ದೇಶ

Delhi excise policy case: ಅರವಿಂದ್ ಕೇಜ್ರಿವಾಲ್-ಮನೀಶ್ ಸಿಸೋಡಿಯಾ ವಿರುದ್ಧ ಕೇಸು ಖುಲಾಸೆ; Video

ಈ ಆದೇಶವನ್ನು ವಿಶೇಷ ನ್ಯಾಯಾಧೀಶ ಜಿತೇಂದ್ರ ಸಿಂಗ್ ಅವರು ಹೊರಡಿಸಿದ್ದು, ಆರೋಪಿಗಳ ವಿರುದ್ಧ ಅಭಿಯೋಜನಾ ಸಂಸ್ಥೆಯ ಸಾಕ್ಷ್ಯಗಳಿಗೆ ಬೆಂಬಲವಾಗುವ ಯಾವುದೇ ವಸ್ತುನಿಷ್ಠ ಸಾಕ್ಷ್ಯ ದೊರಕಿಲ್ಲವೆಂದು ನ್ಯಾಯಾಲಯ ಹೇಳಿದೆ.

Delhi excise policy case: ಅರವಿಂದ್ ಕೇಜ್ರಿವಾಲ್-ಮನೀಶ್ ಸಿಸೋಡಿಯಾ ವಿರುದ್ಧ ಕೇಸು ಖುಲಾಸೆ; Video
ಮನೀಶ್ ಸಿಸೋಡಿಯಾ ಮತ್ತು ಅರವಿಂದ್ ಕೇಜ್ರಿವಾಲ್
Published On :

ಶುಕ್ರವಾರ ದೆಹಲಿ ನ್ಯಾಯಾಲಯವು ಸಿಬಿಐಯ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೇರಿದಂತೆ ಒಟ್ಟು 23 ಮಂದಿಗೆ ಕೇಸಿನಿಂದ ಖುಲಾಸೆಗೊಳಿಸಲಾಗಿದೆ.

ಈ ಆದೇಶವನ್ನು ವಿಶೇಷ ನ್ಯಾಯಾಧೀಶ ಜಿತೇಂದ್ರ ಸಿಂಗ್ ಅವರು ಹೊರಡಿಸಿದ್ದು, ಆರೋಪಿಗಳ ವಿರುದ್ಧ ಅಭಿಯೋಜನಾ ಸಂಸ್ಥೆಯ ಸಾಕ್ಷ್ಯಗಳಿಗೆ ಬೆಂಬಲವಾಗುವ ಯಾವುದೇ ವಸ್ತುನಿಷ್ಠ ಸಾಕ್ಷ್ಯ ದೊರಕಿಲ್ಲವೆಂದು ಹೇಳಿದರು.

ದೆಹಲಿಯ ಅಬಕಾರಿ ನೀತಿ ಸಂಬಂಧಿತ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಬಿಐ ಸಲ್ಲಿಸಿದ್ದ ಆರೋಪಪಟ್ಟಿಯನ್ನು ಪರಿಗಣಿಸಲು ನ್ಯಾಯಾಲಯ ನಿರಾಕರಿಸಿತು.

ದೆಹಲಿಯ ಹಿಂದಿನ ಆಪ್ ಸರ್ಕಾರದ ಈಗಿನ ಬಿಜೆಪಿ ಸರ್ಕಾರ ರದ್ದುಪಡಿಸಿರುವ ಅಬಕಾರಿ ನೀತಿಯ ಜಾರಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪಗಳ ಕುರಿತು ಸಿಬಿಐ ತನಿಖೆ ನಡೆಸಿ ಕೇಜ್ರಿವಾಲ್ ಮತ್ತು ಸಿಸೋಡಿಯಾ ಬಂಧಿತರಾಗಿದ್ದರು.

ದೆಹಲಿ ಅಬಕಾರಿ ನೀತಿ ಪ್ರಕರಣದ ತನಿಖೆ ವೇಳೆ ಫೆಡರಲ್ ಸಂಸ್ಥೆಯ ಸಮನ್ಸ್‌ಗಳನ್ನು ತಪ್ಪಿಸಿಕೊಂಡಿದ್ದಾರೆ ಎಂಬ ಆರೋಪದ ಎರಡು ಪ್ರಕರಣಗಳಲ್ಲಿ, ಜಾರಿ ನಿರ್ದೇಶನಾಲಯದ (ED) ಅರ್ಜಿಗಳನ್ನು ದೆಹಲಿ ನ್ಯಾಯಾಲಯವು ಜನವರಿಯಲ್ಲಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಕೇಸನ್ನು ವಜಾಗೊಳಿಸಿತ್ತು.

ಅಬಕಾರಿ ನೀತಿ ಪ್ರಕರಣದಲ್ಲಿ ತೀರ್ಪು ಬಂದ ಕೆಲವೇ ಕ್ಷಣಗಳಲ್ಲಿ ಅರವಿಂದ್ ಕೇಜ್ರಿವಾಲ್ ಅವರು ಮಾಧ್ಯಮಗಳ ಮುಂದೆ ಭಾವುಕರಾಗಿ ಕಣ್ಣೀರು ಹಾಕಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.