ಅತ್ಯಾಚಾರ-ಕೊಲೆ ಪ್ರಕರಣ: ಡೇರಾ ಮುಖ್ಯಸ್ಥ ಗುರ್ಮಿತ್ ರಾಮ್ ರಹೀಮ್ ಸಿಂಗ್ ಗೆ ಮತ್ತೆ 40 ದಿನ ಪೆರೋಲ್
ತಮ್ಮ ಇಬ್ಬರು ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 20 ವರ್ಷಗಳ ಜೈಲು ಶಿಕ್ಷೆ ಅನುಭವಿಸುತ್ತಿರುವ ಸಿರ್ಸಾ ಮೂಲದ ರಾಮ್ ರಹೀಮ್ ಸಿಂಗ್ ಹರಿಯಾಣದ ರೋಹ್ಟಕ್‌ನ ಸುನಾರಿಯಾ ಜೈಲು ವಾಸ ಅನುಭವಿಸುತ್ತಿದ್ದಾರೆ.

ಚಂಡೀಗಢ: ಅತ್ಯಾಚಾರ, ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ಡೇರಾ ಸಚ್ಚಾ ಸೌಧದ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್'ಗೆ ಮತ್ತೆ 40 ದಿನಗಳ ಪೆರೋಲ್ ನೀಡಲಾಗಿದೆ.
ಈ ಮೂಲಕ ಗುರ್ಮಿತ್ ಅವರಿಗೆ 15ನೇ ಬಾರಿ ಪೆರೋಲ್ ನೀಡಲಾಗಿದೆ. ರೋಹ್ಟಕ್ ವಿಭಾಗೀಯ ಆಯುಕ್ತರು ಗುರ್ಮೀತ್ ರಾಮ್ ರಹೀಮ್ ಸಿಂಗ್'ಗೆ 40 ದಿನಗಳ ಪೆರೋಲ್ ಅನ್ನು ಅನುಮೋದಿಸಿದ್ದಾರೆ. ಭಾನುವಾರ ಅಥವಾ ಸೋಮವಾರ ಅವರನ್ನು ಬಿಡುಗಡೆ ಮಾಡುವ ಸಾಧ್ಯತೆಯಿದೆ.
ತಮ್ಮ ಇಬ್ಬರು ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 20 ವರ್ಷಗಳ ಜೈಲು ಶಿಕ್ಷೆ ಅನುಭವಿಸುತ್ತಿರುವ ಸಿರ್ಸಾ ಮೂಲದ ರಾಮ್ ರಹೀಮ್ ಸಿಂಗ್ ಹರಿಯಾಣದ ರೋಹ್ಟಕ್‌ನ ಸುನಾರಿಯಾ ಜೈಲು ವಾಸ ಅನುಭವಿಸುತ್ತಿದ್ದಾರೆ.
ಇದಲ್ಲದೆ, ಪತ್ರಕರ್ತ ರಾಮ್ ಚಂದರ್ ಛತ್ರಪತಿ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆಯೂ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ಇದರ ಶಿಕ್ಷೆ ಪ್ರಸ್ತುತ ಶಿಕ್ಷೆಯ ಅವಧಿ ಮುಗಿದ ನಂತರ ಪ್ರಾರಂಭವಾಗಲಿದೆ.
ಸಿರ್ಸಾ ಡೇರಾ ಸಚ್ಚಾ ಸೌದಾ ಪಂಥವು ಹರಿಯಾಣ, ಪಂಜಾಬ್, ರಾಜಸ್ಥಾನ ಮತ್ತು ಇತರ ರಾಜ್ಯಗಳಲ್ಲಿ ಅಪಾರ ಸಂಖ್ಯೆಯ ಅನುಯಾಯಿಗಳನ್ನು ಹೊಂದಿದೆ. ಹರಿಯಾಣದ ಸಿರ್ಸಾ, ಫತೇಹಾಬಾದ್, ಕುರುಕ್ಷೇತ್ರ, ಕೈತಾಲ್ ಮತ್ತು ಹಿಸಾರ್ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಡೇರಾ ಸೌದಾ ಪಂಥವು ಸಾಕಷ್ಟು ಸಂಖ್ಯೆಯ ಅನುಯಾಯಿಗಳನ್ನು ಹೊಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



