ಹೊಸ ವ್ಯಾಪಾರ ಒಪ್ಪಂದ ಬೆನ್ನಲ್ಲೇ, ಡೊನಾಲ್ಡ್ ಟ್ರಂಪ್ ಗೆ ದೊಡ್ಡ ಶಾಕ್ ನೀಡಿದ ಭಾರತ!
ರಾಷ್ಟ್ರ ರಾಜಧಾನಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ MEA ವಕ್ತಾರ ರಣಧೀರ್ ಜೈಸ್ವಾಲ್, ಭಾರತದ ಇಂಧನ ವಿಚಾರಕ್ಕೆ ಸಂಬಂಧಿಸಿದ ನಿರ್ಧಾರಗಳು ರಾಷ್ಟ್ರೀಯ ಹಿತಾಸಕ್ತಿಯಿಂದ ಕೂಡಿರುತ್ತವೆ ಎಂದರು.

ನವದೆಹಲಿ: ಇತ್ತೀಚಿಗೆ ಅಮೆರಿಕ ಜೊತೆಗೆ ವ್ಯಾಪಾರ ಒಪ್ಪಂದ ಅಂತಿಮಗೊಂಡ ಬೆನ್ನಲ್ಲೇ ಡೊನಾಲ್ಡ್ ಟ್ರಂಪ್ ಗೆ ಭಾರತ ದೊಡ್ಡ ಶಾಕ್ ನೀಡಿದೆ. ರಷ್ಯಾದಿಂದ ತೈಲ ಖರೀದಿ ಸ್ಥಗಿತದ ಬಗ್ಗೆ ಟ್ರಂಪ್ ನೀಡಿರುವ ಹೇಳಿಕೆಯನ್ನು ತಳ್ಳಿಹಾಕಿದೆ.
ಹೆಚ್ಚಾಗುತ್ತಿರುವ ಜಾಗತಿಕ ತೈಲ ಬೇಡಿಕೆ ನಡುವೆ ತನ್ನ 1.4 ಬಿಲಿಯನ್ ಜನರಿಗೆ ಇಂಧನ ಭದ್ರತೆಯನ್ನು ಖಾತರಿಪಡಿಸುವುದು ಭಾರತ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಗುರುವಾರ ಪುನರುಚ್ಚರಿಸಿದೆ.
ರಾಷ್ಟ್ರ ರಾಜಧಾನಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ MEA ವಕ್ತಾರ ರಣಧೀರ್ ಜೈಸ್ವಾಲ್, ಭಾರತದ ಇಂಧನ ವಿಚಾರಕ್ಕೆ ಸಂಬಂಧಿಸಿದ ನಿರ್ಧಾರಗಳು ರಾಷ್ಟ್ರೀಯ ಹಿತಾಸಕ್ತಿಯಿಂದ ಕೂಡಿರುತ್ತವೆ ಎಂದರು.
"ಭಾರತದ ಇಂಧನ ಭದ್ರತೆ ಅಥವಾ ಸಂಪನ್ಮೂಲವನ್ನು ದೃಢೀಕರಿಸುವವರೆಗೆ, 1.4 ಶತಕೋಟಿ ಜನರಿಗೆ ಇಂಧನ ಭದ್ರತೆಯನ್ನು ಖಾತರಿಪಡಿಸುವುದು ಸರ್ಕಾರದ ಅತ್ಯುನ್ನತ ಆದ್ಯತೆಯಾಗಿದೆ ಎಂದು ಹಲವು ಸಂದರ್ಭಗಳಲ್ಲಿ ಹೇಳಿರುವುದಾಗಿ ತಿಳಿಸಿದರು.
ಸರ್ಕಾರದ ಕಾರ್ಯತಂತ್ರವನ್ನು ಮತ್ತಷ್ಟು ವಿವರಿಸಿದ ಜೈಸ್ವಾಲ್, ಹೆಚ್ಚುತ್ತಿರುವ ಜಾಗತಿಕ ಬೇಡಿಕೆ ಹಾಗೂ ವಸ್ತುನಿಷ್ಠ ಮಾರುಕಟ್ಟೆ ಪರಿಸ್ಥಿತಿಗಳಿಗೆ ಅನುಗುಣವಾಗಿ ನಮ್ಮ ಇಂಧನ ಮೂಲವನ್ನು ಖಾತ್ರಿಪಡಿಸುವುದು ನಮ್ಮ ಕಾರ್ಯತಂತ್ರವಾಗಿದೆ. ಭಾರತದ ಜನರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.
ಹೊಸ ವ್ಯಾಪಾರ ಒಪ್ಪಂದ ನಂತರ ಭಾರತ ರಷ್ಯಾದಿಂದ ತೈಲ ಖರೀದಿಸುವುದನ್ನು ನಿಲ್ಲಿಸುತ್ತದೆ ಮತ್ತು ಯುನೈಟೆಡ್ ಸ್ಟೇಟ್ಸ್ ಮತ್ತು ವೆನೆಜುವೆಲಾದಿಂದ ಹೆಚ್ಚುವರಿ ತೈಲವನ್ನು ಖರೀದಿಸುತ್ತದೆ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



