ದೇಶ

ಕೇಂದ್ರ ಬಜೆಟ್ 2026: ರೈತರ ಆದಾಯ ಹೆಚ್ಚಳಕ್ಕೆ ಕ್ರಮ!

ಗುಣಮಟ್ಟದ ಉದ್ಯೋಗಾವಕಾಶಗಳನ್ನು ಒದಗಿಸಲು ಪಶು ಸಂಗೋಪನಾ ಕ್ಷೇತ್ರದಲ್ಲಿ ಉದ್ಯಮ ಶೀಲತೆ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದರು.

ಕೇಂದ್ರ ಬಜೆಟ್ 2026: ರೈತರ ಆದಾಯ ಹೆಚ್ಚಳಕ್ಕೆ ಕ್ರಮ!
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
Published On :

ನವದೆಹಲಿ: 2026-27ನೇ ಸಾಲಿನ ಕೇಂದ್ರ ಬಜೆಟ್ ನಲ್ಲಿ ರೈತರ ಆದಾಯ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ತಿಳಿಸಿದರು.

ಲೋಕಸಭೆಯಲ್ಲಿ ಬಜೆಟ್ ಮಂಡಿಸಿದ ನಿರ್ಮಲಾ ಸೀತಾರಾಮನ್, ಮತ್ಸ್ಯೋದ್ಯಮ ಬಲಪಡಿಸಲು 500 ಜಲಾಶಯಗಳು ಮತ್ತು ಅಮೃತ ಸರೋವರಗಳ ಸಮಗ್ರ ಅಭಿವೃದ್ಧಿಗಾಗಿ ಉಪ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.

ಗುಣಮಟ್ಟದ ಉದ್ಯೋಗಾವಕಾಶಗಳನ್ನು ಒದಗಿಸಲು ಪಶು ಸಂಗೋಪನಾ ಕ್ಷೇತ್ರದಲ್ಲಿ ಉದ್ಯಮ ಶೀಲತೆ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ ಎಂದು ತಿಳಿಸಿದರು.

10 ಮಿಲಿಯನ್ ರೈತರು ಸೇರಿದಂತೆ ಒಟ್ಟು 30 ಮಿಲಿಯನ್ ಜನರಿಗೆ ಬೆಂಬಲ ನೀಡಲು ತೆಂಗು ಉತ್ಪಾದನೆ ಹೆಚ್ಚಿಸಲು ಮತ್ತು ಉತ್ಪಾದಕೆ ವೃದ್ದಿಸಲು ತೆಂಗು ಉತ್ತೇಜನ ಯೋಜನೆ ಜಾರಿಗೆ ತರಲಾಗುತ್ತಿದೆ ಎಂದು ಹೇಳಿದರು.

ಭಾರತೀಯ ಗೋಡಂಬಿ ಮತ್ತು ಭಾರತೀಯ ಕೋಕೋವನ್ನು 2030ರ ವೇಳೆಗೆ ಪ್ರೀಮಿಯಂ ಜಾಗತಿಕ ಬ್ರ್ಯಾಂಡ್ ಗಾಗಿ ಪರಿವರ್ತಿಸಲಾಗುವುದು, ಭಾರತೀಯ ಶ್ರೀಗಂಧದ ಪರಿಸರ ವ್ಯವಸ್ಥೆಯ ವೈಭವವನ್ನು ಮರು ಸ್ಥಾಪಿಸಲು ರಾಜ್ಯ ಸರ್ಕಾರಗಳೊಂದಿಗೆ ಪಾಲುದಾರಿಕೆ ಹೊಂದಲಾಗುವುದು ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.