ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಪಾಕಿಸ್ತಾನದಲ್ಲಿ ತರಬೇತಿ ಪಡೆದಿದ್ದಾರೆ: ಅಸ್ಸಾಂ ಸಿಎಂ ಹಿಮಂತ ಶರ್ಮ
ಅವರು ಎರಡು ಭಾರತೀಯ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿದ್ದಾಗ ಒಂಬತ್ತು ಬಾರಿ ಪಾಕಿಸ್ತಾನಕ್ಕೆ ಹೋಗಿದ್ದರು ಎಂದು ಆರೋಪಿಸಿದ್ದಾರೆ.

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮ ಭಾನುವಾರ ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಅವರು ಅಧಿಕಾರಿಗಳಿಗೆ ತಿಳಿಸದೆ 2013 ರಲ್ಲಿ ಪಾಕಿಸ್ತಾನಕ್ಕೆ ರಹಸ್ಯವಾಗಿ ಭೇಟಿ ನೀಡಿದ್ದರು ಎಂದು ಆರೋಪಿಸಿದ್ದಾರೆ. ಅಲ್ಲದೆ ಅವರು ಅಲ್ಲಿ ಒಂದು ರೀತಿಯ ತರಬೇತಿ ಪಡೆದಿದ್ದಾರೆ ಎಂದು ಶಂಕಿಸಲಾಗಿದೆ ಎಂದು ಆರೋಪ ಮಾಡಿದ್ದಾರೆ.
ಇಂದು ಗುವಾಹಟಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಹಿಮಂತ ಬಿಸ್ವಾ ಶರ್ಮ, ಕಾಂಗ್ರೆಸ್ ನಾಯಕನ ಬ್ರಿಟಿಷ್ ಪತ್ನಿ ಎಲೆಜಬೆತ್ ಅವರು ಈ ದೇಶದಲ್ಲಿ ಒಂದು ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದಾಗ ಭಾರತದ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಿ ಪಾಕಿಸ್ತಾನಕ್ಕೆ ಕಳುಹಿಸಿದ್ದಾರೆ ಎಂದು ಆರೋಪಿಸಿದರು.
ಅವರು ಎರಡು ಭಾರತೀಯ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿದ್ದಾಗ ಒಂಬತ್ತು ಬಾರಿ ಪಾಕಿಸ್ತಾನಕ್ಕೆ ಹೋಗಿದ್ದರು ಎಂದು ಆರೋಪಿಸಿದ್ದಾರೆ.
ಪಾಕಿಸ್ತಾನಿ ಪ್ರಜೆ ಅಲಿ ತೌಕೀರ್ ಶೇಖ್ ಅವರು ರಾಜ್ಯ ಕಾಂಗ್ರೆಸ್ ಮುಖ್ಯಸ್ಥರೂ ಆಗಿರುವ ಗೊಗೊಯ್ ಮತ್ತು ಅವರ ಪತ್ನಿಯೊಂದಿಗೆ ಸಹಕರಿಸಿ ನಡೆಸಿದ್ದ ಭಾರತ ವಿರೋಧಿ ಪಿತೂರಿಯ ಬಗ್ಗೆ ತನಿಖೆ ನಡೆಸಲು ಅಸ್ಸಾಂ ಸರ್ಕಾರ ಎಸ್‌ಐಟಿಯನ್ನು ರಚಿಸಿತ್ತು. ಸೆಪ್ಟೆಂಬರ್ 10 ರಂದು ಎಸ್‌ಐಟಿ ತನ್ನ ವರದಿಯನ್ನು ಸಲ್ಲಿಸಿತು.
ಗೌರವ್ ಗೊಗೊಯ್, ಅವರ ಪತ್ನಿ ಮತ್ತು ಅಲಿ ತೌಕೀರ್ ಶೇಖ್ ನಡುವೆ ಆಳವಾದ ಸಂಬಂಧವಿದೆ, ಕೇಂದ್ರೀಯ ಸಂಸ್ಥೆಯ ತನಿಖೆಗೆ ನಾವು ಶಿಫಾರಸು ಮಾಡುತ್ತೇವೆ ಎಂದು ಹಿಮಂತ ಬಿಸ್ವ ಶರ್ಮಾ ಹೇಳಿದರು.
ಪಾಕಿಸ್ತಾನದ ಕಂಪನಿಯೊಂದು ಎಲಿಜಬೆತ್ ಅವರಿಗೆ ಕೆಲಸ ನೀಡಿ, ನಂತರ ಭಾರತಕ್ಕೆ ವರ್ಗಾಯಿಸಿತು. ಆದರೆ ಅವರ ವೇತನವನ್ನು ಶೇಖ್ ಪಾವತಿಸುತ್ತಿದ್ದರು ಎಂದು ಅವರು ಹೇಳಿಕೊಂಡರು.
ಪಾಕಿಸ್ತಾನದ ಗೂಢಚಾರ ಸಂಸ್ಥೆ ಐಎಸ್‌ಐ ಜೊತೆಗಿನ ಸಂಬಂಧದ ಆರೋಪದ ಮೇಲೆ ರಾಜ್ಯ ಕಾಂಗ್ರೆಸ್ ಮುಖ್ಯಸ್ಥರೂ ಆಗಿರುವ ಗೊಗೊಯ್ ಅವರ ಮೇಲೆ ಹಿಮಂತ ಬಿಸ್ವಾ ಶರ್ಮ ನೇತೃತ್ವದ ಸರ್ಕಾರ ದಾಳಿ ಮಾಡುತ್ತಿದೆ.
ಗೊಗೊಯ್ ಅವರ ಪಾಕಿಸ್ತಾನ ಸಂಪರ್ಕಗಳ ಕುರಿತ ಆರೋಪವನ್ನು ಗೃಹ ಸಚಿವಾಲಯಕ್ಕೆ ಉಲ್ಲೇಖಿಸಲು ಅಸ್ಸಾಂ ಸಚಿವ ಸಂಪುಟ ನಿರ್ಧರಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



