಿಣ ಕರಾವಳಿಯಲ್ಲಿರುವ ಸಿಸ್ತಾನ್-ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಮೆಗಾ ಸಂಪರ್ಕ ಯೋಜನೆಗೆ ವಾರ್ಷಿಕ 100 ಕೋಟಿ ರೂ. ಮೀಸಲಿಡಲಾಗಿತ್ತು.

ಕೇಂದ್ರ ಬಜೆಟ್ 2026: ಅಮೆರಿಕದ ಸುಂಕ ಬೆದರಿಕೆ; 'ಚಬಹಾರ್' ಬಂದರಿಗೆ ಯಾವುದೇ ಹಣ ಮೀಸಲಿಟ್ಟಿಲ್ಲ!
ಚಬಹಾರ್ ಬಂದರು
Published On :

ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಮಂಡಿಸಿದ ಬಜೆಟ್ ನಲ್ಲಿ ಇರಾನ್ ನ ಚಬಹಾರ್ ಬಂದರು ನಿರ್ಮಾಣಕ್ಕೆ ಯಾವುದೇ ಹಣವನ್ನು ಮೀಸಲಿಟ್ಟಿಲ್ಲ. ಇರಾನ್‌ನ ಮೇಲೆ ಅಮೆರಿಕದ ಹೊಸ ನಿರ್ಬಂಧಗಳ ಹಿನ್ನೆಲೆಯಲ್ಲಿ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.

ಕಳೆದ ಕೆಲವು ವರ್ಷಗಳಲ್ಲಿ ಇರಾನ್‌ನ ದಕ್ಷಿಣ ಕರಾವಳಿಯಲ್ಲಿರುವ ಸಿಸ್ತಾನ್-ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಮೆಗಾ ಸಂಪರ್ಕ ಯೋಜನೆಗೆ ವಾರ್ಷಿಕ 100 ಕೋಟಿ ರೂ. ಮೀಸಲಿಡಲಾಗಿತ್ತು. ಚಬಹಾರ್ ಬಂದರಿನ ಅಭಿವೃದ್ಧಿಯಲ್ಲಿ ಭಾರತ ಪ್ರಮುಖ ಪಾಲುದಾರ ರಾಷ್ಟ್ರವಾಗಿದೆ.

ಭಾರತವು 2024–25ರಲ್ಲಿ ಈ ಯೋಜನೆಗೆ 400 ಕೋಟಿ ರೂ. ಮೀಸಲಿಟ್ಟಿತ್ತು. ಬಳಿಕ 2025–26ರ ಬಜೆಟ್ ನಲ್ಲಿ ಅಂದಾಜು 100 ಕೋಟಿ, ತದನಂತರ ಅದನ್ನು 400 ಕೋಟಿಗೆ ಹೆಚ್ಚಿಸಿತ್ತು. ಆದರೆ 2026-27 ರಲ್ಲಿ ಯಾವುದೇ ಹಣವನ್ನು ಮೀಸಲಿಟ್ಟಿಲ್ಲ.

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಅಮೆರಿಕ, ಇರಾನ್ ಮೇಲೆ ಆರ್ಥಿಕ ನಿರ್ಬಂಧ ವಿಧಿಸಿತ್ತು. ಆದರೆ ಚಬಹಾರ್ ಬಂದರು ಯೋಜನೆಯಲ್ಲಿ ಭಾರತಕ್ಕೆ ಆರು ತಿಂಗಳ ವಿನಾಯಿತಿ ನೀಡಿತ್ತು. ಅದು ಏಪ್ರಿಲ್ 26ಕ್ಕೆ ಮುಕ್ತಾಯವಾಗಲಿದೆ.

ಚಬಹಾರ್ ಬಂದರು ನಿರ್ಮಾಣ ಯೋಜನೆಗೆ ಸಂಬಂಧಿಸಿದಂತೆ ಭಾರತ ಸರ್ಕಾರ ಅಮೆರಿಕದೊಂದಿಗೆ ಮಾತುಕತೆಯಲ್ಲಿ ನಿರತವಾಗಿದೆ ಎಂದು ಕಳೆದ ತಿಂಗಳು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದರು. ಟ್ರಂಪ್ ಆಡಳಿತವು ಇರಾನ್ ಜೊತೆಗೆ ವ್ಯಾಪಾರ ಮಾಡುವ ದೇಶಗಳ ಮೇಲೆ ಶೇಕಡಾ 25 ರಷ್ಟು ಹೆಚ್ಚುವರಿ ಸುಂಕವನ್ನು ಬೆದರಿಕೆ ಹಾಕಿದ ನಂತರ ಭಾರತವು ಯೋಜನೆಗೆ ಸಂಬಂಧಿಸಿದ ವಿವಿಧ ಆಯ್ಕೆಗಳನ್ನು ಪರಿಗಣಿಸುತ್ತಿದೆ ಎಂದು ಅವರು ತಿಳಿಸಿದ್ದರು.

ಇರಾನ್ ಜೊತೆಗೆ ಸಂಪರ್ಕ ಮತ್ತು ವ್ಯಾಪಾರ ಸಂಬಂಧಗಳನ್ನು ಹೆಚ್ಚಿಸಲು ಚಬಹಾರ್ ಬಂದರನ್ನು ಭಾರತ ಅಭಿವೃದ್ಧಿಪಡಿಸುತ್ತಿದೆ. ಚಬಹಾರ್ ಬಂದರನ್ನು ಅಂತಾರಾಷ್ಟ್ರೀಯ ಉತ್ತರ-ದಕ್ಷಿಣ ಸಾರಿಗೆ ಕಾರಿಡಾರ್ (INSTC)ನ ಅವಿಭಾಜ್ಯ ಅಂಗವನ್ನಾಗಿ ಮಾಡಲು ಎರಡೂ ದೇಶಗಳು ಪ್ರಯತ್ನಿಸುತ್ತಿವೆ.

INSTC ಭಾರತ, ಇರಾನ್, ಅಫ್ಘಾನಿಸ್ತಾನ, ಅರ್ಮೇನಿಯಾ, ಅಜರ್ಬೈಜಾನ್, ರಷ್ಯಾ, ಮಧ್ಯ ಏಷ್ಯಾ ಮತ್ತು ಯುರೋಪ್ ನಡುವೆ ಸರಕು ಸಾಗಣೆಗಾಗಿ 7,200-ಕಿಮೀ ಉದ್ದದ ಬಹು-ಮಾರ್ಗ ಸಾರಿಗೆ ಯೋಜನೆಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.