ದೇಶ

'ಭಾರತ-ಯುಎಸ್ ವ್ಯಾಪಾರ ಒಪ್ಪಂದ ಶತಮಾನದ ಅತಿದೊಡ್ಡ ಘಟನೆ': ಎನ್‌ಡಿಎ ಸಂಸದೀಯ ಪಕ್ಷದ ಸಭೆಯಲ್ಲಿ ಪ್ರಧಾನಿ ಮೋದಿ ಸಂತಸ

ಭಾರತ ಮತ್ತು ಅಮೆರಿಕ ನಡುವಿನ ಈ ವ್ಯಾಪಾರ ಒಪ್ಪಂದದಡಿ, ಅಮೆರಿಕ ಭಾರತೀಯ ಸರಕುಗಳ ಮೇಲೆ ವಿಧಿಸಲಾಗಿದ್ದ ಪರಸ್ಪರ ತೆರಿಗೆಯನ್ನು ಪ್ರಸ್ತುತ 25 ಶೇಕಡದಿಂದ 18 ಶೇಕಡ ಇಳಿಸಲು ಒಪ್ಪಿಕೊಂಡಿದೆ.

'ಭಾರತ-ಯುಎಸ್ ವ್ಯಾಪಾರ ಒಪ್ಪಂದ ಶತಮಾನದ ಅತಿದೊಡ್ಡ ಘಟನೆ': ಎನ್‌ಡಿಎ ಸಂಸದೀಯ ಪಕ್ಷದ ಸಭೆಯಲ್ಲಿ ಪ್ರಧಾನಿ ಮೋದಿ ಸಂತಸ
ಪ್ರಧಾನಿ ನರೇಂದ್ರ ಮೋದಿ
Published On :

ನವದೆಹಲಿ: ಭಾರತ–ಅಮೆರಿಕ ವ್ಯಾಪಾರ ಒಪ್ಪಂದವನ್ನು “ಈ ಶತಮಾನದ ಅತಿದೊಡ್ಡ ಘಟನೆ” ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದ್ದಾರೆ. ಇದು ಭಾರತದ ಹೆಚ್ಚುತ್ತಿರುವ ಪ್ರತಿಷ್ಠೆ ಮತ್ತು ಜಾಗತಿಕ ವೇದಿಕೆಯಲ್ಲಿ ವೃದ್ಧಿಸುತ್ತಿರುವ ಪ್ರಭಾವವನ್ನು ಪ್ರತಿಬಿಂಬಿಸುತ್ತದೆ ಎಂದು ಅವರು ಹೇಳಿದ್ದಾರೆ.

ಭಾರತ ಮತ್ತು ಅಮೆರಿಕ ನಡುವಿನ ಈ ವ್ಯಾಪಾರ ಒಪ್ಪಂದದಡಿ, ಅಮೆರಿಕ ಭಾರತೀಯ ಸರಕುಗಳ ಮೇಲೆ ವಿಧಿಸಲಾಗಿದ್ದ ಪರಸ್ಪರ ತೆರಿಗೆಯನ್ನು ಪ್ರಸ್ತುತ 25 ಶೇಕಡದಿಂದ 18 ಶೇಕಡ ಇಳಿಸಲು ಒಪ್ಪಿಕೊಂಡಿದೆ.

ದೇಶೀಯ ರಾಜಕಾರಣದ ಕುರಿತು ಮಾತನಾಡಿದ ಪ್ರಧಾನಮಂತ್ರಿ, ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿಯ ಇತ್ತೀಚಿನ ಸಾಧನೆಯನ್ನು ಉಲ್ಲೇಖಿಸಿ ಪ್ರತಿಪಕ್ಷ ವಿರುದ್ಧ ಟೀಕಿಸಿದರು.

ಎನ್‌ಡಿಎ ಸಂಸದೀಯ ಪಕ್ಷದ ಸಭೆಯಲ್ಲಿ ಪ್ರಧಾನಿ ಮೋದಿ ಅವರಿಗೆ ಅಭಿನಂದನೆ

ಅಮೆರಿಕದೊಂದಿಗೆ ಕೈಗೂಡಿಸಿದ ವ್ಯಾಪಾರ ಒಪ್ಪಂದಕ್ಕಾಗಿ ಎನ್‌ಡಿಎ ಸಂಸದೀಯ ಪಕ್ಷದ ಸಭೆಯಲ್ಲಿ ಎನ್‌ಡಿಎ ಸಂಸದರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಅಭಿನಂದಿಸಿದರು.

