ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಬೆನ್ನಲ್ಲೇ NDA ಸಂಸದೀಯ ಸಭೆ: ಪ್ರಧಾನಿ ಮೋದಿಗೆ ಸನ್ಮಾನ; Video
ಸಭೆಗೆ ಆಗಮಿಸಿದ ಪ್ರಧಾನಿ ಮೋದಿಗೆ ಭರ್ಜರಿ ಸ್ವಾಗತ ದೊರೆಯಿತು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರು ಪ್ರಧಾನಮಂತ್ರಿಯನ್ನೂ, ಹಾಜರಿದ್ದ ಎಲ್ಲಾ ಎನ್ಡಿಎ ಸಂಸದರನ್ನು ಸ್ವಾಗತಿಸಿದರು.

ನವದೆಹಲಿ: ಭಾರತ–ಅಮೆರಿಕ ವ್ಯಾಪಾರ ಒಪ್ಪಂದ ಘೋಷಣೆಯಾದ ಬೆನ್ನಲ್ಲೇ ಇಂದು ಮಂಗಳವಾರ ಸಂಸತ್ ಅಧಿವೇಶನ ಆರಂಭಕ್ಕೂ ಮುನ್ನ ಸಂಸತ್ ಆವರಣದಲ್ಲಿ ನಡೆದ ಎನ್ಡಿಎ ಸಂಸದೀಯ ಪಕ್ಷದ ಸಭೆಯಲ್ಲಿ ಆಡಳಿತಾರೂಢ ಎನ್ಡಿಎ ಮೈತ್ರಿಕೂಟದ ಸಂಸದರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಸನ್ಮಾನಿಸಿದರು.
ಸಭೆಗೆ ಆಗಮಿಸಿದ ಪ್ರಧಾನಿ ಮೋದಿಗೆ ಭರ್ಜರಿ ಸ್ವಾಗತ ದೊರೆಯಿತು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರು ಪ್ರಧಾನಮಂತ್ರಿಯನ್ನೂ, ಹಾಜರಿದ್ದ ಎಲ್ಲಾ ಎನ್ಡಿಎ ಸಂಸದರನ್ನು ಸ್ವಾಗತಿಸಿದರು. ಇದು ಅಧಿವೇಶನದ ಅವಧಿಯಲ್ಲಿ ಮೈತ್ರಿಕೂಟದ ಬಲವಾದ ಏಕತೆಯನ್ನು ಎತ್ತಿ ತೋರಿಸಿತು.
ಎನ್ಡಿಎ ಸಂಸದರು ಸಂಸತ್ತಿನ ಎರಡೂ ಸದನಗಳಲ್ಲಿ ಬಜೆಟ್ ಅಧಿವೇಶನದ ಮುಂದಿನ ದಿನಗಳಲ್ಲಿ ಅನುಸರಿಸಬೇಕಾದ ತಂತ್ರದ ಕುರಿತು ಚರ್ಚೆ ನಡೆಸಿದರು.
ಈ ಅಧಿವೇಶನದಲ್ಲಿ ಸರ್ಕಾರ ಕೆಲವು ಮಸೂದೆಗಳನ್ನು ತರಲು ಸಿದ್ಧವಾಗಿದೆ. ಆದ್ದರಿಂದ ತಂತ್ರದಲ್ಲಿ ಏಕತೆ ಮತ್ತು ಏಕರೂಪತೆ ಅತ್ಯಂತ ಅಗತ್ಯವಾಗಿದೆ. ನಾವು ಚರ್ಚಿಸಿ, ಈಗಿರುವಂತೆ ಬದ್ಧತೆಯಿಂದ ಮುಂದುವರಿಯಲು ನಿರ್ಧರಿಸಿದ್ದೇವೆ ಎಂದು ಹೆಸರು ಬಹಿರಂಗಪಡಿಸಲು ಇಚ್ಛಿಸದ ಒಬ್ಬ ಎನ್ಡಿಎ ಸಂಸದರು ಹೇಳಿದರು.
ಭಾರತ–ಅಮೆರಿಕ ವ್ಯಾಪಾರ ಒಪ್ಪಂದ ಕುರಿತು ಪ್ರತಿಕ್ರಿಯಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರು, ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ಭಾರತದಲ್ಲಿ ಯುವಜನತೆಗೆ ಪ್ರತಿದಿನ ಹೊಸ ಅವಕಾಶಗಳು ತೆರೆದುಕೊಳ್ಳುತ್ತಿವೆ ಎಂದರು.
ಜಗತ್ತಿನ ಎರಡು ಅತ್ಯಂತ ಬಲಿಷ್ಠ ಪ್ರಜಾಸತ್ತಾತ್ಮಕ ರಾಷ್ಟ್ರಗಳಾದ ಭಾರತ ಮತ್ತು ಅಮೆರಿಕ ನಡುವಿನ ಸಂಬಂಧ ಗಾಢವಾಗುತ್ತಿರುವ ಪರಿಣಾಮ ಬಹಳ ಧನಾತ್ಮಕ ಮತ್ತು ದೂರಗಾಮಿ ಆಗಲಿದೆ ಎಂದು ಅವರು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



