ರಾಜಸ್ಥಾನದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಸಾವು: ಕುಟುಂಬಸ್ಥರಿಂದ ವೈದ್ಯರ ಮೇಲೆ ಹಲ್ಲೆ; Video
ಇಂದೌಲಿ ಬಸಾಯಿ ನವಾಬ್ ಸಂಪುವಿನ ಮೂಲದ ಸಂತ್ರಸ್ತೆ ಬಬಿತಾ ಜನವರಿ 20 ರಂದು ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದು, ಅಂದೇ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದರು.

ರಾಜಸ್ಥಾನದ ಧೋಲ್ಪುರದ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದಾಗಿ 27 ವರ್ಷದ ಮಹಿಳೆ ಮೃತಪಟ್ಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿ ಆಕೆಯ ಕುಟುಂಬಸ್ಥರು ಹಲ್ಲೆ ನಡೆಸಿದ ಘಟನೆಯಾಗಿದೆ. ಹಲ್ಲೆಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಇಂದೌಲಿ ಬಸಾಯಿ ನವಾಬ್ ಸಂಪುವಿನ ಮೂಲದ ಸಂತ್ರಸ್ತೆ ಬಬಿತಾ ಜನವರಿ 20 ರಂದು ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದು, ಅಂದೇ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದರು. ಆದರೆ ಮನೆಗೆ ಬಂದ ತಕ್ಷಣ ಆರೋಗ್ಯ ಹದಗೆಡಲು ಆರಂಭಿಸಿದ್ದರಿಂದ ಅವರನ್ನು ಮತ್ತೆ ಆಸ್ಪತ್ರೆಗೆ ಮನೆಯವರು ಕರೆತಂದಿದ್ದರು.
ಚಿಕಿತ್ಸೆನೀಡುತ್ತಿದ್ದ ಸಮಯದಲ್ಲಿ ಮಹಿಳೆ ಮೃತಪಟ್ಟಿದ್ದರು. ಇದರಿಂದ ಮನೆಯವರು ಕೋಪಗೊಂಡು ಅವರಿಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯರ ಮೇಲೆ ಹಲ್ಲೆ ನಡೆಸಿದ್ದಾರೆ. ಇದರ ವೀಡಿಯೊ ವೈರಲ್ ಆಗಿದೆ. ಕನಿಷ್ಠ 10 ಜನರು ವೈದ್ಯರ ಮೇಲೆ ಹಲ್ಲೆ ನಡೆಸುತ್ತಿರುವುದನ್ನು ಕಾಣಬಹುದು.
ಘಟನೆ ನಂತರ ಆಸ್ಪತ್ರೆಯಿಂದ ಪೊಲೀಸರಿಗೆ ಕರೆ ಮಾಡಿದ್ದು ಅವರು ಬಂದು, ಕನಿಷ್ಠ ಆರು ಜನರನ್ನು ಬಂಧಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


