ದೇಶದ್ರೋಹ ಆರೋಪ: ಸುಪ್ರೀಂ ಕೋರ್ಟ್ ಜಾಮೀನು ನಿರಾಕರಣೆ ಕುರಿತು ಉಮರ್ ಖಾಲಿದ್ ಮೊದಲ ಪ್ರತಿಕ್ರಿಯೆ..
ಮೇಲ್ನೋಟಕ್ಕೆ ಉಮರ್ ಖಾಲಿದ್ ವಿರುದ್ಧ ಆರೋಪ ನಿಜ ಎಂದು ತೋರುತ್ತದೆ ಎಂದಿರುವ ನ್ಯಾಯಾಲಯ, ಅವರ ವಿರುದ್ಧ ಕಾನೂನುಬಾಹಿರ ಚಟುವಟಿಕೆ (ತಡೆಗಟ್ಟುವಿಕೆ) ಕಾಯ್ದೆಯಡಿಯಲ್ಲಿ ಪ್ರಕರಣವಿದೆ ಎಂದು ಹೇಳಿದೆ. 2020ರ ಸೆಪ್ಟೆಂಬರ್ 13 ರಿಂದಲೂ ಖಾಲಿದ್ ಜೈಲಿನಲ್ಲಿದ್ದಾರೆ.

ನವದೆಹಲಿ: 2020ರ ದೆಹಲಿ ಗಲಭೆ ಸಂಚಿನ ಆರೋಪದಲ್ಲಿ ಜೆಎನ್‌ಯು ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ಮತ್ತು ಶರ್ಜೀಲ್ ಇಮಾಮ್‌ಗೆ ಜಾಮೀನು ನೀಡಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ.
ಮೇಲ್ನೋಟಕ್ಕೆ ಅವರ ವಿರುದ್ಧ ಆರೋಪ ನಿಜ ಎಂದು ತೋರುತ್ತದೆ ಎಂದಿರುವ ನ್ಯಾಯಾಲಯ, ಅವರ ವಿರುದ್ಧ ಕಾನೂನುಬಾಹಿರ ಚಟುವಟಿಕೆ (ತಡೆಗಟ್ಟುವಿಕೆ) ಕಾಯ್ದೆಯಡಿಯಲ್ಲಿ ಪ್ರಕರಣವಿದೆ ಎಂದು ಹೇಳಿದೆ. 2020ರ ಸೆಪ್ಟೆಂಬರ್ 13 ರಿಂದಲೂ ಖಾಲಿದ್ ಜೈಲಿನಲ್ಲಿದ್ದಾರೆ.
ಇನ್ನೂ ಸುಪ್ರೀಂಕೋರ್ಟ್ ತೀರ್ಪು ಕುರಿತು ಪ್ರತಿಕ್ರಿಯಿಸಿರುವ ಖಾಲಿದ್, ಇತರರಿಗೆ ಜಾಮೀನು ದೊರಕಿರುವುದರಿಂದ ನನಗೆ ಸಂತೋಷವಾಗಿದೆ ಎಂದು ಹೇಳಿದ್ದಾರೆ. ಭೇಟಿಗಾಗಿ ನಾಳೆ ಬರುತ್ತೇನೆ ಎಂದು ಲಹಿರಿ ಪ್ರತಿಕ್ರಿಸಿದ್ದು, Good good aa jana, Ab yahi zindagi hai ಎಂದು ಖಾಲಿದ್ ಹೇಳಿದ್ದಾರೆ.
ಉಮರ್ ಜೊತೆಗಿನ ಮಾತುಕತೆಯ ವಿವರಗಳನ್ನು ಅವರ ಸಹಚರ ಬನೊಜೋತ್ಸಾ ಲಹಿರಿ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ. ಇದೇ ಪ್ರಕರಣದಲ್ಲಿ ಇತರ ಐವರು ಸಹ ಆರೋಪಿಗಳಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ನ್ಯಾಯಮೂರ್ತಿಗಳಾದ ಅರವಿಂದ್ ಕುಮಾರ್ ಮತ್ತು ಎನ್ ವಿ ಅಂಜಾರಿಯಾ ಅವರ ಪೀಠವು ಈ ಪ್ರಕರಣದಲ್ಲಿ ಇತರ ಆರೋಪಿಗಳಾದ ಗುಲ್ಫಿಶಾ ಫಾತಿಮಾ, ಮೀರನ್ ಹೈದರ್, ಶಿಫಾ ಉರ್ ರೆಹಮಾನ್, ಮೊಹಮ್ಮದ್ ಸಲೀಮ್ ಖಾನ್ ಮತ್ತು ಶಾದಾಬ್ ಅಹ್ಮದ್ ಅವರಿಗೆ ಜಾಮೀನು ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



