ಮದುವೆಗೂ ಮುನ್ನ ಹೇಗೆ ಸೆಕ್ಸ್ ನಲ್ಲಿ ತೊಡಗಿಸಿಕೊಳ್ಳಲು ಸಾಧ್ಯ? ವಿವಾಹ ಪೂರ್ವ ಸಂಬಂಧದ ಬಗ್ಗೆ ಸುಪ್ರೀಂ ಕೋರ್ಟ್ ಗರಂ!
ಈಗಾಗಲೇ ಎರಡನೇ ಮದುವೆಯಾಗಿದ್ದರೂ, ಮತ್ತೋರ್ವ ಮಹಿಳೆಯನ್ನು ನಂಬಿಸಿ ಆಕೆಯೊಂದಿಗೆ ದೈಹಿಕ ಸಂಬಂಧ ಹೊಂದಿದ್ದ ಆರೋಪಿಯ ಜಾಮೀನು ಅರ್ಜಿಯ ವಿಚಾರಣೆ ವೇಳೆಯಲ್ಲಿ ನ್ಯಾಯಮೂರ್ತಿಗಳಾದ ಬಿ.ವಿ.ನಾಗರತ್ನ ಮತ್ತು ಉಜ್ಜಲ್ ಭುಯಾನ್ ಅವರಿದ್ದ ಪೀಠ ಈ ಎಚ್ಚರಿಕೆ ನೀಡಿದೆ.

ನವದೆಹಲಿ: ಅತ್ಯಾಚಾರ ಮತ್ತು ಮದುವೆ ಭರವಸೆ ಆರೋಪಕ್ಕೆ ಸಂಬಂಧಿಸಿದ ಪ್ರಕರಣವೊಂದರ ವಿಚಾರಣೆ ವೇಳೆಯಲ್ಲಿ ವಿವಾಹ ಪೂರ್ವ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಸೋಮವಾರ ಕಠಿಣವಾದ ಎಚ್ಚರಿಕೆ ನೀಡಿದೆ.
ಈಗಾಗಲೇ ಎರಡನೇ ಮದುವೆಯಾಗಿದ್ದರೂ, ಮತ್ತೋರ್ವ ಮಹಿಳೆಯನ್ನು ನಂಬಿಸಿ ಆಕೆಯೊಂದಿಗೆ ದೈಹಿಕ ಸಂಬಂಧ ಹೊಂದಿದ್ದ ಆರೋಪಿಯ ಜಾಮೀನು ಅರ್ಜಿಯ ವಿಚಾರಣೆ ವೇಳೆಯಲ್ಲಿ ನ್ಯಾಯಮೂರ್ತಿಗಳಾದ ಬಿ.ವಿ.ನಾಗರತ್ನ ಮತ್ತು ಉಜ್ಜಲ್ ಭುಯಾನ್ ಅವರಿದ್ದ ಪೀಠ ಈ ಎಚ್ಚರಿಕೆ ನೀಡಿದೆ.
ಮದುವೆಗೂ ಮುನ್ನ ದೈಹಿಕ ಸಂಬಂಧ ಬೆಳೆಸುವ ಬಗ್ಗೆ ಎಚ್ಚರಿಕೆ ವಹಿಸಬೇಕು. ಬಹುಶಃ ನಾವು ಹಳೆಯ ಫ್ಯಾಶನ್ನಿನವರಾಗಿರಬಹುದು. ಆದರೆ ಮದುವೆಗೆ ಮುನ್ನ ಹುಡುಗ ಮತ್ತು ಹುಡುಗಿ ಅಪರಿಚಿತರು. ಅವರ ಸಂಬಂಧ ಏನೇ ಇರಲಿ, ಮದುವೆಗೂ ಮುನ್ನ ಅವರು ಹೇಗೆ ದೈಹಿಕ ಸಂಬಂಧದಲ್ಲಿ ಇರುತ್ತಾರೆ ಎಂಬುದನ್ನು ಅರ್ಥಮಾಡಿಕೊಳ್ಳಲು ನಾವು ವಿಫಲರಾಗಿದ್ದೇವೆ ಎಂದು ವಿಚಾರಣೆ ವೇಳೆ ನ್ಯಾಯಮೂರ್ತಿ ನಾಗರತ್ನ ಅವರು ಹೇಳಿದರು.
ನೀವು ತುಂಬಾ ಜಾಗರೂಕರಾಗಿರಬೇಕು. ಮದುವೆಗೆ ಮೊದಲು ಯಾರೂ ಯಾರನ್ನೂ ನಂಬಬಾರದು. 2022 ರಲ್ಲಿ ಮ್ಯಾಟ್ರಿಮೋನಿಯಲ್ ಸೇವೆಗಳ ವೆಬ್ಸೈಟ್ ಮೂಲಕ ಮಹಿಳೆ ಮತ್ತು ಪುರುಷ ಭೇಟಿಯಾದರು ಎಂದು ನ್ಯಾಯಾಲಯಕ್ಕೆ ತಿಳಿಸಲಾಯಿತು.
ಪುರುಷ ಮಹಿಳೆಗೆ ತಾನು ಮದುವೆಯಾಗುವುದಾಗಿ ಭರವಸೆ ನೀಡಿದ ನಂತರ ಮಹಿಳೆ ದುಬೈನಲ್ಲಿ ಭೇಟಿಯಾದಾಗ ದೈಹಿಕ ಸಂಬಂಧ ಹೊಂದಿರುವುದಾಗಿ ಪ್ರಾಸಿಕ್ಯೂಷನ್ ಆರೋಪಿಸಿದರು. ಮಹಿಳೆಯ ಅನುಮತಿ ಇಲ್ಲದೆ ಅವರು ಸೆಕ್ಸ್ ನಲ್ಲಿ ತೊಡಗಿರುವ ವಿಡಿಯೋಗಳನ್ನು ರೆಕಾರ್ಡ್ ಮಾಡಲಾಗಿದ್ದು, ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ ಲೋಡ್ ಮಾಡುವ ಬೆದರಿಕೆ ಹಾಕಲಾಗಿದೆ ಎಂದು ಪ್ರಾಸಿಕ್ಯೂಷನ್ ಹೇಳಿದರು.
ಈಗಾಗಲೇ ಒಂದು ಬಾರಿ ಮದುವೆಯಾಗಿದ್ದ ಪುರುಷ ತದನಂತರ ಪಂಜಾಬ್ ನಲ್ಲಿ 2024ರಲ್ಲಿ ಜನವರಿಯಲ್ಲಿ ಎರಡನೇ ಮದುವೆಯಾಗಿದ್ದಾರೆ. ಮದುವೆಗೂ ಮುನ್ನಾ ಯುವತಿ ದುಬೈಗೆ ಹೋದದ್ದು ಯಾಕೆ ಎಂದು ನಾಗರತ್ನ ಪ್ರಶ್ನಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