‘ಈ ಶತಮಾನದ ಅತಿದೊಡ್ಡ ಘಟನೆ’: ಪ್ರಧಾನಿ ಮೋದಿ

ಇಂದು ದೆಹಲಿಯಲ್ಲಿ ನಡೆದ ಎನ್‌ಡಿಎ ಸಂಸದೀಯ ಪಕ್ಷದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಭಾರತವು ವಿಶ್ವ ವ್ಯವಹಾರಗಳಲ್ಲಿ ವೇಗವಾಗಿ ಪ್ರಮುಖ ಪಾತ್ರಧಾರಿಯಾಗಿ ಹೊರಹೊಮ್ಮುತ್ತಿದೆ ಮತ್ತು ಜಾಗತಿಕ ಸಮತೋಲನವನ್ನು ಕಾಪಾಡುವಲ್ಲಿ ಅದರ ಪಾತ್ರ ದಿನೇದಿನೇ ಅತ್ಯಂತ ಮಹತ್ವ ಪಡೆದುಕೊಳ್ಳುತ್ತಿದೆ ಎಂದರು.

“ಈ ಶತಮಾನದ ಅತಿದೊಡ್ಡ ಘಟನೆ ಎಂದರೆ ಭಾರತವು ಜಾಗತಿಕ ವೇದಿಕೆಯಲ್ಲಿ ನಿರ್ಣಾಯಕ ಶಕ್ತಿಯಾಗಿ ರೂಪುಗೊಳ್ಳುತ್ತಿರುವುದು,” ಎಂದು ಅವರು ಎನ್‌ಡಿಎ ಸಂಸದರಿಗೆ ತಿಳಿಸಿದರು.

ಪ್ರಧಾನಮಂತ್ರಿ ಮೋದಿ ಅವರು ಹಾಸ್ಯಭರಿತವಾಗಿ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ನಿರ್ಧಾರದಿಂದ “ಕೆಲವರು ತುಂಬಾ ಬೇಸರಗೊಂಡಿದ್ದಾರೆ” ಎಂದು ವಿರೋಧ ಪಕ್ಷದವರಿಗೆ ತಿರುಗೇಟು ನೀಡಿದರು. ಅವರ ಈ ಮಾತು ಪಕ್ಷದ ಸದಸ್ಯರಲ್ಲಿ ನಗು ಮೂಡಿಸಿತು. ಈ ಒಪ್ಪಂದವು ಭಾರತದ ಆರ್ಥಿಕತೆ ಮತ್ತು ರಫ್ತುಗಳಿಗೆ ತಂತ್ರಾತ್ಮಕವಾಗಿ ಎಷ್ಟು ಮಹತ್ವದ್ದಾಗಿದೆ ಎಂಬುದನ್ನು ಅವರು ಒತ್ತಿಹೇಳಿದರು.

ಭಾರತ–ಅಮೆರಿಕ ವ್ಯಾಪಾರ ಒಪ್ಪಂದ

ಭಾರತ ಮತ್ತು ಅಮೆರಿಕವು ನಿನ್ನೆ ಸೋಮವಾರ ಒಂದು ಐತಿಹಾಸಿಕ ವ್ಯಾಪಾರ ಒಪ್ಪಂದವನ್ನು ಅಂತಿಮಗೊಳಿಸಿದ್ದು, ಒಂದು ವರ್ಷ ಕಾಲ ಮುಂದುವರಿದ ತೀವ್ರ ತೆರಿಗೆ ವಿವಾದಕ್ಕೆ ಈ ಮೂಲಕ ತೆರೆ ಬಿದ್ದಿದೆ.

ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತೀಯ ರಫ್ತುಗಳ ಮೇಲೆ ವಿಧಿಸಲಾಗಿದ್ದ ಪರಸ್ಪರ ತೆರಿಗೆಯನ್ನು ಹಿಂದಿನ 25 ಶೇಕಡಾದಿಂದ 18 ಶೇಕಡಾಕ್ಕೆ ಇಳಿಸುವುದಾಗಿ ಘೋಷಿಸಿದರು. ಇದರಿಂದ ಭಾರತೀಯ ರಫ್ತುದಾರರಿಗೆ ಬಹುಕಾಲದ ನಿರೀಕ್ಷಿತ ಪರಿಹಾರ ದೊರಕಿದೆ.

ಡೊನಾಲ್ಡ್ ಟ್ರಂಪ್ ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿ ನಡುವಿನ ದೂರವಾಣಿ ಸಂಭಾಷಣೆಯ ನಂತರ ಈ ಮಹತ್ವದ ಬೆಳವಣಿಗೆ ದೃಢಪಟ್ಟಿದ್ದು, ಹಲವು ತಿಂಗಳುಗಳ ಸಂಘರ್ಷ ಬಳಿಕ ದ್ವಿಪಕ್ಷೀಯ ವ್ಯಾಪಾರ ಸಂಬಂಧಗಳಲ್ಲಿ ದೊಡ್ಡ ಮರುಹೊಂದಾಣಿಕೆಯನ್ನು ಸೂಚಿಸುತ್ತದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.