ಮುಸ್ಲಿಂರಿಗೆ ಉದ್ಯೋಗ, ಶಿಕ್ಷಣದಲ್ಲಿ ನೀಡಲಾಗಿದ್ದ ಶೇ.5 ರಷ್ಟು ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರ
ಈ ಸಂಬಂಧ ಮಂಗಳವಾರ ಅಧಿಸೂಚನೆ ಹೊರಡಿಸಿರುವ ಮಹಾರಾಷ್ಟ್ರ ಸರ್ಕಾರ, ಮುಸ್ಲಿಂ ಸಮುದಾಯಕ್ಕೆ ನೀಡಲಾಗಿದ್ದ ಶೇ. 5 ರಷ್ಟು ಮೀಸಲಾತಿಗೆ ಕೋರ್ಟ್ ಮಧ್ಯಂತರ ತಡೆ ನೀಡಿರುವುದರಿಂದ ಮೀಸಲಾತಿಯನ್ನು ರದ್ದುಗೊಳಿಸಲಾಗಿದೆ ಎಂದು ತಿಳಿಸಿದೆ.

ಮುಂಬೈ: ಮಹಾರಾಷ್ಟ್ರದ ದೇವೇಂದ್ರ ಫಡ್ನವೀಸ್ ಸರ್ಕಾರ ಬುಧವಾರ ರಾಜ್ಯದ ಮುಸ್ಲಿಮರಿಗೆ ಬಿಗ್ ಶಾಕ್ ನೀಡಿದ್ದು, ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ನೀಡಲಾಗಿದ್ದ ಶೇಕಡಾ 5 ರಷ್ಟು ಮೀಸಲಾತಿಯನ್ನು ಅಧಿಕೃತವಾಗಿ ರದ್ದುಗೊಳಿಸಿದೆ.
ಈ ಸಂಬಂಧ ಮಂಗಳವಾರ ಅಧಿಸೂಚನೆ ಹೊರಡಿಸಿರುವ ಮಹಾರಾಷ್ಟ್ರ ಸರ್ಕಾರ, ಮುಸ್ಲಿಂ ಸಮುದಾಯಕ್ಕೆ ನೀಡಲಾಗಿದ್ದ ಶೇ. 5 ರಷ್ಟು ಮೀಸಲಾತಿಗೆ ಕೋರ್ಟ್ ಮಧ್ಯಂತರ ತಡೆ ನೀಡಿರುವುದರಿಂದ ಮೀಸಲಾತಿಯನ್ನು ರದ್ದುಗೊಳಿಸಲಾಗಿದೆ ಎಂದು ತಿಳಿಸಿದೆ.
10 ವರ್ಷಗಳ ಹಿಂದೆ ಅಂದರೆ 2014 ರಲ್ಲಿ ಕಾಂಗ್ರೆಸ್-ಎನ್‌ಸಿಪಿ ಸರ್ಕಾರ ಅಲ್ಪಸಂಖ್ಯಾತ ಸಮುದಾಯಕ್ಕೆ ಶೇಕಡಾ 5 ರಷ್ಟು ಮೀಸಲಾತಿಯನ್ನು ಘೋಷಿಸಿತು. ಅಲ್ಲದೆ ಈ ಸಂಬಂಧ ಚುನಾವಣೆಗೆ ಮುಂಚಿತವಾಗಿ ಸುಗ್ರೀವಾಜ್ಞೆಯನ್ನು ಹೊರಡಿಸಿತ್ತು. ಆದರೆ 2014 ರ ಮಹಾರಾಷ್ಟ್ರ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಬಿಜೆಪಿ-ಶಿವಸೇನೆ ಮೈತ್ರಿಕೂಟ ಅಧಿಕಾರಕ್ಕೆ ಬಂದ ನಂತರ ಈ ಸುಗ್ರೀವಾಜ್ಞೆಯು ರದ್ದಾಗಿತ್ತು.
ಇದೀಗ ಮಹಾರಾಷ್ಟ್ರ ಸರ್ಕಾರವು 2014 ಮತ್ತು 2015 ರಲ್ಲಿ ಈ ನಿಟ್ಟಿನಲ್ಲಿ ಹೊರಡಿಸಲಾದ ಎಲ್ಲಾ ಆದೇಶಗಳನ್ನು ಈಗ ರದ್ದುಗೊಳಿಸಿದೆ.
"ರಾಜ್ಯ ಸರ್ಕಾರದ ಈ ಕ್ರಮದ ವಿರುದ್ಧ ಈ ಬಗ್ಗೆ ವಿರೋಧ ಪಕ್ಷಗಳು ತೀವ್ರ ವಾಗ್ದಾಳಿ ನಡೆಸಿದ್ದು, "ಬಿಜೆಪಿ ನೇತೃತ್ವದ ಮಹಾರಾಷ್ಟ್ರ ಸರ್ಕಾರವು ಮುಸ್ಲಿಮರಿಗೆ ಶೇಕಡಾ 5 ರಷ್ಟು ಮೀಸಲಾತಿಯನ್ನು ರದ್ದುಗೊಳಿಸುವ ನಿರ್ಧಾರವು ಬಿಜೆಪಿಯ ವೈರಿಗಳು, ಬಿಜೆಪಿಯ ಮುಸ್ಲಿಂ ನಾಯಕರು ಮತ್ತು ಅವರ ಮಿತ್ರಪಕ್ಷಗಳನ್ನು ಗೌರವಿಸುವುದಿಲ್ಲ ಎಂಬುದನ್ನು ಸಾಬೀತುಪಡಿಸುತ್ತದೆ. ಇದು ಬಿಜೆಪಿಯ ಮುಸ್ಲಿಂ ನಾಯಕರು ನ್ಯಾಯ ಪಡೆಯಲು ಅಸಮರ್ಥರಾಗಿದ್ದಾರೆ ಎಂಬುದನ್ನು ಇದು ತೋರಿಸುತ್ತದೆ" ಎಂದು ಎನ್‌ಸಿಪಿ-ಎಸ್‌ಪಿ ರಾಷ್ಟ್ರೀಯ ವಕ್ತಾರ ಕ್ಲೈಡ್ ಕ್ರಾಸ್ಟೊ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



