ರೋಹಿತ್ ಶೆಟ್ಟಿ ಮನೆ ಮೇಲೆ ಗುಂಡಿನ ದಾಳಿ: ಹರಿಯಾಣ, ರಾಜಸ್ಥಾನದಲ್ಲಿ ಶೂಟರ್ ಸೇರಿ ಆರು ಮಂದಿ ಬಂಧನ
ಮುಂಬೈ ಕ್ರೈಮ್ ಬ್ರಾಂಚ್ ಪೊಲೀಸರು ಭಾನುವಾರ ರಾತ್ರಿ ಹರಿಯಾಣ ಮತ್ತು ರಾಜಸ್ಥಾನದಲ್ಲಿ ಪ್ರಮುಖ ಆರೋಪಿ, ಶೂಟರ್ ದೀಪಕ್ ಶರ್ಮಾ ಮತ್ತು ಪ್ರಕರಣದಲ್ಲಿ ಭಾಗಿಯಾಗಿರುವ ಇತರ ಐವರನ್ನು ಬಂಧಿಸಿದ್ದಾರೆ.

ಮುಂಬೈ: ಮುಂಬೈ ಪೊಲೀಸರು ಸೋಮವಾರ ಬಾಲಿವುಡ್ ಖ್ಯಾತ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಜುಹುವಿನ ಮನೆ ಮೇಲೆ ಐದು ಸುತ್ತು ಗುಂಡು ಹಾರಿಸಿದ ಆರೋಪಿ ಸೇರಿದಂತೆ ಆರು ಜನರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮುಂಬೈ ಕ್ರೈಮ್ ಬ್ರಾಂಚ್ ಪೊಲೀಸರು ಭಾನುವಾರ ರಾತ್ರಿ ಹರಿಯಾಣ ಮತ್ತು ರಾಜಸ್ಥಾನದಲ್ಲಿ ಪ್ರಮುಖ ಆರೋಪಿ, ಶೂಟರ್ ದೀಪಕ್ ಶರ್ಮಾ ಮತ್ತು ಪ್ರಕರಣದಲ್ಲಿ ಭಾಗಿಯಾಗಿರುವ ಇತರ ಐವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರಮುಖ ಆರೋಪಿ ದೀಪಕ್ ಶರ್ಮಾ ಮತ್ತು ಇತರ ಐವರ ಬಂಧನದೊಂದಿಗೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಲ್ಲಿಯವರೆಗೆ 11 ಜನರನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ಮುಂಬೈಗೆ ಕರೆತರಲಾಗಿದೆ ಎಂದು ಅವರು ಹೇಳಿದ್ದಾರೆ.
ಫೆಬ್ರವರಿ 1 ರಂದು ಬೆಳಗಿನ ಜಾವ 12.45 ಕ್ಕೆ ರೋಹಿತ್ ಶೆಟ್ಟಿ ಅವರ ಜುಹು ಪ್ರದೇಶದಲ್ಲಿರುವ ಒಂಬತ್ತು ಅಂತಸ್ತಿನ ಕಟ್ಟಡದ ಮೊದಲ ಮಹಡಿ ಮೇಲೆ ಕನಿಷ್ಠ ಐದು ಸುತ್ತು ಗುಂಡು ಹಾರಿಸಲಾಯಿತು.
ಬಂಧಿತ ಇತರ ಐವರನ್ನು ಆದಿತ್ಯ ಗಯಾಕಿ(19), ಸಿದ್ಧಾರ್ಥ್ ಯೆನ್‌ಪುರೆ(20), ಸಮರ್ಥ್ ಪೊಮಾಜಿ(18), ಸ್ವಪ್ನಿಲ್ ಸಕತ್ (23) ಮತ್ತು ಆಸಾರಾಮ್ ಫಸಲೆ ಎಂದು ಗುರುತಿಸಲಾಗಿದೆ.
ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಸದಸ್ಯ ಶುಭಮ್ ಲೋಂಕರ್ ಸಹ ಪ್ರಕರಣದ ಆರೋಪಿಯಾಗಿದ್ದು, ಗುಂಡು ಹಾರಿಸಿದ ವ್ಯಕ್ತಿಗೆ ಶಸ್ತ್ರಾಸ್ತ್ರಗಳನ್ನು ಒದಗಿಸಿದ್ದಾಗಿ ಅಧಿಕಾರಿ ಹೇಳಿದ್ದಾರೆ.
ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಸದಸ್ಯ ಶುಭಮ್ ಲೋಂಕರ್, ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ರೋಹಿತ್ ಶೆಟ್ಟಿ ನಿವಾಸದಲ್ಲಿ ನಡೆದ ಗುಂಡಿನ ದಾಳಿಯ ಹೊಣೆಯನ್ನು ಹೊತ್ತುಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



