ದೇಶ

ಬಂಗಾಳ ಕೊಲ್ಲಿಯಲ್ಲಿ ಪ್ರವಾಸಿ ದೋಣಿ ಮುಳುಗಿ ಬೆಂಗಳೂರು ಮಹಿಳೆ ಸಾವು: ನಾಲ್ವರ ರಕ್ಷಣೆ

ತನ್ನ ಪತಿ ಮತ್ತು ಮೂವರು ಮಕ್ಕಳೊಂದಿಗೆ ಖಾಸಗಿ ದೋಣಿಯಲ್ಲಿ ತೆರಳುತ್ತಿದ್ದಾಗ ದುರಂತ ಸಂಭವಿಸಿದೆ. ಪ್ರಯಾಣದ ವೇಳೆ ದೋಣಿ ಮಗುಚಿ ಬಿದ್ದಿದೆ ಎಂದು ಮೂಲಗಳು ತಿಳಿಸಿವೆ.

ಬಂಗಾಳ ಕೊಲ್ಲಿಯಲ್ಲಿ ಪ್ರವಾಸಿ ದೋಣಿ ಮುಳುಗಿ ಬೆಂಗಳೂರು ಮಹಿಳೆ ಸಾವು: ನಾಲ್ವರ ರಕ್ಷಣೆ
ಸಾಂದರ್ಭಿಕ ಚಿತ್ರ
Published On :

ಪುದುಚೇರಿ: ಕೇಂದ್ರಾಡಳಿತ ಪ್ರದೇಶ ಪುದುಚೇರಿಯ ವೀರಂಪಟ್ಟಿನಂ ಬಳಿಯ ಬೀಚ್ ಗೆ ಪ್ರವಾಸಕ್ಕೆಂದು ತೆರಳಿದ್ದ ಬೆಂಗಳೂರಿನ 33 ವರ್ಷದ ಮಹಿಳೆ ಗುರುವಾರ ಬಂಗಾಳ ಕೊಲ್ಲಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮೃತ ಮಹಿಳೆಯನ್ನು ಸೋನಿಯಾ ಎಂದು ಗುರುತಿಸಲಾಗಿದೆ.

ತನ್ನ ಪತಿ ಮತ್ತು ಮೂವರು ಮಕ್ಕಳೊಂದಿಗೆ ಖಾಸಗಿ ದೋಣಿಯಲ್ಲಿ ತೆರಳುತ್ತಿದ್ದಾಗ ದುರಂತ ಸಂಭವಿಸಿದೆ. ಪ್ರಯಾಣದ ವೇಳೆ ದೋಣಿ ಮಗುಚಿ ಬಿದ್ದಿದೆ ಎಂದು ಮೂಲಗಳು ತಿಳಿಸಿವೆ.

ದೋಣಿಯ ಸಿಬ್ಬಂದಿ ಸಹಾಯಕ್ಕಾಗಿ ಕೂಗಿಕೊಂಡಾಗ ಸ್ಥಳೀಯ ಮೀನುಗಾರರು ವಿವಿಧ ದಿಕ್ಕುಗಳಿಂದ ಧಾವಿಸಿ ಕುಟುಂಬದ ಇತರ ಸದಸ್ಯರನ್ನು ರಕ್ಷಿಸಿದ್ದಾರೆ. ಆದರೆ ಘಟನೆಯಲ್ಲಿ ಸೋನಿಯಾ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಉಳಿದ ನಾಲ್ವರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. ಮೀನುಗಾರರು ವೀರಂಪಟ್ಟಿನಂ ವ್ಯಾಪ್ತಿಯಲ್ಲಿ ಬರುವ ಅರಿಯಂಕುಪ್ಪಂ ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಕರಾವಳಿ ಕಾವಲು ಪಡೆಯೊಂದಿಗೆ ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಗಾಯಾಳುಗಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಅಪಾಯದಿಂದ ಪಾರಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.