ದೇಶ

NCERT ಪಠ್ಯಪುಸ್ತಕ ವಿವಾದ: ನಾವು ನ್ಯಾಯಾಂಗವನ್ನು ಗೌರವಿಸುತ್ತೇವೆ- ಬಿಜೆಪಿ

ನ್ಯಾಯಾಂಗದಲ್ಲಿನ ಭ್ರಷ್ಟಾಚಾರದ ಬಗ್ಗೆ ಪಾಠ ಹೊಂದಿರುವ 8ನೇ ತರಗತಿಯ NCERT ಪುಸ್ತಕವನ್ನು ಸುಪ್ರೀಂ ಕೋರ್ಟ್ ಸಂಪೂರ್ಣ ನಿಷೇಧ ಹೇರಿದೆ.

NCERT ಪಠ್ಯಪುಸ್ತಕ ವಿವಾದ: ನಾವು ನ್ಯಾಯಾಂಗವನ್ನು ಗೌರವಿಸುತ್ತೇವೆ- ಬಿಜೆಪಿ
ಸುಪ್ರೀಂ ಕೋರ್ಟ್
Published On :

ನವದೆಹಲಿ: NCERT ಪಠ್ಯಪುಸ್ತಕದಲ್ಲಿ ವಿವಾದಾತ್ಮಕ ನ್ಯಾಯಾಂಗದಲ್ಲಿ ಭ್ರಷ್ಟಾಚಾರ ಪಾಠ ಒಂದು "ಸೂಕ್ಷ್ಮ ವಿಷಯ" ಎಂದಿರುವ ಬಿಜೆಪಿ, ನಾವು ದೇಶದ ನ್ಯಾಯಾಂಗವನ್ನು ಗೌರವಿಸುತ್ತೇವೆ ಮತ್ತು ಅದರ ನಿಷ್ಪಕ್ಷಪಾತ ಕಾರ್ಯನಿರ್ವಹಣೆಯ ಬಗ್ಗೆ ಹೆಮ್ಮೆಪಡುತ್ತೇವೆ ಎಂದು ಗುರುವಾರ ಹೇಳಿದೆ.

ನ್ಯಾಯಾಂಗದಲ್ಲಿನ ಭ್ರಷ್ಟಾಚಾರದ ಬಗ್ಗೆ ಪಾಠ ಹೊಂದಿರುವ 8ನೇ ತರಗತಿಯ NCERT ಪುಸ್ತಕವನ್ನು ಸುಪ್ರೀಂ ಕೋರ್ಟ್ ಸಂಪೂರ್ಣ ನಿಷೇಧ ಹೇರಿದ ನಂತರ ಮತ್ತು ಅದರ ಎಲ್ಲಾ ಭೌತಿಕ ಪ್ರತಿಗಳನ್ನು ವಶಪಡಿಸಿಕೊಳ್ಳಲು ಹಾಗೂ ಅದರ ಡಿಜಿಟಲ್ ರೂಪಗಳನ್ನು ತೆಗೆದುಹಾಕಲು ಆದೇಶಿಸಿದ ನಂತರ ಬಿಜೆಪಿ ಈ ಹೇಳಿಕೆ ನೀಡಿದೆ.

ಈ ವಿಷಯದ ಬಗ್ಗೆ ಪ್ರತಿಕ್ರಿಯಿಸಿದ, ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬಿತ್ ಪಾತ್ರ, "NCERT ವಿಷಯಕ್ಕೆ ಸಂಬಂಧಿಸಿದಂತೆ, ಇದು ಸೂಕ್ಷ್ಮ ವಿಷಯವಾಗಿದೆ. ಭಾರತದಲ್ಲಿ ಮಾತ್ರವಲ್ಲದೆ ಇಡೀ ಜಗತ್ತಿನಲ್ಲಿಯೇ ಭಾರತೀಯ ನ್ಯಾಯಾಂಗದಷ್ಟು ಸ್ವತಂತ್ರ ಮತ್ತು ಅರ್ಹವಾದ ಬೇರೆ ಯಾವುದೇ ವ್ಯವಸ್ಥೆ ಇಲ್ಲ ಎಂದು ಪಕ್ಷದ ನಿಲುವನ್ನು ನಾನು ಮಂಡಿಸಲು ಬಯಸುತ್ತೇನೆ" ಎಂದಿದ್ದಾರೆ.

"ಭಾರತೀಯ ನ್ಯಾಯಾಂಗದ ಬಗ್ಗೆ ನಮಗೆಲ್ಲರಿಗೂ ಅಪಾರ ಗೌರವ ಮತ್ತು ಹೆಮ್ಮೆಯ ಭಾವನೆ ಇದೆ. ಇದು ಎಲ್ಲರ ಹೃದಯದಲ್ಲಿರುವ ಭಾವನೆ" ಎಂದು ಪಾತ್ರ ಅವರು, ಬಿಜೆಪಿ ಪ್ರಧಾನ ಕಚೇರಿಯಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಬುಧವಾರ ಸುಪ್ರೀಂ ಕೋರ್ಟ್‌ನಲ್ಲಿ ನಡೆದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಸರ್ಕಾರ ನ್ಯಾಯಾಂಗದೊಂದಿಗಿದೆ ಮತ್ತು ಅದರ ಪರವಾಗಿ ನಿಲ್ಲುತ್ತದೆ ಎಂದು ಪ್ರತಿಪಾದಿಸಿದ್ದಾರೆ ಎಂದು ಪತ್ರಾ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.