ದೇಶ

ಮಹಾರಾಷ್ಟ್ರ: ಸೊಲ್ಲಾಪುರದ ಕಾರಿನಲ್ಲಿ ಎರಡು EVM ಪತ್ತೆ! ದುರ್ಬಳಕೆ ಆರೋಪ

ಸೊಲ್ಲಾಪುರ ಸೇರಿದಂತೆ 12 ಜಿಲ್ಲಾ ಪರಿಷತ್ ಮತ್ತು 125 ಪಂಚಾಯಿತಿ ಸಮಿತಿಗಳಿಗೆ ಶನಿವಾರ ಚುನಾವಣೆ ನಡೆಯಿತು.

ಮಹಾರಾಷ್ಟ್ರ: ಸೊಲ್ಲಾಪುರದ ಕಾರಿನಲ್ಲಿ ಎರಡು EVM ಪತ್ತೆ! ದುರ್ಬಳಕೆ ಆರೋಪ
ಸಾಂದರ್ಭಿಕ ಚಿತ್ರ
Published On :

ಸೊಲ್ಲಾಪುರ: ವಿದ್ಯುನ್ಮಾನ ಮತ ಯಂತ್ರಗಳ ವಿಶ್ವಾಸಾರ್ಹತೆ, ದುರ್ಬಳಕೆ ಬಗ್ಗೆ ವಿರೋಧ ಪಕ್ಷಗಳು ಟೀಕೆ ಮಾಡುತ್ತಿರುವಂತೆಯೇ ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯ ಉಪಾಹಾರ ಗೃಹದ ಬಳಿ ಕಾರಿನೊಂದರಲ್ಲಿ ಎರಡು ವಿದ್ಯುನ್ಮಾನ ಮತಯಂತ್ರಗಳು ಪತ್ತೆಯಾಗಿವೆ.

ಸೊಲ್ಲಾಪುರ ಸೇರಿದಂತೆ 12 ಜಿಲ್ಲಾ ಪರಿಷತ್ ಮತ್ತು 125 ಪಂಚಾಯಿತಿ ಸಮಿತಿಗಳಿಗೆ ಶನಿವಾರ ಚುನಾವಣೆ ನಡೆಯಿತು.

ಶನಿವಾರ ಮಧ್ಯರಾತ್ರಿ, ಮೊಹೋಲ್ ಪಟ್ಟಣದ ಹೋಟೆಲ್ ಸ್ವರಾಜ್ಯ ಬಳಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿದ್ದ ಅಧಿಕಾರಿ ಬಾಡಿಗೆಗೆ ಪಡೆದಿದ್ದ ಕಾರಿನಲ್ಲಿ ಎರಡು ಇವಿಎಂಗಳು ಪತ್ತೆಯಾಗಿದ್ದು, ಕೆಲವು ರಾಜಕೀಯ ಪಕ್ಷಗಳು EVM ದುರ್ಬಳಕೆ ಬಗ್ಗೆ ಆರೋಪ ಮಾಡುತ್ತಿವೆ. ಇದರ ಬಗ್ಗೆ ಸಂಪೂರ್ಣ ತನಿಖೆ ನಡೆಯಬೇಕು ಎಂದು NCP ಅಭ್ಯರ್ಥಿಯೊಬ್ಬರು ಚುನಾವಣಾ ಆಯೋಗವನ್ನು ಒತ್ತಾಯಿಸಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಚುನಾವಣಾಧಿಕಾರಿ, ತಹಸೀಲ್ದಾರ್ ಹಾಗೂ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಪರಿಶೀಲಿಸಿದ್ದಾರೆ. ತನಿಖೆ ವೇಳೆ ಎರಡೂ ಇವಿಎಂಗಳು ಮುಚ್ಚಿದ ಸ್ಥಿತಿಯಲ್ಲಿದ್ದು, ಅವುಗಳನ್ನು ಚುನಾವಣೆಯಲ್ಲಿ ಬಳಸಿಲ್ಲ . ಚುನಾವಣೆಗೆ ಬಳಸಿದ ಎಲ್ಲಾ ಇವಿಎಂಗಳನ್ನು ಸ್ಟ್ರಾಂಗ್ ರೂಂನಲ್ಲಿ ಠೇವಣಿ ಇಡಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಈ ವಿಚಾರದಲ್ಲಿ ಸೂಕ್ತ ರೀತಿಯಲ್ಲಿ ತನಿಖೆ ನಡೆಸಿ, ತಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮಹಾರಾಷ್ಟ್ರ ರಾಜ್ಯ ಚುನಾವಣಾ ಆಯೋಗ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.