ದೆಹಲಿ: ಹೆಲ್ಮೆಟ್ ನಿಂದ ಹಲ್ಲೆ ಮಾಡಿದ ಡೆಲಿವರಿ ಬಾಯ್ಸ್; ಉದ್ಯಮಿ ಹತ್ಯೆ; Video
ಮೃತರನ್ನು ಲಕ್ಷ್ಮಿ ನಗರದ ನಿವಾಸಿ ಶಿವಂ ಗುಪ್ತಾ ಎಂದು ಗುರುತಿಸಲಾಗಿದ್ದು, ಜನವರಿ 2 ರಂದು ಸ್ನೇಹಿತನೊಂದಿಗೆ ಕನ್ನಾಟ್ ಪ್ಲೇಸ್‌ಗೆ ಹೋಗಿದ್ದರು.

ನವದೆಹಲಿ: ಪೂರ್ವ ದೆಹಲಿಯಲ್ಲಿ 36 ವರ್ಷದ ಉದ್ಯಮಿಯೊಬ್ಬರನ್ನು ಹೆಲ್ಮೆಟ್ ಧರಿಸಿ ಬಂದ ಮೂವರು ಡೆಲಿವರಿ ಹುಡುಗರು ಹತ್ಯೆ ಮಾಡಿರುವ ಘಟನೆ ನಡೆದಿದೆ. ಜನವರಿ 2 ಮತ್ತು ಜನವರಿ 3 ರ ಮಧ್ಯರಾತ್ರಿ ಈ ಘಟನೆ ನಡೆದಿದ್ದು, ಪೊಲೀಸರು ಜನವರಿ 4 ರಂದು ಎಫ್‌ಐಆರ್ ದಾಖಲಿಸಿದ್ದಾರೆ.
ಮೃತರನ್ನು ಲಕ್ಷ್ಮಿ ನಗರದ ನಿವಾಸಿ ಶಿವಂ ಗುಪ್ತಾ ಎಂದು ಗುರುತಿಸಲಾಗಿದ್ದು, ಜನವರಿ 2 ರಂದು ಸ್ನೇಹಿತನೊಂದಿಗೆ ಕನ್ನಾಟ್ ಪ್ಲೇಸ್‌ಗೆ ಹೋಗಿದ್ದರು. ನಂತರ ವಾಪಾಸ್ ಬಂದ ಮೇಲೆ ಇ-ಬ್ಲಾಕ್ ಬಳಿ ಅವರ ಮತ್ತು ಕೆಲವು ಡೆಲಿವರಿ ಹುಡುಗರ ನಡುವೆ ಜಗಳ ನಡೆದಂತೆ ತೋರುತ್ತಿದೆ. ಈ ಸಮಯದಲ್ಲಿ ಅವರ ಮೇಲೆ ಹಲ್ಲೆ ನಡೆಸಿದ್ದಾರೆ.
ಜನವರಿ 3 ರಂದು ನಸುಕಿನ ಜಾವ 1.30 ರ ಸುಮಾರಿಗೆ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಬಂದಿದ್ದು, ರಸ್ತೆಯಲ್ಲಿ ರಕ್ತಸ್ರಾವವಾಗಿ ಬಿದ್ದಿರುವ ವ್ಯಕ್ತಿಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಎಫ್‌ಐಆರ್ ಪ್ರಕಾರ, ಬೈಕ್ ನಲ್ಲಿ ಬಂದ ಮೂವರು ವ್ಯಕ್ತಿಗಳು ಹೆಲ್ಮೆಟ್ ಧರಿಸಿ ಬಂದಿದ್ದು ಹಲ್ಲೆ ನಡೆಸಿ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಕರೆ ಮಾಡಿದವರು ಪೊಲೀಸರಿಗೆ ತಿಳಿಸಿದ್ದಾರೆ.
ಪೊಲೀಸರು ಸ್ಥಳಕ್ಕೆ ತಲುಪಿ ಸಿಸಿಟಿವಿ ದೃಶ್ಯಾವಳಿ ಪರಿಶೀಲಿಸಿದಾಗ ಘಟನೆಯಲ್ಲಿ ಮೂವರು ಭಾಗಿಯಾಗಿರುವುದು ಕಂಡುಬಂದಿದೆ.
ತೀವ್ರ ಗಾಯಗೊಂಡಿದ್ದ ಶಿವಂ ಅವರನ್ನು ಸುಚೇತಾ ಕೃಪ್ಲಾನಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಪಹರ್‌ಗಂಜ್‌ನಲ್ಲಿ ಎರಡು ಅಂಗಡಿಗಳನ್ನು ಹೊಂದಿರುವ ಅವರ ತಂದೆ ಅನಿಲ್ ಕಾಂತ್ ಗುಪ್ತಾ, ಶಿವಂನನ್ನು ಜನವರಿ 4 ರಂದು ಬೇರೆ ಆಸ್ಪತ್ರೆಗೆ ಸ್ಥಳಾಂತರಿಸಿ ಶಸ್ತ್ರಚಿಕಿತ್ಸೆಗೆ ಒಳಪಡಿಸಲಾಯಿತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಜನವರಿ 19ರಂದು ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


