ದೇಶ

RSS ಮುಖ್ಯಸ್ಥ ಮೋಹನ್ ಭಾಗವತ್ ಪ್ರಯಾಣಿಸುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ಮೇಲೆ ಉತ್ತರ ಪ್ರದೇಶದಲ್ಲಿ ಕಲ್ಲು ತೂರಾಟ

ಲಖನೌ–ದೆಹಲಿ ವಂದೇ ಭಾರತ್ ರೈಲಿನಲ್ಲಿ ಮೇರಟ್‌ಗೆ ಮರಳುತ್ತಿದ್ದ ವೇಳೆ ಹರ್ಡೋಯಿ ಜಿಲ್ಲೆಯ ಒಂದು ಗ್ರಾಮದಲ್ಲಿ ಈ ಕಲ್ಲು ತೂರಾಟ ನಡೆದಿದೆ.

RSS ಮುಖ್ಯಸ್ಥ ಮೋಹನ್ ಭಾಗವತ್ ಪ್ರಯಾಣಿಸುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ಮೇಲೆ ಉತ್ತರ ಪ್ರದೇಶದಲ್ಲಿ ಕಲ್ಲು ತೂರಾಟ
ವಂದೇ ಭಾರತ್ ರೈಲಿನ ಮೇಲೆ ಕಲ್ಲು ತೂರಾಟ
Published On :

ನವದೆಹಲಿ: ಉತ್ತರ ಪ್ರದೇಶದ ಹರ್ಡೋಯಿ ಜಿಲ್ಲೆಯಲ್ಲಿ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಪ್ರಯಾಣಿಸುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮೇಲೆ ನಿನ್ನೆ ಗುರುವಾರ ಕಲ್ಲು ತೂರಾಟ ನಡೆದಿರುವುದು ವರದಿಯಾಗಿದೆ. ಈ ಘಟನೆಯಲ್ಲಿ ರೈಲಿನ ಸಿ4 ಬೋಗಿಗೆ ಹಾನಿಯಾಗಿದ್ದು, ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

ಲಖನೌ–ದೆಹಲಿ ವಂದೇ ಭಾರತ್ ರೈಲಿನಲ್ಲಿ ಮೇರಟ್‌ಗೆ ಮರಳುತ್ತಿದ್ದ ವೇಳೆ ಹರ್ಡೋಯಿ ಜಿಲ್ಲೆಯ ಒಂದು ಗ್ರಾಮದಲ್ಲಿ ಈ ಕಲ್ಲು ತೂರಾಟ ನಡೆದಿದೆ. ಮೋಹನ್ ಭಾಗವತ್ ಅವರಿಗೆ ಯಾವುದೇ ಗಾಯವಾಗಿಲ್ಲ. ನಿನ್ನೆ ಮಧ್ಯಾಹ್ನ ಸುಮಾರು 3:20ಕ್ಕೆ ಹರ್ಡೋಯಿ ಜಿಲ್ಲೆಯ ಕೌಧಾ ಗ್ರಾಮದ ಸಮೀಪ ಈ ಘಟನೆ ನಡೆದಿದೆ. ಘಟನೆಯಲ್ಲಿ ರೈಲಿನ ಒಂದು ಕಿಟಕಿಯ ಗಾಜು ಒಡೆದಿದೆ.

ಆರ್‌ಪಿಎಫ್ ತನಿಖೆ ಆರಂಭ

ಈ ಪ್ರಕರಣದ ತನಿಖೆಯನ್ನು ಮೇರಟ್‌ನ ರೈಲ್ವೆ ರಕ್ಷಣಾ ಪಡೆ (RPF) ನಡೆಸಲಿದೆ. ತನಿಖೆಗಾಗಿ ವಿಶೇಷ ತಂಡವು ರಾತ್ರಿ ವೇಳೆಗೆ ಮೇರಟ್‌ಗೆ ತಲುಪುವ ನಿರೀಕ್ಷೆಯಿದೆ.

ಮೋಹನ್ ಭಾಗವತ್ ಸಂಪೂರ್ಣ ಸುರಕ್ಷಿತರಾಗಿದ್ದರು. ಅವರು ರಾತ್ರಿ ಸುಮಾರು 9 ಗಂಟೆಗೆ ತೀವ್ರ ಭದ್ರತೆಯ ನಡುವೆ ಮೇರಟ್ ರೈಲು ನಿಲ್ದಾಣದಲ್ಲಿ ಇಳಿದು, ಶತಾಬ್ದಿ ನಗರದಲ್ಲಿರುವ ಮಾಧವ ಕುಂಜ್‌ಗೆ ತೆರಳಿದರು. ಇಂದು ಮತ್ತು ನಾಳೆ ನಡೆಯುವ ಎರಡು ದಿನಗಳ ಸಂವಾದ ಕಾರ್ಯಕ್ರಮದಲ್ಲಿ ಅವರು ಕ್ರೀಡಾಪಟುಗಳು ಮತ್ತು ಬುದ್ಧಿಜೀವಿಗಳೊಂದಿಗೆ ಸಂವಾದ ನಡೆಸಲಿದ್ದಾರೆ.

ಮುಂಬೈ–ಗೋವಾ ವಂದೇ ಭಾರತ್ ರೈಲು ಎಮ್ಮೆಗಳಿಗೆ ಡಿಕ್ಕಿ

ಫೆಬ್ರವರಿ 9ರಂದು ಮಹಾರಾಷ್ಟ್ರದ ಕುಡಾಲ್ ಮತ್ತು ಸಿಂಧುದುರ್ಗ ನಿಲ್ದಾಣಗಳ ಮಧ್ಯೆ ವಂದೇ ಭಾರತ್ ರೈಲು ಎಮ್ಮೆಗಳಿಗೆ ಡಿಕ್ಕಿ ಹೊಡೆದ ಪರಿಣಾಮ, ಮೇಲ್ದಂಡೆ ವಿದ್ಯುತ್ ವ್ಯವಸ್ಥೆಗೆ ಹಾನಿಯಾಗಿದ್ದು, ಮುಂಬೈ–ಗೋವಾ ಮಾರ್ಗದಲ್ಲಿ ರೈಲು ಸಂಚಾರ ಹಲವು ಗಂಟೆಗಳ ಕಾಲ ವ್ಯತ್ಯಯಗೊಂಡಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಘಟನೆ ಕೊಂಕಣ ರೈಲ್ವೆ ಮಾರ್ಗದಲ್ಲಿ ಮುಂಬೈನಿಂದ ಗೋವಾದ ಮಡಗಾಂವ್‌ಗೆ ತೆರಳುತ್ತಿದ್ದ ರೈಲು, ಹಳಿಗೆ ಬಂದಿದ್ದ ಮೂರು ಪಶುಗಳಿಗೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಪೂರೈಕೆ ಪಡೆಯುವ ಮೇಲ್ದಂಡೆ ವ್ಯವಸ್ಥೆಗೆ ಹಾನಿಯಾಗಿದೆ.

ಘಟನೆಯ ಪರಿಣಾಮವಾಗಿ ಆ ವಿಭಾಗದಲ್ಲಿ ಸುಮಾರು 3 ಗಂಟೆಗಳ ಕಾಲ ರೈಲು ಸಂಚಾರ ವ್ಯತ್ಯಯಗೊಂಡಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.