ತಿರುಪತಿ ಲಡ್ಡು ತಯಾರಿಕೆ ತುಪ್ಪದಲ್ಲಿ ‘ಬಾತ್‌ರೂಮ್ ಕ್ಲೀನಿಂಗ್ ಕೆಮಿಕಲ್ಸ್’ ಬಳಕೆ: ಚಂದ್ರಬಾಬು ನಾಯ್ಡು
ಕಲಬೆರಕೆ ತುಪ್ಪವನ್ನು ಶ್ರೀಶೈಲಂ ದೇವಸ್ಥಾನಕ್ಕೂ ಪೂರೈಸಲಾಗುತ್ತಿತ್ತು. ಇದಲ್ಲದೆ ಪ್ರಾಣಿಗಳ ಕೊಬ್ಬನ್ನೂ ಬಳಕೆ ಮಾಡಲಾಗುತ್ತಿತ್ತು ಎಂದು ರಾಷ್ಟ್ರೀಯ ಡೇರಿ ಅಭಿವೃದ್ಧಿ ಮಂಡಳಿ ವರದಿ ತಿಳಿಸಿರುವುದಾಗಿಯೂ ನಾಯ್ಡು ಹೇಳಿದರು.

ಅಮರಾವತಿ: ತಿರುಪತಿ ಲಡ್ಡು ಪ್ರಸಾದ ಕಲಬೆರಕೆ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ಲಡ್ಡುಗಳನ್ನು ತಯಾರಿಸಲು ಐದು ವರ್ಷ ಬಾತ್‌ರೂಮ್ ಸ್ವಚ್ಛಗೊಳಿಸಲು ಬಳಸುವ ರಾಸಾಯನಿಕ ಬೆರೆತಿದ್ದ ಕಲಬೆರಕೆ ತುಪ್ಪ ಬಳಕೆ ಮಾಡಲಾಗಿತ್ತು ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಆರೋಪಿಸಿದ್ದಾರೆ.
ಆಂಧ್ರದ ಕರ್ನೂಲು ಜಿಲ್ಲೆಯ ಕಲುಗೋಟಲ ಗ್ರಾಮದಲ್ಲಿ ನಡೆದ ಕಾರ್ಯ ಕ್ರಮದಲ್ಲಿ ಮಾತನಾಡಿದ ಚಂದ್ರಬಾಬು ನಾಯ್ಡು ಕಲಬೆರಕೆ ತುಪ್ಪವನ್ನು ಶ್ರೀಶೈಲಂ ದೇವಸ್ಥಾನಕ್ಕೂ ಪೂರೈಸಲಾಗುತ್ತಿತ್ತು. ಇದಲ್ಲದೆ ಪ್ರಾಣಿಗಳ ಕೊಬ್ಬನ್ನೂ ಬಳಕೆ ಮಾಡಲಾಗುತ್ತಿತ್ತು ಎಂದು ರಾಷ್ಟ್ರೀಯ ಡೇರಿ ಅಭಿವೃದ್ಧಿ ಮಂಡಳಿ ವರದಿ ತಿಳಿಸಿರುವುದಾಗಿಯೂ ನಾಯ್ಡು ಹೇಳಿದರು.
ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ತಿರುಪತಿಯಲ್ಲಿ ಲಡ್ಡು ತಯಾರಿಸಲು ಬಾತ್‌ರೂಮ್ ಸ್ವಚ್ಛಗೊಳಿಸಲು ಬಳಸುವ ರಾಸಾಯನಿಕಗಳು ಬೆರೆತಿದ್ದ ಕಲಬೆರಕೆ ತುಪ್ಪ ಬಳಕೆ ಮಾಡಲಾಗಿತ್ತು ಎಂದು ಚಂದ್ರಬಾಬು ನಾಯ್ಡು ಆರೋಪಿಸಿದ್ದಾರೆ.
