ದೇಶ

ಜಮ್ಮು-ಕಾಶ್ಮೀರ: ಪೊಲೀಸರ ಮೇಲೆ ಹಲ್ಲೆ; ಬಾಲಾಪರಾಧಿ ಗೃಹದಿಂದ ಮೂವರು ಪಾಕ್ ಕೈದಿಗಳು ಪರಾರಿ..! Video

ಮೂಲಗಳ ಪ್ರಕಾರ ಸಂಜೆ 5.05ರ ಸುಮಾರಿಗೆ ಜಮ್ಮುವಿನ ಆರ್​​ಎಸ್​ ಪುರದಲ್ಲಿರುವ ಜೈಲಿನಲ್ಲಿ ನಿಯೋಜಿಸಲಾಗಿದ್ದ ಪೊಲೀಸರ ಮೇಲೆ ದಾಳಿ ಮಾಡಿ ಮೂವರು ಕೈದಿಗಳು ಕಸ್ಟಡಿಯಿಂದ ತಪ್ಪಿಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ಜಮ್ಮು-ಕಾಶ್ಮೀರ: ಪೊಲೀಸರ ಮೇಲೆ ಹಲ್ಲೆ; ಬಾಲಾಪರಾಧಿ ಗೃಹದಿಂದ ಮೂವರು ಪಾಕ್ ಕೈದಿಗಳು ಪರಾರಿ..! Video
ಬಾಲಾಪರಾಧಿ ಗೃಹ
Published On :

ಶ್ರೀನಗರ: ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ಜಮ್ಮು ಮತ್ತು ಕಾಶ್ಮೀರದ ಬಾಲಾಪರಾಧಿ ಗೃಹದಿಂದ ಮೂವರು ಪಾಕಿಸ್ತಾನಿ ಕೈದಿಗಳು ಪರಾರಿಯಾಗಿರುವ ಘಟನೆ ನಡೆದಿದೆ.

ಇಬ್ಬರು ಪಾಕಿಸ್ತಾನಿಗಳು ಸೇರಿ ಮೂವರು ಕೈದಿಗಳು ಜೈಲಿಂದ ಓಡಿ ಹೋಗಿದ್ದು, ಘಟನೆಯಲ್ಲಿ ಇಬ್ಬರು ಪೊಲೀಸರಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಮೂಲಗಳ ಪ್ರಕಾರ ಸಂಜೆ 5.05ರ ಸುಮಾರಿಗೆ ಜಮ್ಮುವಿನ ಆರ್​​ಎಸ್​ ಪುರದಲ್ಲಿರುವ ಜೈಲಿನಲ್ಲಿ ನಿಯೋಜಿಸಲಾಗಿದ್ದ ಪೊಲೀಸರ ಮೇಲೆ ದಾಳಿ ಮಾಡಿ ಮೂವರು ಕೈದಿಗಳು ಕಸ್ಟಡಿಯಿಂದ ತಪ್ಪಿಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ತಪ್ಪಿಸಿಕೊಂಡ ಕೈದಿಗಳನ್ನು ಅಹ್ಸಾನ್ ಅನ್ವರ್ ಮತ್ತು ಮೊಹಮ್ಮದ್ ಸನಾವುಲ್ಲಾ (ಇಬ್ಬರೂ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ನಿವಾಸಿಗಳು) ಮತ್ತು ಜಮ್ಮುವಿನ ನಿವಾಸಿ ಕರಣ್‌ಜಿತ್ ಸಿಂಗ್ ಅಲಿಯಾಸ್ ಗುಗ್ಗಾ ಎಂದು ಗುರುತಿಸಲಾಗಿದೆ.

ಘಟನೆಯ ಬಳಿಕ ಪೊಲೀಸ್ ಹಾಗೂ ಅರೆಸೇನಾ ಪಡೆಗಳು ಸ್ಥಳಕ್ಕೆ ಧಾವಿಸಿ ಪರಿಶೀನೆ ನಡೆಸಿದ್ದು, ಪರಾರಿಯಾಗಿರುವ ಕೈದಿಗಳಿಗಾಗಿ ಶೋಧ ಕಾರ್ಯಾಚರಣೆ ಆರಂಭಿಸಿವೆ.

ಈ ಪ್ರದೇಶದಲ್ಲಿ ತಾತ್ಕಾಲಿಕ ತಪಾಸಣಾ ಕೇಂದ್ರಗಳನ್ನು ಸ್ಥಾಪಿಸಿ ವಾಹನಗಳು ಮತ್ತು ಪ್ರಯಾಣಿಕರ ಗುರುತಿನ ಚೀಟಿಗಳನ್ನು ಪರಿಶೀಲಿಸಲಾಗುತ್ತಿದೆ.

ಏತನ್ಮಧ್ಯೆ ಬಾಲಾಪರಾಧಿ ಗೃಹದ ಒಳಗೆ ಕೈದಿಗಳಿಗೆ ಶಸ್ತ್ರಾಸ್ತ್ರಗಳು ಹೇಗೆ ದೊರಕಿದವು ಎಂಬುದರ ಕುರಿತು ಪ್ರಶ್ನೆಗಳು ಮೂಡಿದ್ದು, ಈ ಕುರಿತಂತೆಯೂ ತನಿಖೆ ಆರಂಭವಾಗಿದೆ.

ಶಸ್ತ್ರಾಸ್ತ್ರಗಳನ್ನು ತಂದವರು ಯಾರು ಮತ್ತು ಯಾವ ಉದ್ದೇಶದಿಂದ ಒಳಗೆ ತಂದರು ಎಂಬುದನ್ನು ಪತ್ತೆಹಚ್ಚಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.