ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಕೋರ್ಟ್ ಸೂಚನೆ
ಆದೇಶವನ್ನು ಅನುಸರಿಸುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅಧಿಕಾರಿಗಳಿಗೆ ನಿರ್ದೇಶಿಸಿದ ನ್ಯಾಯಾಲಯ, ಯಾವುದೇ ರೂಪದಲ್ಲಿ ತನ್ನ ನಿರ್ದೇಶನಗಳನ್ನು ಧಿಕ್ಕರಿಸಿದರೆ "ಗಂಭೀರ ಕ್ರಮ" ಎದುರಿಸಬೇಕಾದೀತು ಎಂದು ಎಚ್ಚರಿಕೆ ನೀಡಿದೆ.

ನವದೆಹಲಿ: ನ್ಯಾಯಾಂಗದಲ್ಲಿ ಭ್ರಷ್ಟಾಚಾರ ಪಾಠ ಇರುವ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (NCERT) ಪ್ರಕಟಿಸಿದ 8 ನೇ ತರಗತಿಯ ಪಠ್ಯಪುಸ್ತಕವನ್ನು ಸರ್ವೋಚ್ಚ ನ್ಯಾಯಾಲಯ ಗುರುವಾರ ಸಂಪೂರ್ಣ ಬ್ಯಾನ್ ಮಾಡಿದೆ. ಅದರ ಎಲ್ಲಾ ಪ್ರತಿಗಳನ್ನು ವಶಪಡಿಸಿಕೊಳ್ಳಲು ಮತ್ತು ಅದರ ಡಿಜಿಟಲ್ ಆವೃತ್ತಿಗಳನ್ನು ತಕ್ಷಣವೇ ತೆಗೆದುಹಾಕುವಂತೆ ಆದೇಶಿಸಿದೆ.
ಆದೇಶವನ್ನು ಅನುಸರಿಸುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅಧಿಕಾರಿಗಳಿಗೆ ನಿರ್ದೇಶಿಸಿದ ನ್ಯಾಯಾಲಯ, ಯಾವುದೇ ರೂಪದಲ್ಲಿ ತನ್ನ ನಿರ್ದೇಶನಗಳನ್ನು ಧಿಕ್ಕರಿಸಿದರೆ "ಗಂಭೀರ ಕ್ರಮ" ಎದುರಿಸಬೇಕಾದೀತು ಎಂದು ಎಚ್ಚರಿಕೆ ನೀಡಿದೆ.
ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಸುಪ್ರೀಂ ಕೋರ್ಟ್‌ನ ತ್ರಿಸದಸ್ಯ ಪೀಠವು ಎನ್‌ಸಿಇಆರ್‌ಟಿ ನಿರ್ದೇಶಕರು ಮತ್ತು ಶಾಲಾ ಶಿಕ್ಷಣ ಕಾರ್ಯದರ್ಶಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದ್ದು, ಅಧ್ಯಾಯ ಸೇರ್ಪಡೆಗೆ ಕಾರಣರಾದವರ ವಿರುದ್ಧ ಏಕೆ ಕ್ರಮ ತೆಗೆದುಕೊಂಡಿಲ್ಲ ಎಂಬುದರ ಬಗ್ಗೆ ವಿವರಿಸುವಂತೆ ಕೇಳಿದೆ.
ಯಾರು ಜವಾಬ್ದಾರರು ಎಂಬುದನ್ನು ಕಂಡುಹಿಡಿಯುವುದು ನನ್ನ ಕರ್ತವ್ಯ. ತಪಿತಸ್ಥರು ಹೊಣೆ ಹೊರಬೇಕು ಎಂದುವಿಚಾರಣೆಯ ಸಂದರ್ಭದಲ್ಲಿ ಮುಖ್ಯ ನ್ಯಾಯಮೂರ್ತಿ ಹೇಳಿದರು. ಅಧ್ಯಾಯದ ವಿಷಯಗಳ ಬಗ್ಗೆ ಮತ್ತು ನ್ಯಾಯಾಂಗದ ಸಾರ್ವಜನಿಕ ಗ್ರಹಿಕೆಯ ಮೇಲೆ ಅದರ ಸಂಭಾವ್ಯ ಪ್ರಭಾವದ ಬಗ್ಗೆ ಅವರು ಗಂಭೀರ ಕಾಳಜಿಯನ್ನು ವ್ಯಕ್ತಪಡಿಸಿದರು. ನ್ಯಾಯಾಂಗವನ್ನು ದೂಷಿಸುವ ಮತ್ತು ಸಾಂಸ್ಥಿಕ ಅಧಿಕಾರವನ್ನು ದುರ್ಬಲಗೊಳಿಸುವ ಗುರಿಯನ್ನು ಹೊಂದಿರುವ ಯೋಜಿತ ಪಿತೂರಿಯಂತೆ ತೋರುತ್ತಿದೆ ಎಂದು ಅವರು ಹೇಳಿದರು.
ಸಾಂಸ್ಥಿಕ ಅಧಿಕಾರವನ್ನು ಹಾಳುಮಾಡಲು ಮತ್ತು ನ್ಯಾಯಾಂಗದ ಘನತೆಗೆ ಚ್ಯುತಿ ತರಲು ಮಾಡಿದ ಪ್ರಯತ್ನದಂತೆ ತೋರುತ್ತಿದೆ. ಇದನ್ನು ತಡೆಯದೆ ಹೋದರೆ, ಸಾರ್ವಜನಿಕರು ಹಾಗೂ ಯುವ ಜನತೆಯ ಮನಸ್ಸಿನಲ್ಲಿ ನ್ಯಾಯಾಂಗ ಕಚೇರಿಯ ಪಾವಿತ್ರ್ಯತೆಯನ್ನು ಕಳೆದುಕೊಳ್ಳುತ್ತದೆ ಎಂದು ಮುಖ್ಯ ನ್ಯಾಯಾಧೀಶರು ಅಭಿಪ್ರಾಯಪಟ್ಟಿದ್ದಾರೆ.

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್ಸೈಟ್ನಿಂದ ಪಠ್ಯಪುಸ್ತಕ ತೆಗೆದ NCERT
ಈ ಮಧ್ಯೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಶಿಕ್ಷಣ ಸಚಿವಾಲಯದ ಪರವಾಗಿ ಬೇಷರತ್ ಮತ್ತು ಅನರ್ಹ ಕ್ಷಮೆಯಾಚಿಸಿದರು. ಆದಾಗ್ಯೂ, ಎನ್‌ಸಿಇಆರ್‌ಟಿಯ ಅಧಿಕೃತ ಸಂವಹನವು ಯಾವುದೇ ಸ್ಪಷ್ಟ ಕ್ಷಮೆಯಾಚನೆಯನ್ನು ಹೊಂದಿಲ್ಲ ಮತ್ತು ಸಮರ್ಥಿಸುವಂತಿದೆ ಎಂದು ಹೇಳಿದ ನ್ಯಾಯಾಲಯ, ಅಧ್ಯಾಯವನ್ನು ಅನುಮೋದಿಸಲು ಮತ್ತು ಪ್ರಕಟಿಸಲು ಕಾರಣರಾದವರನ್ನು ಗುರುತಿಸಲು ತನಿಖೆಗೆ ಆದೇಶಿಸಲು ಒಲವು ತೋರುತ್ತಿದೆ ಎಂದು ಪೀಠ ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


