ಅಸ್ಸಾಂನ ಮಾಜಿ ಕಾಂಗ್ರೆಸ್ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿ ಸೇರ್ಪಡೆ
ಫೆಬ್ರವರಿ 16ರಂದು ಬೋರಾ ರಾಜೀನಾಮೆ ನೀಡಿದ್ದು, ಕಾಂಗ್ರೆಸ್ ಹೈಕಮಾಂಡ್ ರಾಜೀನಾಮೆಯನ್ನು ಸ್ವೀಕರಿಸಿರಲಿಲ್ಲ. ಹಿರಿಯ ನಾಯಕರು ಬೋರಾ ನಿವಾಸಕ್ಕೆ ಧಾವಿಸಿದ್ದರು. ರಾಹುಲ್ ಗಾಂಧಿ ಕೂಡಾ ಮಾತನಾಡಿದ್ದರು ಎಂದು ವರದಿಯಾಗಿತ್ತು.

ಅಸ್ಸಾಂ ಕಾಂಗ್ರೆಸ್‌ನ ಮಾಜಿ ಮುಖ್ಯಸ್ಥ ಭೂಪೇನ್ ಕುಮಾರ್ ಬೋರಾ ಭಾನುವಾರ ಆಡಳಿತಾರೂಢ ಬಿಜೆಪಿಗೆ ಸೇರ್ಪಡೆಗೊಂಡಿದ್ದು, ಸದ್ಯ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಅಸ್ಸಾಂ ಬಿಜೆಪಿ ಪ್ರಧಾನ ಕಚೇರಿ ವಾಜಪೇಯಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಬೋರಾ ಅಸ್ಸಾಂ ಬಿಜೆಪಿ ರಾಜ್ಯಧ್ಯಕ್ಷ ದಿಲೀಪ್ ಸೈಕಿಯಾ ಅವರ ಸಮ್ಮುಖದಲ್ಲಿ ಸೇರ್ಪಡೆಗೊಂಡಿದ್ದಾರೆ. ಮಾಜಿ ಕಾಂಗ್ರೆಸ್ ಕಾರ್ಯಕರ್ತ ಸಂಜು ಬೋರಾ ಕೂಡ ಈ ಸಂದರ್ಭದಲ್ಲೇ ಬಿಜೆಪಿ ಸೇರಿದ್ದಾರೆ.
ಫೆಬ್ರವರಿ 16ರಂದು ಬೋರಾ ರಾಜೀನಾಮೆ ನೀಡಿದ್ದು, ಕಾಂಗ್ರೆಸ್ ಹೈಕಮಾಂಡ್ ರಾಜೀನಾಮೆಯನ್ನು ಸ್ವೀಕರಿಸಿರಲಿಲ್ಲ. ಹಿರಿಯ ನಾಯಕರು ಬೋರಾ ನಿವಾಸಕ್ಕೆ ಧಾವಿಸಿದ್ದರು. ರಾಹುಲ್ ಗಾಂಧಿ ಕೂಡಾ ಮಾತನಾಡಿದ್ದರು ಎಂದು ವರದಿಯಾಗಿತ್ತು.
ಇದಾದ ಬಳಿಕ ತಮ್ಮ ನಿರ್ಧಾರವನ್ನು ಮರುಪರಿಶೀಲಿಸಲು ಸಮಯ ಬೇಕು ಎಂದು ಕೇಳಿದ ಬೋರಾ ಮರುದಿನವೇ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ನಿವಾಸಕ್ಕೆ ತೆರಳಿ ಫೆಬ್ರವರಿ 22ರಂದು ಬಿಜೆಪಿಗೆ ಸೇರುವುದಾಗಿ ಘೋಷಿಸಿದ್ದರು.
126 ಸದಸ್ಯ ಬಲದ ಅಸ್ಸಾಂ ವಿಧಾನಸಭೆಯಲ್ಲಿ ಮಾರ್ಚ್-ಏಪ್ರಿಲ್‌ನಲ್ಲಿ ಚುನಾವಣೆ ನಡೆಯಲಿದ್ದು, ಈ ನಡುವೆ ಕಾಂಗ್ರೆಸ್ ನಾಯಕ ಬಿಜೆಪಿ ಸೇರಿರುವುದು ತೀವ್ರ ರಾಜಕೀಯ ಚರ್ಚೆಗೆ ಎಡೆಮಾಡಿಕೊಟ್ಟಿದೆ.
ಈ ವೇಳೆ ಬೋರಾ ವಿರುದ್ಧ ಇರುವ ಕೋಲ್ ಟ್ರೇಡ್ (ಕಲ್ಲಿದ್ದಲು ವ್ಯಾಪಾರ) ಹಗರಣದ ಆರೋಪವೂ ಮುನ್ನೆಲೆಗೆ ಬರುತ್ತಿದೆ. 2025ರ ಏಪ್ರಿಲ್‌ನಲ್ಲಿ ಆಡಿಯೋ ಕ್ಲಿಪ್ ಒಂದು ಹರಿದಾಡಿತ್ತು. ಅದರಲ್ಲಿ ಬೋರಾ ಅವರ ಆಪ್ತನೆನ್ನಲಾದ ವ್ಯಕ್ತಿ ಕಲ್ಲಿದ್ದಲು ವ್ಯಾಪಾರಿ ಬಳಿ ಹಣಕ್ಕೆ ಬೇಡಿಕೆ ಇಟ್ಟಿರುವುದು ತಿಳಿದುಬಂದಿತ್ತು. ಈ ಆರೋಪಗಳನ್ನು ಭೂಪೇನ್ ಬೋರಾ ಸಂಪೂರ್ಣವಾಗಿ ನಿರಾಕರಿಸಿದ್ದು ಅವರೇ ಹತಿಗಾಂವ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



