ದೇಶ

ಅನಿಲ್ ಅಂಬಾನಿಗೆ EDಯಿಂದ ಹೊಸ ಸಮನ್ಸ್ ಜಾರಿ; 2 ಬಾರಿ ಮುಂದೂಡಿಕೆ ಕೋರಿದ ಪತ್ನಿ ಟೀನಾ

ಬಾಲಿವುಡ್ ಮಾಜಿ ನಟಿ, ಅನಿಲ್ ಅಂಬಾನಿ ಪತ್ನಿ ಟೀನಾ ಅಂಬಾನಿ(68) ಅವರಿಗೆ ಫೆಬ್ರವರಿ 17 ರಂದು ವಿಚಾರಣೆಗೆ ಹಾಜರಾಗುವಂತೆ ಕೇಂದ್ರ ತನಿಖಾ ಸಂಸ್ಥೆ ಸೂಚಿಸಿತ್ತು. ಆದರೆ ಅವರು ವಿಚಾರಣೆಗೆ ಹಾಜರಾಗಿಲ್ಲ.

ಅನಿಲ್ ಅಂಬಾನಿಗೆ EDಯಿಂದ ಹೊಸ ಸಮನ್ಸ್ ಜಾರಿ; 2 ಬಾರಿ ಮುಂದೂಡಿಕೆ ಕೋರಿದ ಪತ್ನಿ ಟೀನಾ
ಅನಿಲ್ ಅಂಬಾನಿ
Published On :

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ವಾರ ವಿಚಾರಣೆಗೆ ಹಾಜರಾಗಲು ನಿರಾಕರಿಸಿದ ರಿಲಯನ್ಸ್ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿ ಅವರಿಗೆ ಫೆಬ್ರವರಿ 26 ರಂದು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಹೊಸ ಸಮನ್ಸ್ ಜಾರಿ ಮಾಡಿದೆ ಎಂದು ಅಧಿಕೃತ ಮೂಲಗಳು ಗುರುವಾರ ತಿಳಿಸಿವೆ.

ಬಾಲಿವುಡ್ ಮಾಜಿ ನಟಿ, ಅನಿಲ್ ಅಂಬಾನಿ ಪತ್ನಿ ಟೀನಾ ಅಂಬಾನಿ(68) ಅವರಿಗೆ ಫೆಬ್ರವರಿ 17 ರಂದು ವಿಚಾರಣೆಗೆ ಹಾಜರಾಗುವಂತೆ ಕೇಂದ್ರ ತನಿಖಾ ಸಂಸ್ಥೆ ಸೂಚಿಸಿತ್ತು. ಆದರೆ ಅವರು ವಿಚಾರಣೆಗೆ ಹಾಜರಾಗಿಲ್ಲ.

ಟೀನಾ ಅಂಬಾನಿ ಅವರು ಎರಡು ಬಾರಿ ವಿಚಾರಣೆ ಮುಂದೂಡಿಕೆ ಕೋರಿದ್ದಾರೆ. ಫೆಬ್ರವರಿ 10 ಮತ್ತು ಫೆಬ್ರವರಿ 17 ರಂದು ನಿಗದಿಯಾಗಿದ್ದ ದಿನಾಂಕಗಳಲ್ಲಿ ಅವರು ಇಡಿ ಮುಂದೆ ಹಾಜರಾಗಿಲ್ಲ. ಹೀಗಾಗಿ ಅವರಿಗೂ ಮತ್ತೊಮ್ಮೆ ಸಮನ್ಸ್ ಜಾರಿ ಮಾಡಿ, ಇಡಿ ಹೊಸ ದಿನಾಂಕವನ್ನು ನೀಡಿದೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್‌ಎ) ಅಡಿಯಲ್ಲಿ ಪ್ರತ್ಯೇಕ ಹೇಳಿಕೆಗಳನ್ನು ದಾಖಲಿಸಲು ಇಡಿ ಅಂಬಾನಿ ದಂಪತಿಗೆ ಸಮನ್ಸ್ ನೀಡಿದೆ ಎಂದು ಇಡಿ ಅಧಿಕಾರಿಗಳು ತಿಳಿಸಿದ್ದಾರೆ.

ಆಗಸ್ಟ್ 2025 ರಲ್ಲಿ ಅನಿಲ್ ಅಂಬಾನಿ ಒಮ್ಮೆ ಇಡಿ ಮುಂದೆ ವಿಚಾರಣೆಗೆ ಹಾಜರಾಗಿದ್ದರು. ರಿಲಯನ್ಸ್ ಗ್ರೂಪ್‌ನ ಹಲವು ಕಂಪನಿಗಳು ಮತ್ತು ಅವರ ಬ್ಯಾಂಕ್ ಸಾಲಗಳಿಗೆ ಸಂಬಂಧಿಸಿದ ತನಿಖೆಯ ಭಾಗವಾಗಿ ಅನಿಲ್ ಅಂಬಾನಿಯನ್ನು ಕಳೆದ ವರ್ಷ ಇಡಿ ವಿಚಾರಣೆಗೆ ಒಳಪಡಿಸಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.