ಪುಣೆ ಮೇಯರ್ ಆಗಿ ಬಿಜೆಪಿಯ ಮಂಜುಷಾ ನಾಗ್ಪುರ್ ಅವಿರೋಧವಾಗಿ ಆಯ್ಕೆ
ಸಿಂಹಗಡ ಪ್ರದೇಶದ ಕಾರ್ಪೊರೇಟರ್ ಆಗಿರುವ ಇವರು ಮ್ಯಾನೇಜ್‌ಮೆಂಟ್ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮೊದಲಿನಿಂದಲೂ ರಾಷ್ಟ್ರೀಯ ಸ್ವಯಂಸೇವಕ ಸಂಘದ ಜೊತೆ ನಿಕಟ ಸಂಬಂಧ ಹೊಂದಿದ್ದಾರೆ.

ಪುಣೆ: ಪುಣೆ ಮಹಾನಗರ ಪಾಲಿಕೆಯ (PMC) ನೂತನ ಮೇಯರ್ ಆಗಿ ಬಿಜೆಪಿ ಕಾರ್ಪೊರೇಟರ್ ಮಂಜುಷಾ ನಾಗ್ಪುರೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಆರ್ಪಿಐ (ಎ) ನಾಯಕ ಪರಶುರಾಮ್ ವಾಡೇಕರ್ ಉಪಮೇಯರ್ ಆಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಮೇಯರ್ ಸ್ಥಾನಕ್ಕೆ ಸ್ಪರ್ಧಿಸಿದ್ದ ಎನ್‌ಸಿಪಿಯ ಶೀತಲ್ ಸಾವಂತ್ ಮತ್ತು ಕಾಂಗ್ರೆಸ್ ನಾಯಕಿ ಅಶ್ವಿನಿ ಲಾಂಡ್‌ಗೆ ಅವರು ಕೊನೆಯ ಕ್ಷಣದಲ್ಲಿ ನಾಮಪತ್ರ ಹಿಂತೆಗೆದುಕೊಂಡರು. ಅದೇ ರೀತಿ, ಉಪಮೇಯರ್ ರೇಸ್‌ನಲ್ಲಿದ್ದ ಎನ್‌ಸಿಪಿ ಕಾರ್ಪೊರೇಟರ್ ದತ್ತಾತ್ರೇಯ ಬಹಿರತ್ ಮತ್ತು ಕಾಂಗ್ರೆಸ್‌ನ ಸಾಹಿಲ್ ಕೇದಾರಿ ಕೂಡ ಹಿಂದೆ ಸರಿದಿದ್ದರಿಂದ, ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿಗಳ ಆಯ್ಕೆ ಸುಗಮವಾಯಿತು.
ಸಿಂಹಗಡ ಪ್ರದೇಶದ ಕಾರ್ಪೊರೇಟರ್ ಆಗಿರುವ ಇವರು ಮ್ಯಾನೇಜ್‌ಮೆಂಟ್ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮೊದಲಿನಿಂದಲೂ ರಾಷ್ಟ್ರೀಯ ಸ್ವಯಂಸೇವಕ ಸಂಘದ ಜೊತೆ ನಿಕಟ ಸಂಬಂಧ ಹೊಂದಿದ್ದಾರೆ.
ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಅಠಾವಳೆ) ನಾಯಕರಾದ ಇವರು, ಬೋಪೋಡಿ ಭಾಗದಿಂದ ಬಿಜೆಪಿ ಮೈತ್ರಿಕೂಟದ ಟಿಕೆಟ್‌ನಲ್ಲಿ ಸ್ಪರ್ಧಿಸಿ ಜಯಗಳಿಸಿದ್ದರು. ಒಟ್ಟು 165 ಸದಸ್ಯ ಬಲದ ಪುಣೆ ಮಹಾನಗರ ಪಾಲಿಕೆಯಲ್ಲಿ ಬಿಜೆಪಿಯು 119 ಸ್ಥಾನಗಳನ್ನು ಗೆಲ್ಲುವ ಮೂಲಕ ಸ್ಪಷ್ಟ ಬಹುಮತ ಸಾಧಿಸಿದೆ. ಅಜಿತ್ ಪವಾರ್ ಮತ್ತು ಶರದ್ ಪವಾರ್ ನೇತೃತ್ವದ ಎನ್‌ಸಿಪಿ ಬಣಗಳು ಒಟ್ಟಾಗಿ 30 ಸ್ಥಾನಗಳನ್ನು ಗೆದ್ದರೆ, ಕಾಂಗ್ರೆಸ್ 15 ಮತ್ತು ಶಿವಸೇನೆ (ಯುಬಿಟಿ) ಕೇವಲ 1 ಸ್ಥಾನ ಪಡೆದಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



