ದೇಶ

ಪಶ್ಚಿಮ ಬಂಗಾಳದಲ್ಲಿ SIR ಪರಿಶೀಲನೆಗೆ ಜಾರ್ಖಂಡ್, ಒಡಿಶಾದ 200 ನ್ಯಾಯಾಧೀಶರ ನಿಯೋಜನೆ

"ನ್ಯಾಯಾಧೀಶರ ತರಬೇತಿಗಾಗಿ ನಾವು ಎಲ್ಲಾ ವ್ಯವಸ್ಥೆಗಳನ್ನು ಮಾಡುತ್ತೇವೆ" ಎಂದು ಮುಖ್ಯ ನ್ಯಾಯಮೂರ್ತಿ ಪಾಲ್ ಅವರು ಕರೆದಿದ್ದ ಪ್ರಗತಿ ಪರಿಶೀಲನಾ ಸಭೆಯ ನಂತರ ಗುಪ್ತಾ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ SIR ಪರಿಶೀಲನೆಗೆ ಜಾರ್ಖಂಡ್, ಒಡಿಶಾದ 200 ನ್ಯಾಯಾಧೀಶರ ನಿಯೋಜನೆ
ಮತದಾರರ ಪಟ್ಟಿ ಪರಿಷ್ಕರಣೆ — online desk
Published On :

ಕೋಲ್ಕತ್ತಾ: ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್ ಪ್ರಕ್ರಿಯೆಯ ಪರಿಶೀಲನೆಗಾಗಿ ಜಾರ್ಖಂಡ್ ಮತ್ತು ಒಡಿಶಾದಿಂದ ಸುಮಾರು 200 ನ್ಯಾಯಾಧೀಶರು ಶೀಘ್ರದಲ್ಲೇ ಪಶ್ಚಿಮ ಬಂಗಾಳಕ್ಕೆ ಆಗಮಿಸುವ ಸಾಧ್ಯತೆಯಿದೆ ಎಂದು ಚುನಾವಣಾ ಆಯೋಗದ ವಿಶೇಷ ಸಮಗ್ರ ಮತದಾರರ0 ಪಟ್ಟಿ(ಎಸ್ಐಆರ್) ವೀಕ್ಷಕ ಸುಬ್ರತಾ ಗುಪ್ತಾ ಅವರು ಗುರುವಾರ ತಿಳಿಸಿದ್ದಾರೆ.

ಸುಪ್ರೀಂ ಕೋರ್ಟ್, ಕಲ್ಕತ್ತಾ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಸುಜಯ್ ಪಾಲ್ ಅವರಿಗೆ ನೀಡಿದ ಸಲಹೆಯ ಮೇರೆಗೆ ನ್ಯಾಯಾಧೀಶರ ನಿಯೋಜನೆ ಬಗ್ಗೆ ಶೀಘ್ರದಲ್ಲೇ ಚುನಾವಣಾ ಸಮಿತಿಗೆ ತಿಳಿಸಲಾಗುವುದು ಎಂದು ಗುಪ್ತಾ ಹೇಳಿದ್ದಾರೆ.

"ನ್ಯಾಯಾಧೀಶರ ತರಬೇತಿಗಾಗಿ ನಾವು ಎಲ್ಲಾ ವ್ಯವಸ್ಥೆಗಳನ್ನು ಮಾಡುತ್ತೇವೆ" ಎಂದು ಮುಖ್ಯ ನ್ಯಾಯಮೂರ್ತಿ ಪಾಲ್ ಅವರು ಕರೆದಿದ್ದ ಪ್ರಗತಿ ಪರಿಶೀಲನಾ ಸಭೆಯ ನಂತರ ಗುಪ್ತಾ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಫೆಬ್ರವರಿ 24 ರಂದು ಸುಪ್ರೀಂ ಕೋರ್ಟ್ ಕಲ್ಕತ್ತಾ ಹೈಕೋರ್ಟ್ ಮುಖ್ಯ ನ್ಯಾಯಾಧೀಶರಿಗೆ ಸಿವಿಲ್ ನ್ಯಾಯಾಧೀಶರನ್ನು ನಿಯೋಜಿಸಲು ಮತ್ತು ನೆರೆಯ ಜಾರ್ಖಂಡ್ ಮತ್ತು ಒಡಿಶಾದಿಂದ ಜಿಲ್ಲಾ ನ್ಯಾಯಾಧೀಶರನ್ನು ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(SIR)ಯಲ್ಲಿ 80 ಲಕ್ಷ ಅರ್ಜಿಗಳು ಮತ್ತು ಆಕ್ಷೇಪಣೆಗಳನ್ನು ಪರಿಶೀಲಿಸಲು ಅನುಮತಿ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.