ಎಂಜಿನ್‌ನಲ್ಲಿ ಬೆಂಕಿ: ಟರ್ಕಿಶ್ ಏರ್‌ಲೈನ್ಸ್ ವಿಮಾನ ಕೋಲ್ಕತ್ತಾದಲ್ಲಿ ತುರ್ತು ಭೂಸ್ಪರ್ಶ; ತಪ್ಪಿದ ದೊಡ್ಡ ಅನಾಹುತ
ಮುನ್ನೆಚ್ಚರಿಕೆಯಾಗಿ ರನ್‌ವೇ ಉದ್ದಕ್ಕೂ ಅಗ್ನಿಶಾಮಕ ದಳ ಮತ್ತು ರಕ್ಷಣಾ ತಂಡಗಳನ್ನು ನಿಯೋಜಿಸಲಾಯಿತು. ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಆಗಿದ್ದು, ತುರ್ತು ಸಿಬ್ಬಂದಿ ಬೆಂಕಿಯನ್ನು ನಂದಿಸಿದರು.

ಕೋಲ್ಕತ್ತಾ: 236 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಟರ್ಕಿಶ್ ಏರ್‌ಲೈನ್ಸ್ ವಿಮಾನದ ಬಲ ಎಂಜಿನ್‌ನಲ್ಲಿ ಬುಧವಾರ ಮಧ್ಯಾಹ್ನ ಬೆಂಕಿ ಕಾಣಿಸಿಕೊಂಡಿದ್ದು, ವಿಮಾನ ಕೋಲ್ಕತ್ತಾದ ನೇತಾಜಿ ಸುಭಾಷ್ ಚಂದ್ರ ಬೋಸ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.
ವಿಮಾನದ ಸಿಬ್ಬಂದಿ ಬಲ ಎಂಜಿನ್‌ನಿಂದ ಅಸಹಜ ಸೂಚನೆಗಳನ್ನು ಪತ್ತೆಹಚ್ಚಿದ ನಂತರ ಬೆಂಕಿ ಕಾಣಸಿಕೊಂಡಿದ್ದು, ತಕ್ಷಣ ಅಂತರರಾಷ್ಟ್ರೀಯ ಸೇವೆಯನ್ನು ನಿರ್ವಹಿಸುತ್ತಿದ್ದ ವೈಡ್-ಬಾಡಿ ವಿಮಾನವು ತುರ್ತು ಪರಿಸ್ಥಿತಿಯನ್ನು ಘೋಷಿಸಿದೆ.
ಮುನ್ನೆಚ್ಚರಿಕೆಯಾಗಿ ರನ್‌ವೇ ಉದ್ದಕ್ಕೂ ಅಗ್ನಿಶಾಮಕ ದಳ ಮತ್ತು ರಕ್ಷಣಾ ತಂಡಗಳನ್ನು ನಿಯೋಜಿಸಲಾಯಿತು. ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಆಗಿದ್ದು, ತುರ್ತು ಸಿಬ್ಬಂದಿ ಬೆಂಕಿಯನ್ನು ನಂದಿಸಿದರು ಮತ್ತು ಎಂಜಿನ್ ಸುತ್ತಲೂ ತಂಪಾಗಿಸುವ ಕಾರ್ಯಾಚರಣೆ ನಡೆಸಿದರು.
ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಪ್ರಮಾಣಿತ ಕಾರ್ಯವಿಧಾನಗಳ ಮೂಲಕ ಸುರಕ್ಷಿತವಾಗಿ ಸ್ಥಳಾಂತರಿಸಲಾಯಿತು ಮತ್ತು ಅದೃಷ್ಟವಶಾತ್ ಯಾರಿಗೂ ಯಾವುದೇ ಗಾಯಗಳಾಗಿಲ್ಲ.
ಎಲ್ಲಾ ಪ್ರಯಾಣಿಕರನ್ನು ಟರ್ಮಿನಲ್‌ಗೆ ಕರೆದೊಯ್ಯಲಾಯಿತು ಮತ್ತು ಅವರಿಗೆ ಅಗತ್ಯ ಸಹಾಯವನ್ನು ಒದಗಿಸಲಾಯಿತು. ವಿಮಾನಯಾನ ಸಂಸ್ಥೆಯು ಅಗತ್ಯವಿರುವಲ್ಲಿ ಮುಂದಿನ ಪ್ರಯಾಣ ಮತ್ತು ವಸತಿ ವ್ಯವಸ್ಥೆಗಳನ್ನು ಮಾಡಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



