ಗೋವಾ ಬೀಚ್‌ಗಳಲ್ಲಿ ವಿದೇಶಿಯರೊಂದಿಗೆ ಬಲವಂತವಾಗಿ ಸೆಲ್ಫಿ ತೆಗೆದುಕೊಂಡರೆ ಸ್ಥಳದಲ್ಲೇ ಬಂಧನ!
ಬೀಚ್‌ಗಳಲ್ಲಿ ವಿದೇಶಿಯರೊಂದಿಗೆ ಅವರ ಒಪ್ಪಿಗೆಯಿಲ್ಲದೆ ಬಲವಂತವಾಗಿ ಸೆಲ್ಫಿ ತೆಗೆದುಕೊಳ್ಳುವುದು ಅಥವಾ ಫೋಟೋಗೆ ಒತ್ತಾಯಿಸುವುದು ಕಂಡುಬಂದರೆ ಅವರನ್ನು ಸ್ಥಳದಲ್ಲೇ ಬಂಧಿಸಲಾಗುವುದು ಎಂದು ಹಿರಿಯ ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.

ಪಣಜಿ: ಗೋವಾ ರಾಜ್ಯದ ಕಡಲತೀರಗಳಲ್ಲಿ ವಿದೇಶಿ ಪ್ರಜೆಗಳಿಗೆ ಕಿರುಕುಳ ನೀಡುವ ದೇಶಿ ಪ್ರವಾಸಿಗರ ವಿರುದ್ಧ ಗೋವಾ ಪೊಲೀಸರು ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.
ಬೀಚ್‌ಗಳಲ್ಲಿ ವಿದೇಶಿಯರೊಂದಿಗೆ ಅವರ ಒಪ್ಪಿಗೆಯಿಲ್ಲದೆ ಬಲವಂತವಾಗಿ ಸೆಲ್ಫಿ ತೆಗೆದುಕೊಳ್ಳುವುದು ಅಥವಾ ಫೋಟೋಗೆ ಒತ್ತಾಯಿಸುವುದು ಕಂಡುಬಂದರೆ ಅವರನ್ನು ಸ್ಥಳದಲ್ಲೇ ಬಂಧಿಸಲಾಗುವುದು ಎಂದು ಹಿರಿಯ ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.
ದೇಶೀಯ ಪ್ರವಾಸಿಗರು ವಿದೇಶಿ ಮಹಿಳೆಯರ ಚಿತ್ರಗಳನ್ನು ಕ್ಲಿಕ್ಕಿಸುವುದು ಮತ್ತು ಕಡಲತೀರಗಳಲ್ಲಿ ಸೆಲ್ಫಿ ತೆಗೆದುಕೊಳ್ಳಲು ಒತ್ತಾಯಿಸುವುದು ಸೇರಿದಂತೆ ಹಲವಾರು ಪ್ರಕರಣಗಳು ಬೆಳಕಿಗೆ ಬಂದ ನಂತರ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
ಉತ್ತರ ಗೋವಾದ ಕ್ಯಾಲಂಗುಟ್ ಪೊಲೀಸರು ಇತ್ತೀಚೆಗೆ ರಷ್ಯಾದ ಮಹಿಳೆಯೊಬ್ಬರಿಗೆ ಬೀಚ್‌ನಲ್ಲಿ ಕಿರುಕುಳ ನೀಡಿದ ಆರೋಪದ ಮೇಲೆ ಒಡಿಶಾ ಮೂಲದ ಇಬ್ಬರು ಪ್ರವಾಸಿಗರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಪೊಲೀಸರ ಪ್ರಕಾರ, ಈ ವಾರದ ಆರಂಭದಲ್ಲಿ ಕ್ಯಾಲಂಗುಟ್ ಬೀಚ್‌ನಲ್ಲಿ ಈ ಘಟನೆ ನಡೆದಿದ್ದು, ಆರೋಪಿಗಳಾದ ಆಕಾಶ್ ಮಿನಾಜ್(19) ಮತ್ತು ಧಯಾನ್ ಟಪ್ಪೊ(34) ವಿದೇಶಿ ಪ್ರವಾಸಿಗರೊಂದಿಗೆ ಬಲವಂತವಾಗಿ ಫೋಟೋ ಕ್ಲಿಕ್ಕಿಸಿ, ಅನುಚಿತವಾಗಿ ಸ್ಪರ್ಶಿಸಿದ್ದಾರೆ.
ದೇಶೀಯ ಪ್ರವಾಸಿಗರು ವಿದೇಶಿ ಮಹಿಳೆಯರ ಒಪ್ಪಿಗೆಯಿಲ್ಲದೆ ಅವರ ಛಾಯಾಚಿತ್ರಗಳನ್ನು ಕ್ಲಿಕ್ಕಿಸುವುದು ಅಥವಾ ಅವರೊಂದಿಗೆ ಬಲವಂತವಾಗಿ ಸೆಲ್ಫಿ ತೆಗೆದುಕೊಳ್ಳುವುದು ಕಂಡುಬಂದರೆ ಅವರನ್ನು ಸ್ಥಳದಲ್ಲೇ ಬಂಧಿಸಲಾಗುವುದು ಎಂದು ಹಿರಿಯ ಅಧಿಕಾರಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



