ಯಮರಾಜ on leave: ಬಸ್ ಕೆಳಗೆ ಬಿದ್ದರೂ ಜೀವ ಉಳಿಸಿಕೊಂಡ ಭೂಪ; Video Viral
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾನುವಾರ ನಡೆದ ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿಯೊಬ್ಬ ಪವಾಡಸದೃಶವಾಗಿ ಪಾರಾಗಿದ್ದಾನೆ.

ಮಲಪ್ಪುರಂ: ಸಾವು ಹೇಗೆ ಬರುತ್ತದೆ ಎಂಬುದು ಯಾರಿಗೂ ತಿಳಿಯಲ್ಲ.. ಅಂತೆಯೇ ಸಾವು ಎದುರಿಗೇ ಬಂದರೂ ಅದೃಷ್ಟವಂತರು ಅಚ್ಚರಿ ರೀತಿಯಲ್ಲಿ ಪಾರಾಗಿರುತ್ತಾರೆ. ಅಂತಹುದೇ ಒಂದು ಘಟನೆ ಕೇರಳದಲ್ಲಿ ನಡೆದಿದೆ.
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾನುವಾರ ನಡೆದ ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿಯೊಬ್ಬ ಪವಾಡಸದೃಶವಾಗಿ ಪಾರಾಗಿದ್ದಾನೆ. ಮಾರಕವಾಗಬಹುದಾಗಿದ್ದ ಈ ಅಪಘಾತದಲ್ಲಿ ಬೈಕ್ ಚಲಿಸುತ್ತಿದ್ದ ಯುವಕ ಕೂದಲೆಳೆ ಅಂತರದಲ್ಲಿ ಪಾರಾದ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ವೈರಲ್ ಆಗಿರುವ ವಿಡಿಯೋದಲ್ಲಿ ರಸ್ತೆ ತಿರುವಿನಲ್ಲಿ ವೇಗವಾಗಿ ಹೋಗುತ್ತಿದ್ದ ಬೈಕ್ ಗೆ ಬಸ್ ವೊಂದು ದಿಢೀರ್ ಎದುರು ಬಂದಿದ್ದು, ಇದರಿಂದ ಆಘಾತಕ್ಕೊಳಗಾದ ಬೈಕರ್ ಕೂಡಲೇ ಬೈಕ್ ಬ್ರೇಕ್ ಹಾಕಿದ್ದು ಇದರಿಂದ ಆಯತಪ್ಪಿ ರಸ್ತೆ ಮೇಲೆ ಬಿದ್ದು ನೇರವಾಗಿ ಬಸ್ ಎದುರಿಗೆ ಜಾರಿಕೊಂಡು ಹೋಗಿದ್ದಾನೆ.
ಬಳಿಕ ಬಸ್ ಚಕ್ರಕ್ಕೆ ಸವರಿಕೊಂಡು ಹೋಗಿ ಅದೃಷ್ಟವಶಾತ್ ಪಾರಾಗಿದ್ದಾರೆ. ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.
ಕೂಡಲೇ ಬಸ್ ಚಾಲಕ ಬಸ್ ನಿಲ್ಲಿಸಿದ್ದು, ನಂತರ ಬೈಕ್ ಚಾಲಕ ಎದ್ದು ರಸ್ತೆಬದಿಗೆ ಹೋಗುತ್ತಾನೆ. ಬೈಕ್ ಚಾಲಕನಿಗೆ ಸಣ್ಣಪುಟ್ಟ ತರಚಿದ ಗಾಯಗಳಾಗಿದ್ದು, ಸ್ಥಳೀಯರು ಬೈಕ್ ಚಾಲಕನಿಗೆ ನೆರವು ನೀಡಿ ಕಳುಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



