ಉದ್ಧವ್ ಠಾಕ್ರೆ ಪುತ್ರನ ಆರೋಗ್ಯ ಸ್ಥಿತಿ ಗಂಭೀರ; ರಿಲಾಯನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ
ರಾಜಕೀಯ ಮತ್ತು ಸಾಮಾಜಿಕ ವಲಯದ ಹಲವು ಮುಖಂಡರು ಕೂಡ ಠಾಕ್ರೆ ಅವರ ಪುತ್ರ ಶೀಘ್ರ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ.

ಮುಂಬೈ: ಮಹಾರಾಷ್ಟ್ರ ಮಾಜಿ ಸಿಎಂ ಉದ್ಧವ್ ಠಾಕ್ರೆ ಪುತ್ರನ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಕಳೆದ 3 ದಿನಗಳಿಂದ ಮುಂಬೈ ನಲ್ಲಿರುವ ರಿಲಾಯನ್ಸ್ ಆಸ್ಪತ್ರೆಯಲ್ಲಿ ಉದ್ಧವ್ ಠಾಕ್ರೆ ಪುತ್ರನಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಬುಧವಾರದಂದು ಉದ್ಧವ್ ಠಾಕ್ರೆ ಅವರ ಕಿರಿಯ ಪುತ್ರ ತೇಜಸ್ ಠಾಕ್ರೆ ಅವರ ಆರೋಗ್ಯ ಹದಗೆಟ್ಟಿತ್ತು. ಅವರನ್ನು ತುರ್ತು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಯಿತು. ವೈದ್ಯರ ಪ್ರಕಾರ ತೇಜಸ್ ಠಾಕ್ರೆ ಸ್ಥಿತಿ ಗಂಭೀರವಾಗಿದ್ದರೂ ಈಗ ಅವರ ಆರೋಗ್ಯದಲ್ಲಿ ಕ್ರಮೇಣ ಸುಧಾರಣೆ ಕಂಡುಬರುತ್ತಿದ್ದು, ಚಿಕಿತ್ಸೆ ಮುಂದುವರೆದಿದೆ ಎಂಬ ಮಾಹಿತಿ ಲಭ್ಯವಾಗಿದೆ. ರಾಜಕೀಯ ಮತ್ತು ಸಾಮಾಜಿಕ ವಲಯದ ಹಲವು ಮುಖಂಡರು ಕೂಡ ತೇಜಸ್ ಶೀಘ್ರ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ.
ಉದ್ಧವ್ ಠಾಕ್ರೆ ಕಿರಿಯ ಪುತ್ರ ತೇಜಸ್ ಠಾಕ್ರೆ ಅವರ ಕುಟುಂಬದ ಹಿನ್ನೆಲೆ ರಾಜಕೀಯಕ್ಕೆ ಸಂಬಂಧಿಸಿದ್ದಾದರೂ ವಿಜ್ಞಾನ ಕ್ಷೇತ್ರದಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ವನ್ಯಜೀವಿ ಅಧ್ಯಯನ ಮತ್ತು ಪ್ರಕೃತಿ ಸಂರಕ್ಷಣೆಯತ್ತ ಅವರು ಹೆಚ್ಚಿನ ಆಸಕ್ತಿ ಹೊಂದಿದ್ದು, ವನ್ಯಜೀವಿ ಸಂಶೋಧಕರಾಗಿ ಖ್ಯಾತಿ ಗಳಿಸಿದ್ದಾರೆ. 2016ರಲ್ಲಿ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಹೊಸ ಸಿಹಿನೀರಿನ ಏಡಿ ಪ್ರಭೇದಳನ್ನು ಪತ್ತೆಹಚ್ಚುವಲ್ಲಿ ಅವರು ಪ್ರಮುಖ ಪಾತ್ರವಹಿಸಿದ್ದರು. 2019ರ ಸೆಪ್ಟೆಂಬರ್‌ನಲ್ಲಿ ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳಲ್ಲಿ ಹೊಸ ಹಾವು ಪ್ರಭೇದ ಪತ್ತೆಯಾಗಿತ್ತು. ಈ ಪ್ರಭೇದಕ್ಕೆ ಅವರ ಕೊಡುಗೆಯನ್ನು ಸ್ಮರಿಸಿ “ಬೋಯಿಗಾ ಠಾಕ್ರೆ” ಎಂದು ಹೆಸರು ಇಡಲಾಗಿದೆ.
ಇತ್ತೀಚಿನ ದಿನಗಳಲ್ಲಿ ತೇಜಸ್ ಠಾಕ್ರೆ ರಾಜಕೀಯ ಚಟುವಟಿಕೆಗಳಲ್ಲಿಯೂ ಹೆಚ್ಚು ತೊಡಗಿಸಿಕೊಂಡಿದ್ದರು. ಶಿವಸೇನೆ ಶಾಖೆಗಳಿಗೆ ಭೇಟಿ ನೀಡುವುದು, ಕಾರ್ಯಕರ್ತರೊಂದಿಗೆ ಸಂವಾದ ನಡೆಸುವುದು ಸೇರಿದಂತೆ ಹಲವು ಕಾರ್ಯಕ್ರಮಗಳಲ್ಲಿ ಅವರು ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



