ನಟ ರಣವೀರ್ ಸಿಂಗ್ ಬಳಿಕ ಸಲ್ಮಾನ್ ಖಾನ್ ಬಾಮೈದ ಆಯುಷ್‌ಗೂ ಬಿಷ್ಣೋಯಿ ಗ್ಯಾಂಗ್ ಜೀವ ಬೆದರಿಕೆ
ಆಯುಷ್‌ಗೆ ಬೆದರಿಕೆ ಸಂದೇಶ ಕಳುಹಿಸಿದವರು ನಟ ಹಾಗೂ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್‌ನ ಸದಸ್ಯರೆಂದು ಹೇಳಿಕೊಂಡಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಮುಂಬೈ: ನಟ ರಣವೀರ್ ಸಿಂಗ್, ನಿರ್ದೇಶಕ ರೋಹಿತ್ ಶೆಟ್ಟಿ ಬಳಿಕ ಇದೀಗ ಸಲ್ಮಾನ್ ಖಾನ್ ಅವರ ಬಾಮೈದ ಆಯುಷ್ ಶರ್ಮಾ (ಸಲ್ಮಾನ್ ಸೋದರಿಯ ಪತಿ) ಅವರಿಗೂ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಸಹಚರರಿಂದ ಜೀವ ಬೆದರಿಕೆ ಬಂದಿದೆ ಎಂದು ತಿಳಿದುಬಂದಿದೆ.
ನಟ ರಣವೀರ್ ಸಿಂಗ್ ಅವರಿಗೆ ವ್ಯಾಟ್ಸ್‌ಆ್ಯಪ್ ಮೂಲಕ ಬೆದರಿಕೆ ಬಂದ ಒಂದು ದಿನದ ಬಳಿಕ ಆಯುಷ್ ಶರ್ಮಾಗೆ ಬೆದರಿಕೆ ಸಂದೇಶ ಕಳುಹಿಸಲಾಗಿದೆ.
ಆಯುಷ್‌ಗೆ ಬೆದರಿಕೆ ಸಂದೇಶ ಕಳುಹಿಸಿದವರು ನಟ ಹಾಗೂ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್‌ನ ಸದಸ್ಯರೆಂದು ಹೇಳಿಕೊಂಡಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.
ಘಟನೆ ಸಂಬಂಧ ಯಾವುದೇ ಅಧಿಕೃತ ದೂರು ದಾಖಲಾಗಿಲ್ಲದಿದ್ದರೂ, ಇ–ಮೇಲ್ ನಿಜವಾದದ್ದೇ ಅಥವಾ ಯಾರಾದರೂ ಕಿಡಿಗೇಡಿತನ ಮಾಡಿದ್ದಾರೆಯೇ ಎಂದು ಅಪರಾಧ ವಿಭಾಗದ ತನಿಖಾಧಿಕಾರಿಗಳು ಪರಿಶೀಲಿಸುತ್ತಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಫೆ.1ರಂದು ಮುಂಬೈನ ಜುಹು ಪ್ರದೇಶದಲ್ಲಿರುವ ನಿರ್ದೇಶಕ ಹಾಗೂ ನಿರ್ಮಾಪಕ ರೋಹಿತ್ ಶೆಟ್ಟಿ ಅವರ ನಿವಾಸದ ಮೇಲೆ ಶೂಟರ್‌ಗಳು ಐದು ಸುತ್ತು ಗುಂಡು ಹಾರಿಸಿದ್ದರು. ಬಳಿಕ ನಟ ರಣವೀರ್ ಸಿಂಗ್‌ಗೆ ವಾಯ್ಸ್ ನೋಟ್ ಮೂಲಕ ಅಪರಿಚಿತ ವ್ಯಕ್ತಿಗಳಿಂದ ಬೆದರಿಕೆ ಬಂದಿತ್ತು.

ಬಿಷ್ಣೋಯ್ ಗ್ಯಾಂಗ್ ಹೆಸರಲ್ಲಿ ನಟ ರಣವೀರ್ ಸಿಂಗ್‌ಗೆ ಬೆದರಿಕೆ: ಕೋಟಿ ಕೋಟಿ ಹಣಕ್ಕೆ ಡಿಮ್ಯಾಂಡ್; ಭದ್ರತೆ ಹೆಚ್ಚಳ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


