ಇಶಾ ಫೌಂಡೇಷನ್ನಲ್ಲಿ ಮಹಾ ಶಿವರಾತ್ರಿ: ರಾತ್ರಿಯಿಡೀ ಕುಣಿದು ಕುಪ್ಪಳಿಸಿದ ತಮನ್ನಾ ಭಾಟಿಯಾ, ಸಾರಾ ಅರ್ಜುನ್, ಶ್ರೀನಿಧಿ ಶೆಟ್ಟಿ! Video
ಸಾರಾ ಅರ್ಜುನ್, ತಮನ್ನಾ ಮತ್ತು ಶ್ರೀನಿಧಿ ಕುಣಿದು ಕುಪ್ಪಳಿಸಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿವೆ.

ಕೊಯಮತ್ತೊರು: ತಮಿಳುನಾಡಿನ ಕೊಯಮತ್ತೂರಿನ ಇಶಾ ಯೋಗ ಕೇಂದ್ರದಲ್ಲಿ ಭಾನುವಾರ ನಡೆದ ಮಹಾಶಿವರಾತ್ರಿ ಆಚರಣೆಯಲ್ಲಿ ಧುರಂಧರ ನಟಿ ಸಾರಾ ಅರ್ಜುನ್, ತಮನ್ನಾ ಭಾಟಿಯಾ, ಕೆಜಿಎಫ್ ನಟಿ ಶ್ರೀನಿಧಿ ಶೆಟ್ಟಿ ಮತ್ತು ಮೌನಿ ರಾಯ್ ಸೇರಿದಂತೆ ಹಲವಾರು ಸೆಲೆಬ್ರಿಟಿಗಳು ಭಾಗವಹಿಸಿದ್ದರು.
ಸಾರಾ ಅರ್ಜುನ್, ತಮನ್ನಾ ಮತ್ತು ಶ್ರೀನಿಧಿ ಕುಣಿದು ಕುಪ್ಪಳಿಸಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿವೆ.
ಹೀಗೆ ವೈರಲ್ ಆದ ವಿಡಿಯೋಗಳಲ್ಲಿ ತಮನ್ನಾ ಭಾಟಿಯಾ, ಮುಂಚೂಣಿಯಲ್ಲಿ ಕಾಣಿಸಿಕೊಂಡಿದ್ದು, ಸಾರಾ ಅರ್ಜುನ್ ಮತ್ತಿತರ ಭಕ್ತರೊಂದಿಗೆ ಡ್ಯಾನ್ಸ್ ಮಾಡುತ್ತಾ ಎಂಜಯ್ ಮಾಡುತ್ತಿದ್ದಾರೆ. ಮತ್ತೊಂದು ವೀಡಿಯೊದಲ್ಲಿ ಸಾರಾ ಅರ್ಜುನ್ ಮತ್ತು ಶ್ರೀನಿಧಿ ಶೆಟ್ಟಿ ಅದ್ಬುತ ನೃತ್ಯ ಮಾಡುತ್ತಿರುವುದು ಕಂಡುಬಂದಿದೆ.
ಇಶಾ ಫೌಂಡೇಶನ್ ಹಂಚಿಕೊಂಡಿರುವ ವೀಡಿಯೊದಲ್ಲಿ, ನಿಮ್ಮೆಲ್ಲರಿಗೂ ಮಹಾಶಿವರಾತ್ರಿಯ ಶುಭಾಶಯಗಳು. ಅತ್ಯಂತ ಸುಂದರವಾದ ಸಮಯ ಕಳೆದಿದ್ದೇನೆ ಎಂದು ಶ್ರಿನಿಧಿ ಶೆಟ್ಟಿ ಹೇಳುವುದು ಕಾಣಿಸುತ್ತಿದೆ. ನಾನು ಎಚ್ಚರವಾಗಿರುವವರೆಗೂ ಸಾಧ್ಯವಾಗುವಷ್ಟು ನೃತ್ಯ ಮಾಡಲು ಪ್ರಯತ್ನಿಸುತ್ತೇನೆ ಎಂದು ತಮನ್ನಾ ವಿಡಿಯೋದಲ್ಲಿ ಹೇಳಿದ್ದಾರೆ.
ತಮನ್ನಾ ಭಾಟಿಯಾ ಸಿದ್ಧಾರ್ಥ್ ಮಲ್ಹೋತ್ರಾ ಜೊತೆಗೆ ಅಭಿನಯಿಸಿರುವ Vvan ಚಿತ್ರ ಇದೇ ವರ್ಷ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



