ದೇಶ

ಮಹಾರಾಷ್ಟ್ರ: ಲೋಕಭವನದಲ್ಲಿ ಪ್ರಧಾನಿ ಮೋದಿ, ಮ್ಯಾಕ್ರನ್ ಭೇಟಿ; ಏನೆಲ್ಲಾ ಮಾತುಕತೆ ಆಯ್ತು?

ಭಾರತ-ಫ್ರಾನ್ಸ್ ಕಾರ್ಯತಂತ್ರದ ಪಾಲುದಾರಿಕೆಯ ಪ್ರಗತಿ ಪರಿಶೀಲನೆ ಮತ್ತು ಪ್ರಮುಖ ಕ್ಷೇತ್ರಗಳಲ್ಲಿ ಸಹಕಾರವನ್ನು ಮತ್ತಷ್ಟು ಹೆಚ್ಚಿಸುವ ಗುರಿಯೊಂದಿಗೆ ಸಭೆ ನಡೆಯಿತು.

ಮಹಾರಾಷ್ಟ್ರ: ಲೋಕಭವನದಲ್ಲಿ ಪ್ರಧಾನಿ ಮೋದಿ, ಮ್ಯಾಕ್ರನ್ ಭೇಟಿ; ಏನೆಲ್ಲಾ ಮಾತುಕತೆ ಆಯ್ತು?
ಎಮ್ಯಾನುಯೆಲ್ ಮ್ಯಾಕ್ರನ್ ಮತ್ತು ಪ್ರಧಾನಿ ಮೋದಿ ಮಾತುಕತೆ
Published On :

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಮುಂಬೈನಲ್ಲಿ ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದರು. ಲೋಕಭವನದಲ್ಲಿ ಭೇಟಿಯಾದ ಉಭಯ ನಾಯಕರು ಪರಸ್ಪರ ಅಪ್ಪುಗೆ ನೀಡುವ ಮೂಲಕ ಸಮಾಲೋಚನೆ ನಡೆಸಿದರು.

ಭಾರತ-ಫ್ರಾನ್ಸ್ ಕಾರ್ಯತಂತ್ರದ ಪಾಲುದಾರಿಕೆಯ ಪ್ರಗತಿ ಪರಿಶೀಲನೆ ಮತ್ತು ಪ್ರಮುಖ ಕ್ಷೇತ್ರಗಳಲ್ಲಿ ಸಹಕಾರವನ್ನು ಮತ್ತಷ್ಟು ಹೆಚ್ಚಿಸುವ ಗುರಿಯೊಂದಿಗೆ ಸಭೆ ನಡೆಯಿತು. ಮ್ಯಾಕ್ರನ್ ಆಗಮಿಸುತ್ತಿದ್ದಂತೆಯೇ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಸ್ವಾಗತ ಕೋರಿದರು. ಬಳಿಕ ಚರ್ಚೆ ನಡೆಸಿದರು.

ಇದಕ್ಕೂ ಮುನ್ನ ಲೋಕಭವನಕ್ಕೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನು ಮಹಾರಾಷ್ಟ್ರ ಮತ್ತು ಗುಜರಾತ್ ರಾಜ್ಯಪಾಲ ಆಚಾರ್ಯ ದೇವವ್ರತ್ ಅವರು ಬರಮಾಡಿಕೊಂಡರು. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಅವರು ಪೋಸ್ಟ್ ಮಾಡಿದ್ದು, ಮುಂಬೈನ ಲೋಕಭವನಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಫ್ರೆಂಚ್ ಗಣರಾಜ್ಯದ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರೋನ್ ಅವರನ್ನು ಸ್ವಾಗತಿಸಿದ್ದಾಗಿ ತಿಳಿಸಿದ್ದಾರೆ.

ಪ್ರಧಾನಿ ಮೋದಿ ಮತ್ತು ಅಧ್ಯಕ್ಷ ಮ್ಯಾಕ್ರನ್ ನಡುವಿನ ಸಭೆಯು ಭಾರತ ಮತ್ತು ಫ್ರಾನ್ಸ್ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ಬಲಪಡಿಸುವ ನಿರೀಕ್ಷೆಯಿದೆ. ಕಾರ್ಯತಂತ್ರದ ಸಹಕಾರ, ವ್ಯಾಪಾರ, ರಕ್ಷಣಾ ಸಹಯೋಗ ಮತ್ತು ಪರಸ್ಪರ ಹಿತಾಸಕ್ತಿಯ ಜಾಗತಿಕ ವಿಷಯಗಳ ಮೇಲೆ ಮಾತುಕತೆ ನಡೆದಿರುವ ಸಾಧ್ಯತೆಯಿದೆ.

ಭಯೋತ್ಪಾದನೆಯ ವಿರುದ್ಧ ಅಂತಾರಾಷ್ಟ್ರೀಯ ಒಗ್ಗಟ್ಟನ್ನು ಪ್ರತಿಬಿಂಬಿಸುವ ಸಂಕೇತವಾಗಿ ಮ್ಯಾಕ್ರೋನ್ 2008 ರ ಮುಂಬೈ ಭಯೋತ್ಪಾದಕ ದಾಳಿಯ ಸಂತ್ರಸ್ತರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಇದು ಹಿಂಸಾಚಾರ, ಭಯೋತ್ಪಾದನೆ ದಾಳಿಗೊಳಗಾದ ಉಭಯ ದೇಶಗಳ ನಡುವಿನ ಸಂಪರ್ಕ ಸೇತುವೆಯಾಗಿ ಕಾಣಿಸಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.