ಹಿಂದಿನ ಸರ್ಕಾರ ಕಲಬೆರಕೆ ಲಡ್ಡು ಪ್ರಸಾದ ವನ್ನು ವಿತರಿಸುವ ಮೂಲಕ ವೆಂಕಟೇಶ್ವರ ಸ್ವಾಮಿಯ ಘನತೆ ಯನ್ನು ಕುಗ್ಗಿಸಲು ಪ್ರಯತ್ನಿಸಿದೆ. ವೈಎಸ್‌ಆರ್‌ಸಿಪಿ ಆಡಳಿತದ ಅವಧಿಯಲ್ಲಿ ಶ್ರೀಶೈಲ ದೇವಾಲಯಕ್ಕೂ ಕಲಬೆರಕೆ ತುಪ್ಪ ಪೂರೈಸಲಾಗಿತ್ತು. ಬಾತ್ ರೂಂ ಸ್ವಚ್ಛಗೊಳಿಸುವ ರಾಸಾಯನಿಕಗಳಿಂದ ತಯಾರಿಸಿದ ಕಲಬೆರಕೆ ತುಪ್ಪವನ್ನು ಲಡ್ಡು ತಯಾರಿಕೆಗೆ ಬಳಸಲಾಗಿತ್ತು. ಹಿಂದಿನ ಸರ್ಕಾರದ 5 ವರ್ಷದ ಅವಧಿಯಲ್ಲೂ ರಾಸಾಯನಿಕ ಬೆರೆತಿದ್ದ ತುಪ್ಪವನ್ನು ಬಳಸಲಾಗಿತ್ತು ಎಂದಿದ್ದಾರೆ.
ಸಸ್ಯ ಜನ್ಯ ರಾಸಾಯನಿಕಗಳು ದುಬಾರಿ, ಆದರೆ ಪ್ರಾಣಿಗಳ ಕೊಬ್ಬಿನ ಬೆಲೆ ಕಡಿಮೆ. ಪ್ರಾಣಿಗಳ ಕೊಬ್ಬನ್ನು ತುಪ್ಪದಲ್ಲಿ ಬಳಸಲಾಗಿತ್ತು ಎಂದು ರಾಷ್ಟ್ರೀಯ ಡೈರಿ ಅಭಿವೃದ್ಧಿ ಮಂಡಳಿ ವರದಿ ನೀಡಿತ್ತು. ವೆಂಕಟೇಶ್ವರ ಸ್ವಾಮಿಯ ಪಾವಿತ್ರತೆಯನ್ನು ಗಮನದಲ್ಲಿ ಇಟ್ಟುಕೊಂಡು ನಾವು ಈ ವಿಚಾರವಾಗಿ ಹೆಚ್ಚು ಮಾತನಾಡಬಾರದು ಎಂದು ಚಂದ್ರಬಾಬು ನಾಯ್ಡು ತಿಳಿಸಿದರು.
ಪ್ರಾಣಿಜನ್ಯ ಕೊಬ್ಬಿನ ಕಲಬೆರಕೆ ನಡೆದಿಲ್ಲ ಎಂದು ಸಿಬಿಐ ನೇತೃತ್ವದ ಎಸ್ಐಟಿ ಕ್ಲೀನ್ ಚಿಟ್ ನೀಡಿರುವುದಾಗಿ ವೈಎಸ್‌ಆರ್‌ಸಿಪಿ ನಾಯಕರು ವಾದಿಸುತ್ತಿದ್ದಾರೆ. ಆದರೆ ಕಲಬೆರಕೆ ನಡೆದಿದೆ ಎಂದು ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರ ಚಿಕ್ಕಪ್ಪ ವೈ.ವಿ. ಸುಬ್ಬಾರೆಡ್ಡಿ ಅವರೆ ಹೇಳಿದ್ದಾರೆ.
ಕಲಬೆರಕೆ ತುಪ್ಪ ಬಳಕೆ ಮಾಡಿದ ಪ್ರಸಾದದಿಂದ ತಿರುಪತಿಯ ದೇವಾಲಯದ ಪಾವಿತ್ರ್ಯತೆಗೆ ಧಕ್ಕೆ ಉಂಟಾಗಿದೆ. ಇದನ್ನು ಸರಿಪಡಿಸಲು ನಾವು ಪ್ರಯತ್ನಿಸುತ್ತಿದ್ದೇವೆ" ಎಂದು ನಾಯ್ಡು ತಿಳಿಸಿದರು.
ಈ ಮಧ್ಯೆ, ವೈಎಸ್‌ಆರ್‌ಸಿಪಿ, ಟಿಡಿಪಿ ಮತ್ತು ಅದರ ಮುಖ್ಯಸ್ಥ ಸಿಎಂ ನಾಯ್ಡು ರಾಜಕೀಯ ಲಾಭಕ್ಕಾಗಿ ಕೋಮು ಭಾವನೆಗಳನ್ನು ಕೆರಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಪ್ರತಿಕ್ರಿಯಿಸಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



